ಭಾರತ-ಬಾಂಗ್ಲಾದೇಶ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಲಾಗುತ್ತದೆ. ಮೊದಲ ಟೆಸ್ಟ್ ಪಂದ್ಯವು ಚೆನ್ನೈನಲ್ಲಿ ನಡೆದರೆ, ಎರಡನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27 ರಿಂದ ಕಾನ್ಪುರದಲ್ಲಿ ಆರಂಭವಾಗಲಿದೆ.
ಮೊದಲ ಪಂದ್ಯವು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಜರುಗಲಿದೆ. ಬೆಳಿಗ್ಗೆ 9.30 ರಿಂದ ಶುರುವಾಗಲಿರುವ ಈ ಪಂದ್ಯದ ಮೊದಲ ಸೆಷನ್ ಮುಗಿಯುವುದು 11.30 ಕ್ಕೆ. ಭೋಜನಾ ವಿರಾಮದ ಬಳಿಕ 12.10 ರಿಂದ ಎರಡನೇ ಸೆಷನ್ ಆರಂಭವಾಗಲಿದೆ.
ಈ ಸುದ್ದಿ ಓದಿದ್ದೀರಾ? ಕ್ರಿಸ್ಟಿಯಾನೊ ರೊನಾಲ್ಡೊ ಎಂಬ ದಾಖಲೆಗಳ ದಿಗ್ಗಜ; 900 ಗೋಲುಗಳ ಸರದಾರ
ಮಧ್ಯಾಹ್ನ 12.10 ರಿಂದ 2.10ರವರೆಗೆ ದ್ವಿತೀಯ ಸೆಷನ್ ನಡೆಯಲಿದ್ದು, ಆ ಬಳಿಕ 20 ನಿಮಿಷಗಳ ಟೀ ಬ್ರೇಕ್ ನೀಡಲಾಗುತ್ತದೆ. 2.30 ರಿಂದ ಆರಂಭವಾಗಲಿರುವ ಮೂರನೇ ಸೆಷನ್ 4.30ರವರೆಗೆ ಮುಂದುವರೆಯಲಿದೆ. ಇನ್ನು ಈ ಮೂರು ಸೆಷನ್ಗಳಲ್ಲಿ ಒಟ್ಟು 90 ಓವರ್ಗಳನ್ನು ಆಡಲಾಗುತ್ತದೆ. ಅಂದರೆ 7 ಗಂಟೆಗಳ ಮೊದಲ ದಿನದಾಟದಲ್ಲಿ 60 ನಿಮಿಷಗಳ ವಿರಾಮ ಇರಲಿದೆ.
ಸೆಷನ್ ಸಮಯ:
ಮೊದಲ ಸೆಷನ್ : ಬೆಳಿಗ್ಗೆ 9.30 ರಿಂದ 11.30.
ದ್ವಿತೀಯ ಸೆಷನ್ : ಮಧ್ಯಾಹ್ನ 12.10 ರಿಂದ 2.10.
ತೃತೀಯ ಸೆಷನ್ : ಮಧ್ಯಾಹ್ನ 2.30 ರಿಂದ ಸಂಜೆ 4.30
ಭಾರತವೇ ಬಲಿಷ್ಠ
ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಟೆಸ್ಟ್ನಲ್ಲಿ ಕೇವಲ 13 ಪಂದ್ಯಗಳಲ್ಲಿ ಮಾತ್ರ ಮುಖಾಮುಖಿಯಾಗಿವೆ. ಟೀಮ್ ಇಂಡಿಯಾ 11 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಬಾಂಗ್ಲಾದೇಶ ತಂಡ ಒಮ್ಮೆಯೂ ಭಾರತದ ವಿರುದ್ಧ ಟೆಸ್ಟ್ ಪಂದ್ಯ ಗೆದ್ದಿಲ್ಲ. ಇದಾಗ್ಯೂ 2 ಪಂದ್ಯಗಳಲ್ಲಿ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಅಂಕಿ ಅಂಶಗಳ ಪ್ರಕಾರ ಭಾರತ ತಂಡವೇ ಮೇಲುಗೈ ಹೊಂದಿದೆ. ಅದರಲ್ಲೂ ತವರಿನಲ್ಲಿ ಸತತ 17 ಟೆಸ್ಟ್ ಸರಣಿಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈ ಬಾರಿ ಸಹ ಸರಣಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.
ಉಭಯ ತಂಡಗಳು:
ಭಾರತ:
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ಕೆ ಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್.
ಬಾಂಗ್ಲಾದೇಶ:
ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಮಹಮ್ಮದುಲ್ ಹಸನ್ ಜಾಯ್, ಝಾಕಿರ್ ಹಸನ್, ಶದ್ಮಾನ್ ಇಸ್ಲಾಂ, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟ್ಟನ್ ಕುಮಾರ್ ದಾಸ್, ಮೆಹಿದಿ ಹಸನ್ ಮಿರಾಝ್, ತೈಜುಲ್ ಇಸ್ಲಾಂ, ನಯೀಮ್ ಹಸನ್, ನಹಿದ್ ರಾಣಾ, ಹಸನ್ ಮಹಮ್ಮದ್, ತಸ್ಕಿನ್ ಅಹ್ಮದ್, ಸೈಯದ್ ಖಾಲಿದ್ ಅಹ್ಮದ್, ಜಾಕರ್ ಅಲಿ.
