ಬಹುನಿರೀಕ್ಷಿತ ಏಕದಿನ ವಿಶ್ವಕಪ್ನ ಫೈನಲ್ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಚಾಂಪಿಯನ್ ಪಟ್ಟಕ್ಕಾಗಿ ಪಂದ್ಯ ನಡೆಯಲಿದೆ.
ದೇಶಾದ್ಯಂತ ಹಬ್ಬದ ವಾತಾವರಣ ಶನಿವಾರದಿಂದಲೇ ಶುರುವಾಗಿದೆ. ಈ ನಡುವೆ ರಾಜ್ಯದ ಕಾಂಗ್ರೆಸ್ ಸರ್ಕಾರವು, ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್‌ಇಡಿ ಪರದೆಯಲ್ಲಿ ಕ್ರಿಕೆಟ್ ಪ್ರಿಯರಿಗಾಗಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಿರುವುದಾಗಿ ಆದೇಶ ಹೊರಡಿಸಿದೆ.
📸📸 Finale ready! ⏳
We’re less than 24 hours away from the #CWC23 summit clash 🏟️#TeamIndia | #MenInBlue | #Final | #INDvAUS pic.twitter.com/vpd87iSZfG
— BCCI (@BCCI) November 18, 2023
ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, “ನಾಡಿನ ಸಮಸ್ತ ಕ್ರಿಕೆಟ್ ಪ್ರಿಯರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ನಾಳಿನ ವಿಶ್ವಕಪ್ ಪಂದ್ಯಾಕೂಟದ ಫೈನಲ್ ಪಂದ್ಯವನ್ನು ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಕ್ರಿಕೆಟ್ ಅಭಿಮಾನಿಗಳು ಈ ಅವಕಾಶವನ್ನು ಬಳಸಿಕೊಂಡು ಫೈನಲ್ ಪಂದ್ಯದ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಬೇಕೆಂದು ವಿನಂತಿಸುತ್ತೇನೆ’ ಎಂದು ತಿಳಿಸಿದ್ದಾರೆ.
ನಾಡಿನ ಸಮಸ್ತ ಕ್ರಿಕೆಟ್ ಪ್ರಿಯರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ನಾಳಿನ ವಿಶ್ವಕಪ್ ಪಂದ್ಯಾಕೂಟದ ಫೈನಲ್ ಪಂದ್ಯವನ್ನು ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ.
ಕ್ರಿಕೆಟ್ ಅಭಿಮಾನಿಗಳು ಈ ಅವಕಾಶವನ್ನು ಬಳಸಿಕೊಂಡು ಫೈನಲ್ ಪಂದ್ಯದ ರೋಚಕ ಕ್ಷಣಗಳನ್ನು… pic.twitter.com/Dmk2rewPgy
— CM of Karnataka (@CMofKarnataka) November 18, 2023
‘2023ನೇ ಸಾಲಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ನಮ್ಮ ದೇಶದಲ್ಲಿ ಆಯೋಜಿಸುತ್ತಿದ್ದು, ಇದರಲ್ಲಿ ನಮ್ಮ ಭಾರತ ತಂಡವು ವಿಶ್ವಕಪ್ ಪಂದ್ಯಾವಳಿಯ ಫೈನಲ್‌ಗೆ ತಲುಪಿರುವುದು ಸಂತೋಷದ ವಿಷಯ. ಈ ಸಂಬಂಧ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ದೊಡ್ಡ ಸ್ಕ್ರೀನ್‌ಗಳನ್ನು ಅಳವಡಿಸಿ, ಫೈನಲ್ ಪಂದ್ಯಾವಳಿಯನ್ನು ಕ್ರೀಡಾಪಟುಗಳಿಗೆ ಮತ್ತು ಸಾರ್ವಜನಿಕರಿಗೆ MC&A ಇವರ ಸಹಯೋಗದೊಂದಿಗೆ ನೇರ ಪ್ರಸಾರ ಮಾಡುವಂತೆ ಆದೇಶದಲ್ಲಿ ಸೂಚಿಸಿದ್ದಾರೆ. ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯವನ್ನು ಮಧ್ಯಾಹ್ನ 1.30ರಿಂದ ಮುಕ್ತಾಯವಾಗುವವರೆಗೆ ದೊಡ್ಡ ಎಲ್.ಇ.ಡಿ ಸ್ಕ್ರೀನ್‌ಗಳನ್ನು ಅಳವಡಿಸಿ, ನೇರ ಪ್ರಸಾರ ಮಾಡಲಾಗುವುದು’ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ಜೊತೆಗೆ ಈ ಸಂದರ್ಭದಲ್ಲಿ ಸೂಕ್ತವಾದ ಭದ್ರತೆಯನ್ನು ಕೂಡ ಕಲ್ಪಿಸಲು ಸೂಚಿಸಿದೆ.
‘ಟೀಮ್ ಇಂಡಿಯಾ ಗೆಲ್ಲಲಿ’ ಎಂದು ಶುಭ ಹಾರೈಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ.
ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ.Best wishes to team INDIA..
-… pic.twitter.com/BIgj6fr3re— CM of Karnataka (@CMofKarnataka) November 18, 2023
‘ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ.
ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ’ ಎಂದು ತಿಳಿಸಿದ್ದಾರೆ.