62ನೇ ವಯಸ್ಸಿನಲ್ಲಿ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ ಆಟಗಾರ

Date:

ಕ್ರಿಕೆಟಿಗ ಮ್ಯಾಥ್ಯೂ ಬ್ರೌನ್ಲೀ ತನ್ನ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವನ್ನು 62ನೇ ವರ್ಷದಲ್ಲಿ ಆಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಅವರು ಮಾರ್ಚ್ 10ರಂದು ನಡೆದ ಕೋಸ್ಟರಿಕ ವಿರುದ್ಧದ ಅಂತರ್‌ರಾಷ್ಟ್ರೀಯ ಟ್ವೆಂಟಿ20 ಪಂದ್ಯದಲ್ಲಿ ಫಾಕ್‌ಲ್ಯಾಂಡ್ ಐಲ್ಯಾಂಡ್ಸ್ ಪರವಾಗಿ ಆಡಿದ್ದಾರೆ ಎಂದು ‘ವಿಸ್ಡನ್’ ವರದಿ ಮಾಡಿದೆ.

- Advertisement -

ಪುರುಷರ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ, ತನ್ನ 62ನೇ ವರ್ಷದಲ್ಲಿ ಬ್ರೌನ್ಲೀ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವಾಡಿರುವ ಅತ್ಯಂತ ಹಿರಿಯ ಆಟಗಾರನಾಗಿದ್ದಾರೆ. ಅವರು ಈ ಮೂಲಕ ಉಸ್ಮಾನ್ ಗೋಕರ್‌ರ ದಾಖಲೆಯನ್ನು ಮುರಿದಿದ್ದಾರೆ. ಉಸ್ಮಾನ್ 2019ರ ಆಗಸ್ಟ್‌ನಲ್ಲಿ ಇಲ್ಫೊವ್ ಕೌಂಟಿಯಲ್ಲಿ ತನ್ನ 59ನೇ ವರ್ಷದಲ್ಲಿ ರೊಮೇನಿಯ ವಿರುದ್ಧ ಟರ್ಕಿ ಪರವಾಗಿ ತನ್ನ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಈ ಸುದ್ದಿ ಓದಿದ್ದೀರಾ? ಟೀಂ ಇಂಡಿಯಾದ ಕಹಿ ನೆನಪುಗಳನ್ನು ಬದಿಗೆ ಸರಿಸಿದ ಚಾಂಪಿಯನ್ಸ್‌ ಟ್ರೋಫಿ ಗೆಲುವು

ತನ್ನ ಕ್ರೀಡಾ ಜೀವನದಲ್ಲಿ ಬ್ರೌನ್ಲೀ ಮೂರು ಅಂತರ್‌ರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಮೂರು ಇನಿಂಗ್ಸ್‌ಗಳಲ್ಲಿ ಆರು ರನ್‌ಗಳನ್ನು ಗಳಿಸಿದ್ದಾರೆ. ಆ ಪೈಕಿ ಎರಡು ಇನಿಂಗ್ಸ್‌ಗಳಲ್ಲಿ ಅವರು ಅಜೇಯವಾಗಿ ಉಳಿದಿದ್ದರು. ಅವರು ಕೇವಲ ಒಂದು ಓವರ್ ಮಾತ್ರ ಬೌಲ್ ಮಾಡಿದ್ದಾರೆ. ಈವರೆಗೆ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ವಿಕೆಟ್ ಪಡೆದಿಲ್ಲ.

ಇತರ ಕ್ರಿಕೆಟಿಗರಲ್ಲಿ ಇಂಗ್ಲೆಂಡ್‌ನ ಜೇಮ್ಸ್ ಸೌಥರ್, ಪಾಕಿಸ್ತಾನದ ಮಿರಾನ್ ಬಕ್ಷ್ ಮತ್ತು ಭಾರತದ ರುಸ್ತಮ್‌ಜಿ ಜಮ್ಶೆಡ್‌ ಕೂಡ ಸೇರಿದ್ದಾರೆ, ಇವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅತ್ಯಂತ ಹಿರಿಯ ಆಟಗಾರರ ಪಟ್ಟಿಯಲ್ಲಿ ಸೇರಿದ್ದಾರೆ. ರುಸ್ತಮ್‌ಜಿ ಜಮ್ಶೆಡ್‌ ಅವರು 41 ನೇ ವಯಸ್ಸಿನಲ್ಲಿ ಭಾರತ ಪರ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇವರು ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅತ್ಯಂತ ಹಿರಿಯ ಕ್ರಿಕೆಟಿಗ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...