ಕ್ರಿಕೆಟಿಗ ಕೇದಾರ್ ಜಾಧವ್ ತಂದೆ ನಾಪತ್ತೆ; ಪೊಲೀಸರಿಂದ ಪ್ರಕರಣ ದಾಖಲು

Date:

ಭಾರತ ಕ್ರಿಕೆಟ್ ತಂಡದ ಆಟಗಾರ ಕೇದಾರ್ ಜಾಧವ್ ಅವರ ತಂದೆ ಪುಣೆಯಲ್ಲಿ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

75 ವರ್ಷದ ಮಹದೇವ್ ಸೋಪಾನ್, ಪುಣೆ ನಗರದ ಕೊತ್ರುಡ್ ಪ್ರದೇಶದ ನಿವಾಸಿಯಾಗಿದ್ದು, ಮನೆಯವರಿಗೆ ತಿಳಿಸದೆ ಸೋಮವಾರ ಬೆಳಿಗ್ಗೆ 11.30ರ ಸುಮಾರಿಗೆ ಹೋದವರು ವಾಪಸ್‌ ಬಂದಿಲ್ಲ.

ಭದ್ರತಾ ಸಿಬ್ಬಂದಿ ದಾರಿ ತಪ್ಪಿಸಿ ಬೆಳಿಗ್ಗೆ ಹೊರಗೆ ಹೋಗಿದ್ದರು. ಸ್ವಲ್ಪ ಸಮಯದ ನಂತರ ಅವರ ಫೋನ್ ಸ್ವಿಚ್ ಆಫ್ ಆಗಿದೆ. ಕೇದಾರ್ ಜಾಧವ್ ಕುಟುಂಬ ಅಲಂಕಾರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದೆ.

ಕಾರವೇ ನಗರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ಮಹದೇವ್ ಜಾಧವ್ ಅವರು ನೆನಪಿಡುವ ಅಥವಾ ಯೋಚಿಸುವ ಸಾಮರ್ಥ್ಯದ ದುರ್ಬಲತೆ ಹೊಂದಿರುವ ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಂದ್ರ ಸಹನೆ ನೇತೃತ್ವದ ತಂಡ ಹುಡುಕಾಟ ಆರಂಭಿಸಿದೆ . ಮಹದೇವ್ ಜಾಧವ್ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಪುಣೆ ನಗರ ಪೊಲೀಸರನ್ನು ಸಂಪರ್ಕಿಸಬೇಕು ಎಂದು ಸ್ಥಳೀಯರಲ್ಲಿ ಮನವಿ ಮಾಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಿಚಾಂಗ್ ಚಂಡಮಾರುತ: ₹5,060 ಕೋಟಿ ಪರಿಹಾರಕ್ಕೆ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಯ ನಡುವೆ ಮುಖ್ಯಮಂತ್ರಿ ಎಂ ಕೆ...

ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆಯ ಹೊಣೆ ಹೊತ್ತ ಗೋಲ್ಡಿ ಬ್ರಾರ್ ಗ್ಯಾಂಗ್; ರಾಜಸ್ಥಾನ ಬಂದ್‌ಗೆ ಕರೆ

ಬಲಪಂಥೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖ್‌ದೇವ್ ಸಿಂಗ್ ಗೊಗಮೆಡಿಯನ್ನು ಭೀಕರವಾಗಿ...

ತೆಲಂಗಾಣ: ಎಬಿವಿಪಿಯಿಂದ ಫೈರ್ ಬ್ರಾಂಡ್ ನಾಯಕನವರೆಗೆ; ರೇವಂತ್ ರೆಡ್ಡಿ ನಡೆದುಬಂದ ಹಾದಿ

ಮುಖ್ಯಮಂತ್ರಿ ಕೆಸಿಆರ್ ಸಭೆಗೆ ಅಡ್ಡಿಪಡಿಸಬಹುದು ಎನ್ನುವ ಕಾರಣಕ್ಕೆ 2018ರ ಡಿಸೆಂಬರ್ ನಾಲ್ಕರಂದು...

ತೆಲಂಗಾಣ ಸಿಎಲ್‌ಪಿ ನಾಯಕನಾಗಿ ರೇವಂತ್ ರೆಡ್ಡಿ ಆಯ್ಕೆ: ಡಿ.7ರಂದು ಸಿಎಂ ಆಗಿ ಪ್ರಮಾಣ ವಚನ

ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಎ ರೇವಂತ್...