ಟೀಂ ಇಂಡಿಯಾದ ಆಟಗಾರ ಶಿಖರ್ ಧವನ್ ಶನಿವಾರ ಮುಂಜಾನೆ ಅಂತರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಹಾಗೆಯೇ ಕ್ರಿಕೆಟ್ ವೃತ್ತಿ ಜೀವನದಲ್ಲಿ ತಮ್ಮ ಬೆಳವಣಿಗೆಯಲ್ಲಿ ಅವಿಭಾಜ್ಯ ಅಂಗವಾಗಿರುವ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಐಪಿಎಲ್ನ ಪಂಜಾಬ್ ಕಿಂಗ್ಸ್ ನಾಯಕ ತನ್ನ ಎಕ್ಸ್ನಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಪೋಸ್ಟ್ನಲ್ಲಿ ತನಗೆ ಅವಕಾಶ ನೀಡಿದ ಬಿಸಿಸಿಐಗೆ ಮತ್ತು ವರ್ಷಗಳಲ್ಲಿ ಪ್ರೀತಿ ನೀಡುತ್ತಾ ಬಂದಿರುವ ಅಭಿಮಾನಿಗಳಿಗೆ ಧನ್ಯವಾದ ಹೇಳಿದರು.
38 ವರ್ಷ ವಯಸ್ಸಿನ ಶಿಖರ್ ಧವನ್ ಕೊನೆಯದಾಗಿ ಬಾಂಗ್ಲಾದೇಶ ವಿರುದ್ಧ ಭಾರತದ ಪರವಾಗಿ ಒಡಿಐ ಸರಣಿಯಲ್ಲಿ 2022ರ ಡಿಸೆಂಬರ್ನಲ್ಲಿ ಆಡಿದ್ದಾರೆ.
ಇದನ್ನು ಓದಿದ್ದೀರಾ? ಐಪಿಎಲ್ 2023 | ರಾಜಪಕ್ಸೆ, ಧವನ್ ಸ್ಫೋಟಕ ಬ್ಯಾಟಿಂಗ್; ಕೆಕೆಆರ್ಗೆ ಸವಾಲಿನ ಗುರಿ
ಶಿಖರ್ ಧವನ್ ಎಕ್ಸ್ ಪೋಸ್ಟ್ನಲ್ಲಿ ತಮ್ಮ ಅಭಿಮಾನಿಗಳಿಗೆ ಸುದೀರ್ಘ ವೀಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ. ವೃತ್ತಿಜೀವನದುದ್ದಕ್ಕೂ ಅಭಿಮಾನಿಗಳ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
As I close this chapter of my cricketing journey, I carry with me countless memories and gratitude. Thank you for the love and support! Jai Hind! 🇮🇳 pic.twitter.com/QKxRH55Lgx
— Shikhar Dhawan (@SDhawan25) August 24, 2024