ಐಪಿಎಲ್ 2023 | ಸಿಎಸ್‌ಕೆ ಬ್ಯಾಟ್ಸ್‌ಮನ್‌ಗಳ ಅಬ್ಬರಕ್ಕೆ ನಲುಗಿದ ಕೋಲ್ಕತ್ತಾ; ಕೆಕೆಆರ್‌ಗೆ ಸತತ ನಾಲ್ಕನೇ ಸೋಲು

Date:

Advertisements

ಅಜಿಂಕ್ಯ ರಹಾನೆ, ಶಿವಂ ದುಬೆ, ಡೇವೋನ್ ಕಾನ್ವೇ ಹಾಗೂ ರುತುರಾಜ್ ಗಾಯಕ್ವಾಡ್ ಅವರ ಸ್ಪೋಟಕ ಬ್ಯಾಟಿಂಗ್‌ ಹಾಗೂ ಬೌಲರ್‌ಗಳ ಕರಾರುವಕ್ಕ್ ದಾಳಿಯಿಂದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಕೋಲ್ಕತ್ತಾ ನೈಟ್‌ ರೈಡರ್ಸ್ ವಿರುದ್ಧ 49 ರನ್‌ಗಳಿಂದ ಜಯಗಳಿಸಿತು.

ಕೋಲ್ಕತ್ತಾದ ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ಐಪಿಎಲ್‌ 16ನೇ ಆವೃತ್ತಿಯ 33ನೇ ಪಂದ್ಯದಲ್ಲಿ ಸಿಎಸ್‌ಕೆ ನೀಡಿದ್ದ 235 ರನ್‌ಗಳ ಸವಾಲನ್ನು ಬೆನ್ನಟ್ಟಿದ ಕೆಕೆಆರ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 53 ರನ್‌ಗಳಷ್ಟೆ ಗಳಿಸಲು ಶಕ್ತವಾಯಿತು. ಜೇಸನ್‌ ರಾಯ್‌ ಹಾಗೂ ರಿಂಕು ಸಿಂಗ್‌ ಅಬ್ಬರಿಸಿದರೂ ಗುರಿ ಮುಟ್ಟಲಾಗಲಿಲ್ಲ. ಇದರೊಂದಿಗೆ ಸಿಎಸ್‌ಕೆ ಟೂರ್ನಿಯಲ್ಲಿ 5ನೇ ಗೆಲುವು ದಾಖಲಿಸಿದರೆ, ಕೆಕೆಆರ್‌ ಸತತ ನಾಲ್ಕನೇ ಸೋಲು ಕಂಡಿತು.

ಜೇಸನ್‌ ರಾಯ್‌ ಕೇವಲ 26 ಎಸೆತಗಳಲ್ಲಿ 5 ಸಿಕ್ಸರ್‌ ಹಾಗೂ 5 ಬೌಂಡರಿಯೊಂದಿಗೆ 61 ರನ್‌ ಚಚ್ಚಿದರು. ರಿಂಕು ಸಿಂಗ್‌ 32 ಚೆಂಡುಗಳಲ್ಲಿ 4 ಸಿಕ್ಸರ್ ಹಾಗೂ 3 ಬೌಂಡರಿಯೊಂದಿಗೆ ಅಜೇಯ 53 ರನ್‌ ಪೇರಿಸಿದರು. ಉಳಿದಂತೆ ಇತರ ಆಟಗಾರ್ಯಾರು ಉತ್ತಮ ಪ್ರದರ್ಶನ ತೋರಲಿಲ್ಲ.

ಸಿಎಸ್‌ಕೆ ಪರ ತುಷಾರ್‌ ದೇಶಪಾಂಡೆ 43/2, ಮಹೀಶ್ ತೀಕ್ಷಣಾ 32/2 ವಿಕೆಟ್ ಪಡೆದು ಯಶಸ್ವಿ ಬೌಲರ್‌ಗಳೆನಿಸಿದರು

ಇದಕ್ಕೂ ಮೊದಲು ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್ ಮೊದಲ ಓವರ್‌ನಿಂದಲೇ ಬೌಂಡರಿ, ಸಿಕ್ಸರ್‌ ಬಾರಿಸತೊಡಗಿದರು. ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಹಾಗೂ ಡೆವೋನ್ ಕಾನ್ವೆ ಜೋಡಿ ಮೊದಲ ವಿಕೆಟ್‌ಗೆ 73 ರನ್‌ಗಳ ಜೊತೆಯಾಟ ನೀಡಿ ಬೇರ್ಪಟ್ಟಿತು. ಋತುರಾಜ್ 20 ಎಸೆತಗಳಲ್ಲಿ 35 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಅರ್ಧ ಶಥಕ ಸಿಡಿಸಿದ ಕಾನ್ವೆ 40 ಎಸೆತಗಳಲ್ಲಿ 56 ರನ್‌ಗಳಿಸಿ ಔಟಾದರು. ನಂತರ ಜೊತೆಯಾಗಿದ್ದು ರಹಾನೆ ಹಾಗೂ ದುಬೆ ಜೋಡಿ.

ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಶಿವಂ ದುಬೆ ಕೇವಲ 21 ಎಸೆತಗಳಲ್ಲಿ 5 ಸಿಕ್ಸರ್ 2 ಬೌಂಡರಿಯೊಂದಿಗೆ 50 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಆದರೆ ಅಜಿಂಕ್ಯಾ ರಹಾನೆ ಕೊನೆಯವರೆಗೂ ವಿಕೆಟ್ ಕಳೆದುಕೊಳ್ಳದೆ ಅಬ್ಬರದ ಬ್ಯಾಟಿಂಗ್ ನಡೆಸಿದರು. ಕೇವಲ 29 ಎಸೆತಗಳಲ್ಲಿ ಅವರು 71 ರನ್‌ ಬಾರಿಸಿ ಅಜೇಯವಾಗುಳಿದರು. ಇವರ ಅಮೋಘ ಆಟದಲ್ಲಿ 5 ಸಿಕ್ಸರ್‌ ಹಾಗೂ 6 ಬೌಂಡರಿಗಳಿದ್ದವು.

ಇನ್ನು ಕೊನೆಯ ಕ್ಷಣದಲ್ಲಿ ರವೀಂದ್ರ ಜಡೇಜಾ 8 ಎಸೆತಗಳನ್ನು ಎದುರಿಸಿ 18 ರನ್ ಬಾರಿಸಿ ವಿಕೆಟ್ ಕಳೆದುಕೊಂಡರು. ಎಂಎಸ್ ಧೋನಿ 2 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಸಿಎಸ್‌ಕೆ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 235 ರನ್‌ಗಳಿಸಿದೆ.

ಇದು ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ದಾಖಲಿಸಿದ 3ನೇ ಅತೀದೊಡ್ಡ ಮೊತ್ತವಾಗಿದೆ. 2010ರಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಚೆನ್ನೈ 5 ವಿಕೆಟ್ ಕಳೆದುಕೊಂಡು 246 ರನ್ ಸಿಡಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಖ್ವಿಯಿಂದ ಟ್ರೋಫಿ ಸ್ವೀಕರಿಸದ ಭಾರತ ತಂಡ, ಕಪ್‌ ಇಲ್ಲದೇ ಸಂಭ್ರಮಿಸಿದ ಆಟಗಾರರು

2025ರ ಏಷ್ಯಾಕಪ್ ಕ್ರಿಕೆಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ಮಧ್ಯೆ ಆರಂಭದಿಂದಲೂ...

ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರ: ಪಾಕಿಸ್ತಾನದ ಕಾಲೆಳೆದ ಪ್ರಧಾನಿ ಮೋದಿ

ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಗೆದ್ದ ಬೆನ್ನಲ್ಲೇ ಪ್ರಧಾನಿ...

ಏಪ್ಯಾ ಕಪ್ ಫೈನಲ್ : ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ರೋಚಕ ಜಯ; 9ನೇ ಬಾರಿ ಚಾಂಪಿಯನ್

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಏಪ್ಯಾ ಕಪ್ ಫೈನಲ್...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ...

Download Eedina App Android / iOS

X