ಐಪಿಎಲ್ | ತವರಲ್ಲಿ ಮತ್ತೆ ಮಿಂಚಿದ ಚೆನ್ನೈ: ಗುಜರಾತ್ ವಿರುದ್ಧ 63 ರನ್‌ಗಳ ಭರ್ಜರಿ ಗೆಲುವು

Date:

ಚೆನ್ನೈಯ ಚಪಾಕ್ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 7ನೇ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ತಂಡವು, ಗುಜರಾತ್ ವಿರುದ್ಧ 63 ರನ್‌ಗಳ ಭರ್ಜರಿ ಜಯ ಗಳಿಸಿದೆ.

- Advertisement -

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್‌ ಶಿವಂ ದುಬೆಯವರ ಅರ್ಧಶತಕ(51 ರನ್, 23 ಎಸೆತ) ಹಾಗೂ ಮಧ್ಯಮ ಕ್ರಮಾಂಕ ಬ್ಯಾಟರ್‌ಗಳ ಉತ್ತಮ ಕೊಡುಗೆಯ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 206 ರನ್‌ಗಳನ್ನು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಚೆನ್ನೈ ನೀಡಿದ ಗುರಿಯನ್ನು ಬೆನ್ನತ್ತಿದ ಗುಜರಾತ್ ಜೈಂಟ್ಸ್, 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 143 ರನ್‌ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ 63 ರನ್‌ಗಳಿಂದ ಚೆನ್ನೈಗೆ ಶರಣಾಯಿತು. ಚೆನ್ನೈ ತಂಡ ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.

207 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಶುಭ್​​ಮನ್ ಗಿಲ್ ಕೇವಲ 8 ರನ್​ಗಳಿಸಿ ಔಟಾದರೆ, ವೃದ್ದಿಮಾನ್ ಸಾಹ 21 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು ವಿಜಯ್ ಶಂಕರ್ 12 ರನ್​ಗಳಿಸಿ ನಿರ್ಗಮಿಸಿದರೆ, ಡೇವಿಡ್ ಮಿಲ್ಲರ್ 21 ರನ್​ಗಳಿಸಿ ಹೊರ ನಡೆದರು. ಪರಿಣಾಮ ಕೊನೆಯ 6 ಓವರ್​ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ 97 ರನ್​ಗಳ ಅವಶ್ಯಕತೆಯಿತ್ತು.

ಈ ಹಂತದಲ್ಲಿ ಸಾಯಿ ಸುದರ್ಶನ್ (31) ಹಾಗೂ ಒಮರ್​ಝಾಹಿ (11) ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ರಶೀದ್ ಖಾನ್ 1 ರನ್​ಗಳಿಸಿ ಬಂದ ವೇಗದಲ್ಲೇ ಪೆವಿಲಿಯನ್​ಗೆ ಹಿಂತಿರುಗಿದರು.

ಅಂತಿಮವಾಗಿ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು​ 143 ರನ್​ ಕಲೆ ಹಾಕಲಷ್ಟೇ ಶಕ್ತವಾಯಿತು. ಸಿಎಸ್​ಕೆ ಪರ ತುಷಾರ್ ದೇಶಪಾಂಡೆ, ಮುಸ್ತಫಿಜುರ್ ರೆಹಮಾನ್ ಹಾಗೂ ದೀಪಕ್ ಚಹರ್ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

ಚಪಾಕ್ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯವನ್ನಾಡಿದ್ದ ಚೆನ್ನೈ ತಂಡ, ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಸೋಲಿಸಿತ್ತು. ಇಂದಿನ ಪಂದ್ಯದಲ್ಲೂ ಜಯ ಗಳಿಸುವ ಮೂಲಕ ಎರಡೂ ಪಂದ್ಯವನ್ನು ಸಿಎಸ್‌ಕೆ ಗೆದ್ದುಕೊಂಡಿದೆ.

ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯವನ್ನಾಡಿದ್ದ ಯುವ ನಾಯಕ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಜೈಂಟ್ಸ್ ತಂಡ, 6 ರನ್‌ಗಳ ರೋಚಕ ಗೆಲುವು ದಾಖಲಿಸಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...