ಐಪಿಎಲ್ | ಚೆನ್ನೈಗೆ ಸುಲಭ ತುತ್ತಾದ ಕೆಕೆಆರ್: ಏಳು ವಿಕೆಟ್‌ಗಳ ಭರ್ಜರಿ ಗೆಲುವು

Date:

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸೋಮವಾರ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಏಳು ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.

- Advertisement -

ಈ ಗೆಲುವಿನೊಂದಿಗೆ ಚೆನ್ನೈ ತಂಡ ತಮ್ಮ ತವರಿನ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿ ಗೆಲುವಿನ ಟ್ರ್ಯಾಕ್‌ಗೆ ಮರಳಿದರೆ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ರಸಕ್ತ ಋತುವಿನಲ್ಲಿ ಮೊದಲ ಸೋಲುಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

138 ರನ್‌ಗಳ ಸಾಧಾರಣ ಗುರಿ ಪಡೆದ ಸಿಎಸ್‌ಕೆ ತಂಡವು ನಾಯಕ ರುತುರಾಜ್ ಗಾಯಕ್ವಾಡ್ ಅವರ ಅಮೋಘ ಅರ್ಧಶತಕದ ನೆರವಿನಿಂದ 17.4 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಗೆಲುವಿನ ದಡ ಸೇರಿತು.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಆರಂಭಿಸಿದ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ರಚಿನ್ ರವೀಂದ್ರ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 3.2 ಓವರ್‌ಗಳಲ್ಲಿ 27 ರನ್‌ಗಳ ಜೊತೆಯಾಟ ನೀಡಿತು. ಈ ವೇಳೆ ರಚಿನ್ ರವೀಂದ್ರ 8 ಎಸೆತಗಳಲ್ಲಿ 3 ಬೌಂಡರಿ ಸಹಿತ 15 ರನ್ ಗಳಿಸಿ ಔಟಾದರು.

ನಂತರ ಬಂದ ಡೆರಿಲ್ ಮಿಚೆಲ್ 19 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 25 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಯುವ ಬ್ಯಾಟರ್ ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್ ಮಾಡಿ 18 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ 28 ರನ್ ಗಳಿಸಿದರು.

ನಾಯಕ ರುತುರಾಜ್ ಗಾಯಕ್ವಾಡ್ ಕೊನೆಯವರೆಗೂ ಕ್ರೀಸ್‌ನಲ್ಲಿದ್ದು ಸಿಎಸ್‌ಕೆ ತಂಡವನ್ನು ಗೆಲುವಿನ ದಡ ತಲುಪಿಸಿದರು. ಗಾಯಕ್ವಾಡ್ 58 ಎಸೆತಗಳಲ್ಲಿ 9 ಬೌಂಡರಿಗಳ ನೆರವಿನಿಂದ 67 ರನ್ ಬಾರಿಸಿ ಅಜೇಯರಾಗುಳಿದರು. ಕೊನೆಯಲ್ಲಿ ಬಂದ ಮಾಜಿ ನಾಯಕ ಎಂಎಸ್ ಧೋನಿ ಔಟಾಗದೆ  1 ರನ್ ಗಳಿಸಿದರು.

ಕೆಕೆಆರ್ ಪರ ಬೌಲಿಂಗ್‌ನಲ್ಲಿ ವೈಭವ್ ಅರೋರಾ 2 ವಿಕೆಟ್ ಪಡೆದರೆ, ಸುನಿಲ್ ನರೇನ್ 1 ವಿಕೆಟ್ ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಬ್ಯಾಟಿಂಗ್ ನಡೆಸಿದ್ದ ಕೆಕೆಆರ್, ಉತ್ತಮ ರನ್ ಕಲೆ ಹಾಕುವಲ್ಲಿ ವಿಫಲವಾಯಿತು. ಇನ್ನಿಂಗ್ಸ್ ಆರಂಭಿಸಿದ ಫಿಲ್ ಸಾಲ್ಟ್ ಮತ್ತು ಸುನಿಲ್ ನರೇನ್ ಉತ್ತಮ ಆರಂಭ ನೀಡಲಿಲ್ಲ.

ಫಿಲ್ ಸಾಲ್ಟ್ ಮೊದಲ ಓವರ್‌ ಎಸೆದ ದೇಶಪಾಂಡೆಯ ಮೊದಲ ಎಸೆತದಲ್ಲೇ ಜಡೇಜಾಗೆ ಕ್ಯಾಚಿತ್ತು ವಿಕೆಟ್ ಒಪ್ಪಿಸಿದರು. ಸುನಿಲ್ ನರೇನ್ 20 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 27 ರನ್ ಗಳಿಸಿ ಔಟಾದರು.

ಬಳಿಕ ಬಂದ ರಘುವಂಶಿ 18 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 24 ರನ್ ಗಳಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 32 ಎಸೆತಗಳಲ್ಲಿ 3 ಬೌಂಡರಿ ನೆರವಿನಿಂದ 34 ರನ್ ಗಳಿಸಿದರು.

ಉಳಿದಂತೆ ವೆಂಕಟೇಶ್ ಅಯ್ಯರ್ 3 ರನ್, ರಮಣದೀಪ್ ಸಿಂಗ್ 13 ರನ್, ರಿಂಕು ಸಿಂಗ್ 9 ರನ್, ಆಂಡ್ರೆ ರಸೆಲ್ 10 ರನ್, ಅನುಕೂಲ್ ರಾಯ್ 3 ರನ್ ಮಾತ್ರ ಗಳಿಸಿ ತಂಡದ ಮೊತ್ತವನ್ನು 130ರ ಗಡಿ ದಾಟಿಸಿದರು.

ಬೌಲಿಂಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ರವೀಂದ್ರ ಜಡೇಜಾ 4 ಓವರ್‌ಗಳಲ್ಲಿ 18 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ತುಷಾರ್ ದೇಶಪಾಂಡೆ 4 ಓವರ್‌ಗಳಲ್ಲಿ 33 ರನ್ ನೀಡಿ 3 ವಿಕೆಟ್ ಪಡೆದರು. ಮುಸ್ತಾಫಿಜುರ್ ರಹಮಾನ್ 4 ಓವರ್‌ಗಳಲ್ಲಿ 22 ರನ್ ನೀಡಿ 2 ವಿಕೆಟ್ ಕಬಳಿಸಿದರು. ಮಹೇಶ ತೀಕ್ಷಣ ಒಂದು ವಿಕೆಟ್ ಪಡೆದರು.

ಎರಡು ಕ್ಯಾಚ್ ಹಾಗೂ ಮೂರು ವಿಕೆಟ್ ಪಡೆದಿದ್ದ ಆಲ್‌ರೌಂಡರ್ ಆಟಗಾರ ರವೀಂದ್ರ ಜಡೇಜಾ ಪಂದ್ಯಶ್ರೇಷ್ಢ ಪ್ರಶಸ್ತಿಗೆ ಪಾತ್ರರಾದರು.

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ ಐದು ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಎರಡು ಸೋಲಿನೊಂದಿಗೆ 2024ರ ಐಪಿಎಲ್‌ನ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ಒಂದು ಸೋಲಿನೊಂದಿಗೆ ಕೆಕೆಆರ್ ತಂಡವು ಎರಡನೇ ಸ್ಥಾನದಲ್ಲಿ ಮುಂದುವರೆದಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿನ್ ಐತಿಹಾಸಿಕ ದಾಖಲೆ ಮುರಿದ ಜಿಂಬಾಬ್ವೆಯ ಬ್ರೆಂಡನ್ ಟೇಲರ್

ಜಿಂಬಾಬ್ವೆ ರಾಷ್ಟ್ರೀಯ ಕ್ರಿಕೆಟ್ ತಂಡದ ಅತ್ಯಂತ ಹಿರಿಯ ವಿಕೆಟ್ ಕೀಪರ್ ಹಾಗೂ...

​’ಇಮ್ರಾನ್ ಜೈಲಿನಲ್ಲೇ ಕೊನೆಯುಸಿರೆಳೆಯಬಹುದು’: ಆಸ್ಟ್ರೇಲಿಯಾದ 7 ಮಾಜಿ ನಾಯಕರ ತೀವ್ರ ಆತಂಕ

ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ 1992ರ ವಿಶ್ವಕಪ್ ವಿಜೇತ ನಾಯಕ ಇಮ್ರಾನ್...

ವಿಶ್ವ ಚಾಂಪಿಯನ್ ಶಿಪ್ ಟ್ರಯಲ್ಸ್ ಸ್ಪರ್ಧೆಗೆ ವಿನೇಶ್ ಪೋಗಟ್’ಗೆ ದೆಹಲಿ ಹೈಕೋರ್ಟ್ ನಕಾರ

ದೆಹಲಿಯಲ್ಲಿ ನಡೆಯಲಿರುವ ಮುಂಬರುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನ ಆಯ್ಕೆ ಟ್ರಯಲ್ಸ್‌ನಲ್ಲಿ (Trials)...

ದುಲೀಪ್ ಟ್ರೋಫಿ ಫೈನಲ್: 13 ವರ್ಷಗಳ ನಂತರ ಚಾಂಪಿಯನ್ ಪಟ್ಟ ಅಲಂಕರಿಸಿದ ಪೂರ್ವ ವಲಯ

ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿಗಳಲ್ಲಿ ಒಂದಾದ 'ದುಲೀಪ್ ಟ್ರೋಫಿ 2026'ರ ಫೈನಲ್...