ಗೆಲುವಿಗೆ ಕಾರಣವಾದ 20 ರನ್ ಸಿಡಿಸಿದ ಧೋನಿ; ಐಪಿಎಲ್‌ನಲ್ಲಿ ವಿಶೇಷ ದಾಖಲೆ

Date:

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ 20 ರನ್‌ಗಳ ಅಮೋಘ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟರ್ ಮಹೇಂದ್ರ ಸಿಂಗ್ ಧೋನಿ ಕೇವಲ 4 ಎಸೆತಗಳಲ್ಲಿ ಮೂರು ಸಿಕ್ಸರ್‌ ಸಹಿತ 20 ರನ್ ಗಳಿಸಿದ್ದು, ಚೆನ್ನೈ ಗೆಲುವಿಗೆ ಪ್ರಮುಖ ಕಾರಣವಾಯಿತು.

- Advertisement -

ಧೋನಿ 500 ಸ್ಟ್ರೈಕ್‌ ರೇಟ್‌ನಲ್ಲಿ ಮೂರು ಸಿಕ್ಸರ್ ಸಹಿತ 20 ರನ್ ಬಾರಿಸಿದರು. ಬಿರುಸಿನ ಬ್ಯಾಟಿಂಗ್ ಮೂಲಕ ಸಿಎಸ್‌ಕೆ ಮಾಜಿ ನಾಯಕ ಚೆನ್ನೈ ಪರ 5000 ರನ್ ಗಳಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿ ವೈಯಕ್ತಿಕ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಸುರೇಶ್ ರೈನಾ ನಂತರ ಸಿಎಸ್‌ಕೆ ಪರ ಈ ದಾಖಲೆ ಮಾಡಿದ 2ನೇ ಬ್ಯಾಟರ್ ಎಂಬ ಮೈಲಿಗಲ್ಲು ತಲುಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೈದಾನಕ್ಕೆ ಬಂದು ಮೊದಲ ಎಸೆತದಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಧೋನಿ ಈ ಮೈಲಿಗಲ್ಲನ್ನು ದಾಟಿದರು. ಐಪಿಎಲ್ ಮತ್ತು ಚಾಂಪಿಯನ್ಸ್ ಲೀಗ್ ಟಿ20 ಸೇರಿದಂತೆ ಚೆನ್ನೈ ಪರ 250 ಪಂದ್ಯಗಳ 218 ಇನಿಂಗ್ಸ್‌ಗಳಲ್ಲಿ ಧೋನಿ 5016 ರನ್ ಗಳಿಸಿದ್ದಾರೆ. ಶತಕ ಗಳಿಸದಿದ್ದರೂ, 23 ಅರ್ಧಶತಕ ಗಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಧೋನಿ ಚೆನ್ನೈ ಪರ 348 ಬೌಂಡರಿ, 241 ಸಿಕ್ಸರ್‌ ಬಾರಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಪರ ಆಡಿದ್ದಾರೆ. ಧೋನಿ 256 ಐಪಿಎಲ್ ಪಂದ್ಯಗಳಲ್ಲಿ 222 ಇನಿಂಗ್ಸ್‌ಗಳಲ್ಲಿ 5141 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿ ಧೋನಿ ಎರಡೂ ತಂಡಗಳಿಗೆ ಒಟ್ಟು 353 ಬೌಂಡರಿ, 245 ಸಿಕ್ಸರ್ ಪೇರಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ಚಾಂಪಿಯನ್ಸ್ ಲೀಗ್ ಟಿ20ಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಸುರೇಶ್ ರೈನಾ ಅತಿ ಹೆಚ್ಚು ರನ್ ಗಳಿಸಿದ್ದು, ಧೋನಿಗಿಂತ ಮೊದಲ ಸ್ಥಾನದಲ್ಲಿದ್ದಾರೆ. ಚೆನ್ನೈ ಪರ 200 ಪಂದ್ಯಗಳಲ್ಲಿ 195 ಇನ್ನಿಂಗ್ಸ್‌ಗಳಲ್ಲಿ 5529 ರನ್ ಗಳಿಸಿದ್ದಾರೆ. ಸಿಎಸ್‌ಕೆ ಪರ ರೈನಾ 2 ಶತಕ, 38 ಅರ್ಧಶತಕ ಬಾರಿಸಿದ್ದಾರೆ. ಚೆನ್ನೈ ಪರ ರೈನಾ 494 ಬೌಂಡರಿ, 219 ಸಿಕ್ಸರ್ ಸ್ಫೋಟಿಸಿದ್ದಾರೆ.

ಸುರೇಶ್ ರೈನಾ ಮತ್ತು ಧೋನಿ ನಂತರ ಚೆನ್ನೈ ಪರ ಅತಿ ಹೆಚ್ಚು ರನ್ ಗಳಿಸಿದ 3ನೇ ಆಟಗಾರ ಆರ್‌ಸಿಬಿಯ ನಾಯಕ ಫಾಫ್ ಡು ಪ್ಲೆಸಿಸ್. 100 ಪಂದ್ಯಗಳ 93 ಇನಿಂಗ್ಸ್‌ಗಳಲ್ಲಿ ಒಟ್ಟು 2932 ರನ್ ಗಳಿಸಿದ್ದಾರೆ. ಫಾಫ್ ಯಾವುದೇ ಶತಕ ಗಳಿಸದಿದ್ದರೂ 21 ಅರ್ಧಶತಕ ಗಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...