CSK vs DC | ಸ್ಟೇಡಿಯಂನಲ್ಲಿ ಕಾಣಿಸಿಕೊಂಡ ಧೋನಿ ಪೋಷಕರು; ಎಂಎಸ್‌ಡಿ ನಿವೃತ್ತಿ ಕುರಿತು ಭಾರೀ ಚರ್ಚೆ

Date:

ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ, ಸ್ಟಾರ್‌ ಆಟಗಾರ ಎಂ.ಎಸ್‌ ಧೋನಿ ಅವರು ಐಪಿಎಲ್‌ಗೆ ನಿವೃತ್ತಿ ಘೋಷಿಸುವ ಬಗ್ಗೆ ಆಗ್ಗಾಗ್ಗೆ ಚರ್ಚೆಗಳು ಮುನ್ನೆಲೆಗೆ ಬರುತ್ತಿವೆ. ಇಂದು (ಮಾರ್ಚ್‌ 5) ಸಿಎಸ್‌ಕೆ ಮತ್ತು ಡಿಸಿ ನಡುವೆ ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಸ್ಟೇಡಿಯಂನಲ್ಲಿ ಧೋನಿ ಅವರ ಪೋಷಕರಾದ ಪ್ಯಾನ್ ಸಿಂಗ್ ಧೋನಿ ಮತ್ತು ದೇವಕಿ ದೇವಿ ಅವರು ಕಾಣಿಸಿಕೊಂಡಿದ್ದಾರೆ.

- Advertisement -

2008ರಲ್ಲಿ ಐಪಿಎಲ್‌ ಆರಂಭವಾಗಿ, ಧೋನಿ ಅವರು ಸಿಎಸ್‌ಕೆ ತಂಡವನ್ನು ಸೇರಿದ ಬಳಿಕ, ಧೋನಿ ಅವರ ಪೋಷಕರು ಇದೇ ಮೊದಲ ಬಾರಿಗೆ ಐಪಿಎಲ್‌ ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಬಂದಿದ್ದಾರೆ. ಧೋನಿ ಅವರ ಪತ್ನಿ ಸಾಕ್ಷಿ ಮತ್ತು ಮಗಳು ಝಿವಾ ಕೂಡ ಇದ್ದಾರೆ. ಹೀಗಾಗಿ, ಬಹುಶಃ ಧೋನಿ ಅವರು ಇಂದು ಐಪಿಎಲ್‌ಗೆ ನಿವೃತ್ತಿ ಘೋಷಿಸಬಹುದು ಎಂಬ ಚರ್ಚೆಯನ್ನು ಹುಟ್ಟುಹಾಕಿದೆ. ನೆಟ್ಟಿಗರು ಧೋನಿ ನಿವೃತ್ತಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಈ ಪಂದ್ಯಕ್ಕೂ ಮುನ್ನ, ಸಿಎಸ್‌ಕೆ ನಾಯಕ ರುತುರಾಜ್ ಗೈಕ್ವಾಡ್ ಅವರಿಗೆ ಗಾಯಗಳಾಗಿರುವ ಕಾರಣ, ಎಂಎಸ್ ಧೋನಿ ಅವರು ಸಿಎಸ್‌ಕೆ ತಂಡವನ್ನು ಮುನ್ನಡೆಸಲಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಆದಾಗ್ಯೂ, ಗೈಕ್ವಾಡ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಈ ಬೆನ್ನಲ್ಲೇ, ಧೋನಿ ಅವರ ಪೋಷಕರು ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿರುವುದು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಹಾಗೆ ನೋಡಿದರೆ, ಈ ಹಿಂದೆ, ಯಾವುದೇ ಟೂರ್ನಿಯ ಕೊನೆಯ ಸಮಯದಲ್ಲಿ ನಿವೃತ್ತಿ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬರುತ್ತಿದ್ದರು. ಆದರೆ, ಇತ್ತೀಚೆಗೆ, ಟೂರ್ನಿಯ ಮಧ್ಯದಲ್ಲಿಯೂ ನಿವೃತ್ತಿಯ ಕುರಿತು ಚರ್ಚೆಗಳಾಗುತ್ತಿವೆ. ಶನಿವಾರ ಧೋನಿ ನಿವೃತ್ತರಾಗಲಿದ್ದಾರೆಯೇ ಎಂದು ಹಲವರು ಆಶ್ಚರ್ಯಪಟ್ಟಿದ್ದಾರೆ. ಆದರೆ, ಈ ಬಗ್ಗೆ ಧೋನಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...