ಐಪಿಎಲ್ 2024ರ ಮುಕ್ತಾಯಕ್ಕೆ ಹತ್ತಿರವಾಗುತ್ತಿದ್ದಂತೆಯೇ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಕಿ ಇರುವ ಒಂದು ಪ್ಲೇ-ಆಫ್ ಸ್ಥಾನಕ್ಕಾಗಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯೆ ‘ನಾಕೌಟ್’ ಪಂದ್ಯ ನಡೆಯಲಿದೆ.
ಬಹುನಿರೀಕ್ಷಿತ ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಋತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್‌ಕೆ ತಂಡವು, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್ ಸೋತಿರುವ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಮೊದಲಿಗೆ ಬ್ಯಾಟಿಂಗ್ ಇಳಿಯಲಿದ್ದು, ಎಷ್ಟು ರನ್‌ಗಳ ಗುರಿಯನ್ನು ನೀಡಲಿದೆ ಎಂದು ಕಾದುನೋಡಬೇಕಿದೆ.
CSK win the toss and will bowl first in the all-important clash
LIVE: https://t.co/iwDl175AqY | #CSKvRCB pic.twitter.com/pSosutczwc
— ESPNcricinfo (@ESPNcricinfo) May 18, 2024
ಸ್ಟೇಡಿಯಂ ಸುತ್ತಮುತ್ತ ಬಿಗಿ ಭದ್ರತೆ
ಐಪಿಎಲ್ ಪಂದ್ಯ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ನೀಡಲಾಗಿದೆ. ಐಪಿಎಲ್ ಪಂದ್ಯ ಬಂದೋಬಸ್ತ್‌ಗೆ 1,200 ಪೊಲೀಸರನ್ನು ನಿಯೋಜಿಸಲಾಗಿದೆ.
ನಾಲ್ವರು ಡಿಸಿಪಿಗಳು, 12 ಎಸಿಪಿ, 28 ಇನ್ಸ್ಪೆಕ್ಟರ್, 80 ಸಬ್ ಇನ್ಸ್ಪೆಕ್ಟರ್ ಸೇರಿ ಒಟ್ಟು 1,200 ಪೊಲೀಸರನ್ನು ಕ್ರೀಡಾಂಗಣದ ಸುತ್ತಮುತ್ತ ನಿಯೋಜಿಸಲಾಗಿದೆ. 4 ಕೆಎಸ್‌ಆರ್‌ಪಿ ತುಕಡಿ, ಹೋಂ ಗಾರ್ಡ್ ಸಹ ಭದ್ರತೆಗೆ ನಿಯೋಜನೆ ಮಾಡಲಾಗಿದೆ.
