ಐಪಿಎಲ್ | ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್‌

Date:

ಐಪಿಎಲ್ 2024ರ ಮುಕ್ತಾಯಕ್ಕೆ ಹತ್ತಿರವಾಗುತ್ತಿದ್ದಂತೆಯೇ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಕಿ ಇರುವ ಒಂದು ಪ್ಲೇ-ಆಫ್ ಸ್ಥಾನಕ್ಕಾಗಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯೆ ‘ನಾಕೌಟ್’ ಪಂದ್ಯ ನಡೆಯಲಿದೆ.

- Advertisement -

ಬಹುನಿರೀಕ್ಷಿತ ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಋತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್‌ಕೆ ತಂಡವು, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್ ಸೋತಿರುವ ಆತಿಥೇಯ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು, ಮೊದಲಿಗೆ ಬ್ಯಾಟಿಂಗ್ ಇಳಿಯಲಿದ್ದು, ಎಷ್ಟು ರನ್‌ಗಳ ಗುರಿಯನ್ನು ನೀಡಲಿದೆ ಎಂದು ಕಾದುನೋಡಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸ್ಟೇಡಿಯಂ ಸುತ್ತಮುತ್ತ ಬಿಗಿ ಭದ್ರತೆ

ಐಪಿಎಲ್ ಪಂದ್ಯ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ನೀಡಲಾಗಿದೆ. ಐಪಿಎಲ್ ಪಂದ್ಯ ಬಂದೋಬಸ್ತ್‌ಗೆ 1,200 ಪೊಲೀಸರನ್ನು ನಿಯೋಜಿಸಲಾಗಿದೆ.

ನಾಲ್ವರು ಡಿಸಿಪಿಗಳು, 12 ಎಸಿಪಿ, 28 ಇನ್ಸ್ಪೆಕ್ಟರ್, 80 ಸಬ್ ಇನ್ಸ್ಪೆಕ್ಟರ್ ಸೇರಿ ಒಟ್ಟು 1,200 ಪೊಲೀಸರನ್ನು ಕ್ರೀಡಾಂಗಣದ ಸುತ್ತಮುತ್ತ ನಿಯೋಜಿಸಲಾಗಿದೆ. 4 ಕೆಎಸ್‌ಆರ್‌ಪಿ ತುಕಡಿ, ಹೋಂ ಗಾರ್ಡ್ ಸಹ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...