ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ದೊಡ್ಡ ಗಣೇಶ್ ನೇಮಕ

Date:

ಟೀಮ್ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ದೊಡ್ಡ ಗಣೇಶ್ ಅವರು ಕೀನ್ಯಾ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದಾರೆ. 2012-13 ರಲ್ಲಿ ಗೋವಾ ತಂಡದ ಕೋಚ್ ಆಗಿ ಕರ್ನಾಟಕ ವೇಗಿ ದೊಡ್ಡ ಗಣೇಶ್ ಕಾರ್ಯ ನಿರ್ವಹಿಸಿದ್ದರು,

ದೊಡ್ಡ ಗಣೇಶ್ ಅವರ ನೇತೃತ್ವದಲ್ಲಿ ಕೀನ್ಯಾ ತಂಡವು ಮುಂಬರುವ ಐಸಿಸಿ ಡಿವಿಷನ್ 2 ಚಾಲೆಂಜ್ ಲೀಗ್​​ನಲ್ಲಿ ಕಣಕ್ಕಿಳಿಯಲಿದೆ. ಈ ಲೀಗ್​ನಲ್ಲಿ ಕೀನ್ಯಾ ತಂಡದ ಎದುರಾಳಿಗಳಾಗಿ ಪಪುವಾ ನ್ಯೂಗಿನಿಯಾ, ಕತಾರ್, ಡೆನ್ಮಾರ್ಕ್ ಮತ್ತು ಜರ್ಸಿ ತಂಡಗಳು ಕಾಣಿಸಿಕೊಳ್ಳಲಿದೆ.

ಅಕ್ಟೋಬರ್ ತಿಂಗಳಲ್ಲಿ ಟಿ20 ವಿಶ್ವಕಪ್ ಆಫ್ರಿಕಾ ವಿಭಾಗದ ಅರ್ಹತಾ ಸುತ್ತು ನಡೆಯಲಿದ್ದು, ಈ ಸುತ್ತಿನಲ್ಲಿ ಕೀನ್ಯಾ ತಂಡ ಕಾಣಿಸಿಕೊಳ್ಳಲಿದೆ. ಹೀಗಾಗಿ ಒಂದು ಕಾಲದ ಬಲಿಷ್ಠ ತಂಡ ಎನಿಸಿಕೊಂಡಿದ್ದ ಕೀನ್ಯಾ ತಂಡವನ್ನು ಮತ್ತೆ ಮುನ್ನಲೆಗೆ ತರುವ ಮಹತ್ವದ ಜವಾಬ್ದಾರಿ ದೊಡ್ಡ ಗಣೇಶ್ ಅವರ ಮುಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಪ್ಯಾರಿಸ್ ಒಲಿಂಪಿಕ್ಸ್‌ಗೆ ವರ್ಣರಂಜಿತ ತೆರೆ: ಲಾಸ್ ಏಂಜಲೀಸ್‌ಗೆ ಧ್ವಜ ಹಸ್ತಾಂತರ

1990-2000 ರಲ್ಲಿ ದೇಶೀಯ ಅಂಗಳದಲ್ಲಿ ಸಂಚಲನ ಸೃಷ್ಟಿಸಿದ್ದ ದೊಡ್ಡ ಗಣೇಶ್ ಟೀಮ್ ಇಂಡಿಯಾ ಪರ ಒಟ್ಟು 5 ಪಂದ್ಯಗಳನ್ನಾಡಿದ್ದಾರೆ. ಭಾರತದ ಪರ 4 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕರ್ನಾಟಕ ವೇಗಿ 5 ವಿಕೆಟ್ ಕಬಳಿಸಿದ್ದರು. ಹಾಗೆಯೇ 1997 ರಲ್ಲಿ ನಡೆದ ಝಿಂಬಾಬ್ವೆ ವಿರುದ್ಧ ಏಕೈಕ ಏಕದಿನ ಪಂದ್ಯವಾಡಿದ್ದ ದೊಡ್ಡ ಗಣೇಶ್ ಅವರು ಒಂದು ವಿಕೆಟ್ ಪಡೆದಿದ್ದರು.

ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 104 ಪಂದ್ಯಗಳಲ್ಲಿ 20355 ಎಸೆತಗಳನ್ನು ಎಸೆದಿರುವ ದೊಡ್ಡ ಗಣೇಶ್ 10739 ರನ್​ಗಳನ್ನು ನೀಡಿ 365 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 89 ಲೀಸ್ಟ್ ಎ ಕ್ರಿಕೆಟ್​ನಲ್ಲಿ 4346 ಎಸೆತಗಳ ಮೂಲಕ ಒಟ್ಟು 128 ವಿಕೆಟ್ ಉರುಳಿಸಿದ್ದಾರೆ.ವಿಶೇಷ ಎಂದರೆ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ದೊಡ್ಡ ಗಣೇಶ್ 6 ಬಾರಿ 10 ಕ್ಕೂ ಅಧಿಕ ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 20 ಬಾರಿ 5 ಕ್ಕೂ ಹೆಚ್ಚು ವಿಕೆಟ್ ಉರುಳಿಸಿ ಕರ್ನಾಟಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ಯಾರಾಲಿಂಪಿಕ್ಸ್ | ಭಾರತಕ್ಕೆ ನಾಲ್ಕನೇ ಪದಕ; ಬೆಳ್ಳಿಗೆ ಗುರಿಯಿಟ್ಟ ಶೂಟರ್ ಮನೀಶ್ ನರ್ವಾಲ್‌

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ನಾಲ್ಕನೇ ಪದಕ ಲಭಿಸಿದ್ದು ಪುರುಷರ 10...

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ | ಚಿನ್ನ ಗೆದ್ದ ಅವನಿ ಲೆಖರಾ, ಮೋನಾ ಅಗರ್ವಾಲ್‌ಗೆ ಕಂಚು

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರ 10 ಮೀಟರ್ ಏರ್ ರೈಫಲ್ ಫೈನಲ್‌ನಲ್ಲಿ ಭಾರತದ...

ಅಮಿತ್ ಶಾ ಮಗ ಜಯ್ ಶಾಗೆ 35 ವರ್ಷಕ್ಕೇ 12 ಹುದ್ದೆ; ಪದವೀಧರರಿಗೆ ಪಕೋಡ!

ಬಿಜೆಪಿ ನಾಯಕರು ಸಾರ್ವಜನಿಕ ಭಾಷಣಗಳಲ್ಲಿ, ಸಂಘದ ಸಭೆಗಳಲ್ಲಿ ಧರ್ಮದ ಅಮಲೇರಿಸುವ, ದ್ವೇಷ...

ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಮಂಗಳವಾರ,...