ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಕರ್ನಾಟಕದ ಆಟಗಾರ ಡೇವಿಡ್ ಜಾನ್ಸನ್ ನಿಧನ: ಆತ್ಮಹತ್ಯೆ ಶಂಕೆ?

Date:

Advertisements

ಭಾರತ ತಂಡದ ಮಾಜಿ ಕ್ರಿಕೆಟಿಗ, ಕರ್ನಾಟಕದ ರಣಜಿ ಆಟಗಾರ ಡೇವಿಡ್ ಜಾನ್ಸನ್​(52) ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು(ಜೂನ್‌ 20) ನಿಧನರಾಗಿದ್ದಾರೆ.

ಕೊತ್ತನೂರು ಬಳಿ ಇರುವ ತಮ್ಮ ಅಪಾರ್ಟ್​ಮೆಂಟ್‌ನ ಬಾಲ್ಕನಿ​ ಮೇಲಿಂದ ಬಿದ್ದಿದ್ದು,ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಡೇವಿಡ್ ಜಾನ್ಸನ್ ಅವರು ಅನಾರೋಗ್ಯ ಕಾರಣ ಖಿನ್ನತೆಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. 1996ರಲ್ಲಿ ಭಾರತ​ ತಂಡದ ಪರ ಟೆಸ್ಟ್​ ಪಂದ್ಯ ಆಡಿದ್ದ ಡೇವಿಡ್ ಜಾನ್ಸನ್, ಕರ್ನಾಟಕ ರಣಜಿ ತಂಡದಲ್ಲಿ ಹಲವು ಪಂದ್ಯಗಳನ್ನು ಆಡಿದ್ದರು. ಕೆಪಿಎಲ್​ನಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡವನ್ನು ಪ್ರತಿನಿಧಿಸಿದ್ದರು.

ಸದ್ಯ ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಘಟನೆಯ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಡೇವಿಡ್ ಜಾನ್ಸನ್ ನಿಧನಕ್ಕೆ ಕ್ರಿಕೆಟ್ ವಲಯದಿಂದ ಸಂತಾಪಗಳು ವ್ಯಕ್ತವಾಗಿವೆ. ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಹಿರಿಯ ಕ್ರಿಕೆಟಿಗ ಜಾನ್ಸನ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ‘ಚಿನ್ನಸ್ವಾಮಿ’ಯಲ್ಲಿ ಮಹಿಳೆಯರ ಕಮಾಲ್: 4 ಶತಕಗಳು ದಾಖಲಾದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ

1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ್ದ ಡೇವಿಡ್ ಜಾನ್ಸನ್, ಟೀಂ ಇಂಡಿಯಾ ಪರ ಎರಡು ಟೆಸ್ಟ್ ಪಂದ್ಯಗಳನ್ನಾಡಿ ಮೂರು ವಿಕೆಟ್ ಕಬಳಿಸಿದ್ದರು. ಆ ಕಾಲಘಟ್ಟದಲ್ಲಿ ಟೀಂ ಇಂಡಿಯಾ ಪರ ಅತಿವೇಗದ ಬೌಲಿಂಗ್ ಮಾಡಿದ ದಾಖಲೆ ಡೇವಿಡ್ ಜಾನ್ಸನ್ ಅವರ ಹೆಸರಿನಲ್ಲಿತ್ತು.

1996ರಲ್ಲಿ ಭಾರತ ಟೆಸ್ಟ್ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಡೇವಿಡ್ ಜಾನ್ಸನ್, ಆಸ್ಟ್ರೇಲಿಯಾ ತಂಡವು ಭಾರತ ಪ್ರವಾಸ ಮಾಡಿದ್ದಾಗ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದರು. ಆ ಸರಣಿಯಲ್ಲಿ ಡೇವಿಡ್ ಜಾನ್ಸನ್ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಅವರನ್ನು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಡೇವಿಡ್ ಜಾನ್ಸನ್‌ ಕರ್ನಾಟಕದ ಒಟ್ಟು 39 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನಾಡಿ ಒಟ್ಟು 125 ವಿಕೆಟ್ ಕಬಳಿಸಿ ಮಿಂಚಿದ್ದರು. ಕೆಳಕ್ರಮಾಂಕದಲ್ಲಿ ಬ್ಯಾಟರ್ ಆಗಿದ್ದ ಜಾನ್ಸನ್ 437 ರನ್ ಬಾರಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

Download Eedina App Android / iOS

X