2024ರ ವರ್ಷದ ಆರಂಭದಲ್ಲೇ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಡೇವಿಡ್ ವಾರ್ನರ್

Date:

ಪಾಕಿಸ್ತಾನ ವಿರುದ್ಧದ ತಮ್ಮ ವಿದಾಯ ಟೆಸ್ಟ್‌ ಪಂದ್ಯ ಆಡಲು ಸಜ್ಜಾಗುತ್ತಿರುವ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್, ಏಕದಿನ ಕ್ರಿಕೆಟ್‌ಗೆ ಹಠಾತ್‌ ವಿದಾಯ ಘೋಷಿಸಿದ್ದಾರೆ. ಆ ಮೂಲಕ ವರ್ಷದ ಆರಂಭದ ದಿನವೇ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.

- Advertisement -

2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಟ್ರೋಫಿ ಜಯಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ವಾರ್ನರ್, ಆಗಲೇ ಏಕದಿನ ಕ್ರಿಕೆಟ್‌ ನಿವೃತ್ತಿ ಘೋಷಿಸುವ ಬಗ್ಗೆ ನಿರ್ಧರಿಸಿದ್ದರು. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 535 ರನ್ ಗಳಿಸಿದ್ದ ವಾರ್ನರ್ ಆಸ್ಟ್ರೇಲಿಯಾ ಪರ ಹೆಚ್ಚು ರನ್‌ ಗಳಿಸಿದ್ದ ಬ್ಯಾಟರ್ ಕೂಡ ಆಗಿದ್ದರು.161 ಏಕದಿನ ಪಂದ್ಯಗಳಿಂದ ಆಸ್ಟ್ರೇಲಿಯಾದ ಮಾಜಿ ನಾಯಕ 6932 ರನ್ ಗಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ದೃಷ್ಟಿಯಿಂದ ವಾರ್ನರ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದರೂ 2025 ರಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದಾಗಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಹೇಳಿದ್ದಾರೆ.

ಸಿಡ್ನಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ತಮ್ಮ ಏಕದಿನ ನಿವೃತ್ತಿಯ ಬಗ್ಗೆ ಘೋಷಿಸಿದ್ದಾರೆ.

“ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ಸಲುವಾಗಿ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಏಕದಿನ ವಿಶ್ವಕಪ್ ಟೂರ್ನಿಯ ಸಮಯದಲ್ಲೇ ನಾನು ಈ ಬಗ್ಗೆ ಕ್ರಿಕೆಟ್ ಮಂಡಳಿಗೆ ತಿಳಿಸಿದ್ದೆ. ಭಾರತದ ವಿರುದ್ಧ ಅದರ ನೆಲದಲ್ಲೇ ವಿಶ್ವಕಪ್ ಗೆದ್ದಿರುವುದು ದೊಡ್ಡ ಸಾಧನೆಯಾಗಿದೆ,” ಎಂದು ಹೇಳಿದ್ದಾರೆ.

ಏಕದಿನ ಕ್ರಿಕೆಟ್‌ಗೆ ಡೇವಿಡ್ ವಾರ್ನರ್ ವಿದಾಯ ಹೇಳಿದ್ದರೂ ಕೂಡ, “2025ರಲ್ಲಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾಕ್ಕೆ ಆರಂಭಿಕ ಆಟಗಾರರ ಅವಶ್ಯಕತೆ ಕಂಡುಬಂದರೆ ನಿವೃತ್ತಿ ನಿರ್ಧಾರದಿಂದ ವಾಪಸ್ ಬಂದು ಆಡುತ್ತೇನೆ” ಎಂದೂ ತಿಳಿಸಿದ್ದಾರೆ.

“ಮುಂದಿನ ದಿನಗಳಲ್ಲಿ ಏಕದಿನ ರೂಪದ ಚಾಂಪಿಯನ್ಸ್ ಟ್ರೋಫಿ ಬರುತ್ತದೆ ಎಂಬುದು ನನಗೆ ತಿಳಿದಿದೆ. ಈ ಎರಡು ವರ್ಷಗಳಲ್ಲಿ ನಾನು ಉತ್ತಮ ಕ್ರಿಕೆಟ್ (ಫ್ರಾಂಚೈಸಿ ಲೀಗ್) ಆಡಿದರೆ ಮತ್ತು ಆಸ್ಟ್ರೇಲಿಯಾಕ್ಕೆ ಆರಂಭಿಕ ಆಟಗಾರನ ಸಮಸ್ಯೆ ಕಂಡುಬಂದರೆ ತಂಡಕ್ಕೆ ನಾನು ಲಭ್ಯವಾಗುತ್ತೇನೆ” ಎಂದು ಡೇವಿಡ್ ವಾರ್ನರ್ ಹೇಳಿದ್ದಾರೆ.

2009 ಜನವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೊಬರ್ಟ್‌ನಲ್ಲಿ ನಡೆದಿದ್ದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಡೇವಿಡ್ ವಾರ್ನರ್ 97.26ರ ಸ್ಟ್ರೆಕ್ ರೇಟ್‌ನಲ್ಲಿ 161 ಪಂದ್ಯಗಳಿಂದ 6932 ರನ್ ಗಳಿಸಿದ್ದು, 22 ಶತಕ ಹಾಗೂ 33 ಅರ್ಧಶತಕ ಸಿಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...