ಇಂದು ಮಹಿಳಾ ಐಪಿಎಲ್ ಫೈನಲ್; ಚೊಚ್ಚಲ ಪ್ರಶಸ್ತಿ ಪಟ್ಟ ಯಾರಿಗೆ?

Date:

ಚೊಚ್ಚಲ ಮಹಿಳಾ ಪ್ರೀಮಿಯರ್‌ ಲೀಗ್‌ ಟೂರ್ನಿಯ ಚಾಂಪಿಯನ್ ಪಟ್ಟಕ್ಕಾಗಿ ‘ಫೈನಲ್ ಫೈಟ್’ ಇಂದು (ಮಾರ್ಚ್‌ 26) ನಡೆಯಲಿದೆ.

ಹರ್ಮನ್ ಪ್ರೀತ್ ಕೌರ್ ಸಾರಥ್ಯದ ಮುಂಬೈ ಇಂಡಿಯನ್ಸ್ ಮತ್ತು ಮೆಗ್ ಲ್ಯಾನಿಂಗ್ ನಾಯಕಿಯಾಗಿರುವ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಮುಂಬೈನ ಬ್ರಬೋರ್ನ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ.

ಲೀಗ್ ಹಂತದಲ್ಲಿ ಅಗ್ರಸ್ಥಾನಿಯಾಗಿ ಡೆಲ್ಲಿ ಕ್ಯಾಪಿಟಲ್ಸ್ ನೇರವಾಗಿ ಫೈನಲ್ ಪ್ರವೇಶಿಸಿದೆ. ಮತ್ತೊಂದೆಡೆ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು 72 ರನ್‌ಗಳ ಅಂತರದಿಂದ ಮಣಿಸಿ ಮುಂಬೈ ಪ್ರಶಸ್ತಿ ಸುತ್ತಿನ ಪಂದ್ಯಕ್ಕೆ ಅರ್ಹತೆ ಪಡೆದಿದೆ.

ಲೀಗ್ ಹಂತದಲ್ಲಿ ಉಭಯ ತಂಡಗಳು 2 ಬಾರಿ ಮುಖಾಮುಖಿ ಆಗಿದ್ದು, ತಲಾ ಒಂದು ಗೆಲುವು-ಸೋಲು ಕಂಡಿವೆ. ಕಳೆದ ಮಂಗಳವಾರ ನಡೆದ ತನ್ನ ಅಂತಿಮ ಲೀಗ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿಯಾಗಿ ಮಣಿಸುವ ಮೂಲಕ ಡೆಲ್ಲಿ, ನೇರವಾಗಿ ಫೈನಲ್‌ ಹಂತಕ್ಕೆ ಅರ್ಹತೆ ಪಡೆದಿತ್ತು.

ಟೂರ್ನಿಯ ಆರಂಭದಲ್ಲಿ ಸತತ 5 ಪಂದ್ಯಗಳನ್ನು ಗೆದ್ದು ಅಜೇಯರಾಗಿ ಮುನ್ನಡೆದಿದ್ದ ಮುಂಬೈ ಆ ಬಳಿಕ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿತು. ನಂತರದಲ್ಲಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ. ನಾಯಕಿ ಹರ್ಮನ್ ಅವರಿಂದ ನಿರೀಕ್ಷಿತ ಪ್ರದರ್ಶನ ಹೊರಹೊಮ್ಮದೇ ಇರುವುದು ತಂಡಕ್ಕೆ ಹಿನ್ನಡೆಯಾದರೆ, ಬಲಿಷ್ಠ ಬೌಲಿಂಗ್ ವಿಭಾಗವನ್ನು ಹೊಂದಿರುವುದು ಪ್ಲಸ್ ಆಗಿದೆ. ನ್ಯಾಟ್ ಸ್ಕೀವರ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಲೇ ಬಂದಿದ್ದಾರೆ. ಇದುವರೆಗೂ 2 ಅರ್ಧಶತಕ ಒಳಗೊಂಡಂತೆ ಒಟ್ಟು 272 ರನ್ ದಾಖಲಿಸಿರುವ ಸ್ಕೀವರ್, 10 ವಿಕೆಟ್‌ಗಳನ್ನು ಪಡೆಯುವ ಮೂಲಕ ಸ್ಟಾರ್ ಆಲ್ ರೌಂಡರ್ ಆಗಿ ಹೊರಹೊಮ್ಮಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್

ಬ್ಯಾಟಿಂಗ್‌ನಲ್ಲಿ ಆಸ್ಟ್ರೇಲಿಯದ ದಿಗ್ಗಜ ಆಟಗಾರ್ತಿ ಮೆಗ್ ಲ್ಯಾನಿಂಗ್ ಮತ್ತು ಆಲ್ ರೌಂಡರ್ ಮಾರಿಝಾನೆ ಕಾಪ್ ಅವರನ್ನು ಡೆಲ್ಲಿ ತಂಡವು ಪ್ರಮುಖವಾಗಿ ನೆಚ್ಚಿಕೊಂಡಿದೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೆಗ್ ಲ್ಯಾನಿಂಗ್ ಸಾರಥ್ಯದಲ್ಲಿ ಆಸ್ಟ್ರೇಲಿಯ, ದಾಖಲೆಯ 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 | ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ರೋಚಕ ಗೆಲುವು: ಜೋಶ್ ಇಂಗ್ಲಿಸ್ ಶತಕ ವ್ಯರ್ಥ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್...

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.7 ಲಕ್ಷ ರೂ. ವಂಚನೆ, ದೂರು ದಾಖಲು

ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ...

ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂತರ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ...

ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾದ ಕ್ಯಾಪ್ಟನ್ ಯಾರು?

2007ರಲ್ಲಿ ರಾಹುಲ್ ದ್ರಾವಿಡ್ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಯುವ ಹೊತ್ತಿಗೆ ಮಹೇಂದ್ರ ಸಿಂಗ್...