ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ 2026 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು 6 ವಿಕೆಟ್‌ಗಳ ಸೋಲನ್ನು ಕಂಡಿದೆ.
ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡವು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು. 176 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.5 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಇದನ್ನು ಓದಿದ್ದೀರಾ? ಐಪಿಎಲ್ 2026: ಬೆಂಗಳೂರಿನಿಂದ ಎಲ್ಲ ಆರ್‌ಸಿಬಿ ಪಂದ್ಯಗಳು ಸ್ಥಳಾಂತರ
ಆರ್‌ಸಿಬಿ ಪರ ವೇಗಿ ಭುವನೇಶ್ವರ್ ಕುಮಾರ್ 26 ರನ್‌ಗಳಿಗೆ 3 ವಿಕೆಟ್ ಪಡೆದರೂ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ.
ಕೆ ಎಲ್ ರಾಹುಲ್ 34 ಎಸೆತಗಳಲ್ಲಿ 57 ರನ್ ಗಳಿಸಿ ತಂಡಕ್ಕೆ ಆಧಾರವಾದರು. ಟ್ರಿಸ್ಟಾನ್ ಸ್ಟಬ್ಸ್ ಅಜೇಯ 60 ರನ್ (47 ಎಸೆತ) ಗಳಿಸುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಡೇವಿಡ್ ಮಿಲ್ಲರ್ ಕೊನೆಯ ಓವರ್‌ನಲ್ಲಿ ಎರಡು ಅಮೋಘ ಸಿಕ್ಸರ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.





