ಐಪಿಎಲ್ 2025 | ಡೆಲ್ಲಿ ಕ್ಯಾಪಿಟಲ್ಸ್ ಸೂಪರ್‌ ಓವರ್ ಗೆಲುವಿನಲ್ಲಿ ಮಿಂಚಿದ ಸ್ಟಾರ್ಕ್

Date:

ಮಿಚೆಲ್‌ ಸ್ಟಾರ್ಕ್ ಮ್ಯಾಜಿಕ್‌ ಬೌಲಿಂಗ್‌ ನೆರವಿನಿಂದ ಸೂಪರ್‌ ಓವರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ರಾಜಸ್ಥಾನ ರಾಯಲ್ಸ್‌ ವಿರುದ್ಧ ರೋಚಕ ಜಯ ಸಾಧಿಸಿದೆ.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಆರಂಭಿಕ ಆಟಗಾರ ಜೇಕ್ ಫ್ರೇಸರ್ ಮೆಕ್​ಗುರ್ಕ್ 9 ರನ್ ಗಳಿಸಿದಾಗ ಜೈಸ್ವಾಲ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅಭಿಷೇಕ್ ಪೊರೆಲ್ 1 ಸಿಕ್ಸರ್, 5 ಬೌಂಡರಿಗಳೊಂದಿಗೆ 37 ಎಸೆತಗಳಲ್ಲಿ 49 ರನ್ ಗಳಿಸಿದಾಗ ಹಸರಂಗ ಬೌಲಿಂಗ್ ನಲ್ಲಿ ಪರಾಗ್ ಗೆ ಕ್ಯಾಚ್ ನೀಡುವ ಮೂಲಕ ಅರ್ಧ ಶತಕದಿಂದ ವಂಚಿತರಾದರು. ಕರುಣ್ ನಾಯರ್ ಶೂನ್ಯಕ್ಕೆ ರನ್ ಔಟಾಗುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದರು.

ನಂತರ ಬಂದ ಕೆ ಎಲ್ ರಾಹಲ್ ಎರಡು ಸಿಕ್ಸರ್,ಎರಡು ಬೌಂಡರಿಗಳೊಂದಿಗೆ 32 ಎಸೆತಗಳಲ್ಲಿ 38 ಮತ್ತು ನಾಯಕ ಅಕ್ಸರ್ ಪಟೇಲ್ 34 ರನ್ ಗಳಿಸಿದರು. ನಂತರ ತ್ರಿಸ್ಟನ್ ಸ್ಟುಬ್ಸ್ ಹಾಗೂ ಅಶುತೋಷ್ ಶರ್ಮಾ ಔಟಾಗದೆ ಕ್ರಮವಾಗಿ 34 ಮತ್ತು 15 ರನ್ ಗಳಿಸುವುದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಕಲೆ ಹಾಕಿತು. ರಾಜಸ್ಥಾನ ರಾಯಲ್ಸ್ ಪರ ಜೋಪ್ರಾ ಅರ್ಚರ್ 2 ವಿಕೆಟ್ ಪಡೆದರೆ, ಮಹೀಶ್ ತೀಕ್ಷ್ಣ ಮತ್ತು ವನಿದು ಹಸರಂಗ ತಲಾ ಒಂದೊಂದು ವಿಕೆಟ್ ಪಡೆದರು.

ಈ ಸುದ್ದಿ ಓದಿದ್ದೀರಾ? IPL 2025: ಬ್ಯಾಟರ್‌ಗಳು ಅಳತೆ ಮೀರಿದ ಬ್ಯಾಟ್ ಬಳಸುತ್ತಿದ್ದಾರೆಯೇ? ಅಂಪೈರ್‌ಗಳು ಪರಿಶೀಲಿಸುವುದೇಕೆ?

ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 189 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ರಾಜಸ್ಥಾನ ರಾಯಲ್ಸ್ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 4 ಸಿಕ್ಸರ್, 3 ಬೌಂಡರಿಗಳೊಂದಿಗೆ 37 ಎಸೆತಗಳಲ್ಲಿ 51 ರನ್ ಗಳಿಸಿ, ಕುಲದೀಪ್ ಯಾದವ್ ಬೌಲಿಂಗ್ ನಲ್ಲಿ ಔಟಾದರು. ನಾಯಕ ಸಂಜು ಸ್ಯಾಮ್ಸನ್ 31 ರನ್ ಗಳಿಸಿದಾಗ ಗಾಯಗೊಂಡು ಅರ್ಧಕ್ಕೆ ಪಂದ್ಯದಿಂದ ಹೊರಗೆ ಹೋದರು. ಬಳಿಕ ಬಂದ ರಿಯಾನ್ ಪರಾಗ್ 8, ನಿತೀಶ್ ರಾಣಾ 51, ಧ್ರುವ ಜುರೆಲ್ 26 ಮತ್ತು ಶಿಮ್ರಾನ್ ಹೆಟ್ಮೆಯರ್ ಔಟಾಗದೇ 15 ರನ್ ಗಳಿಸುವ ಮೂಲಕ ರಾಜಸ್ಥಾನ ರಾಯಲ್ಸ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿ ಪಂದ್ಯ ಟೈ ಆಯಿತು.ನಂತರ ನಡೆದ ಸೂಪರ್ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿತು.

ಸೂಪರ್‌ ಓವರ್‌ ಗೆಲುವು
ರಾಜಸ್ಥಾನ ಪರ ಹೆಟ್ಮೇಯರ್ ಮತ್ತು ಪರಾಗ್‌ ಕ್ರೀಸ್‌ಗೆ ಆಗಮಿಸಿದರು. ಸ್ಟಾರ್ಕ್ ಎಸೆದ ಮೊದಲ ಎಸೆತದಲ್ಲಿ ಯಾವುದೇ ರನ್‌ ಬಂದಿಲ್ಲ, ಎರಡನೇ ಎಸೆತದಲ್ಲಿ ಬೌಂಡರಿ ಹೊಡೆದ ಹೆಟ್ಮೇಯರ್‌ ಮೂರನೇ ಎಸೆತದಲ್ಲಿ ಒಂದು ರನ್‌ ತೆಗೆದರು. 4 ಎಸೆತವನ್ನು ಪರಾಗ್‌ ಬೌಂಡರಿಗೆ ಅಟ್ಟಿದ್ದರು. ಆದರೆ ಈ ಎಸೆತ ನೋಬಾಲ್‌ ಆಗಿತ್ತು. ಮರು ಎಸೆತದಲ್ಲಿ ಯಾವುದೇ ರನ್‌ ಬಂದಿಲ್ಲ. ಆದರೆ ಹೆಟ್ಮೇಯರ್‌ ಓಡಿದ್ದರಿಂದ ಪರಾಗ್‌ ರನೌಟ್‌ ಆದರು. 5ನೇ ಎಸತದಲ್ಲಿ ಹೆಟ್ಮೆಯರ್‌ 2 ರನ್‌ ಕದಿಯಲು ಮುಂದಾಗಿದ್ದರು. ಆದರೆ 2 ರನ್‌ ಓಡುವ ವೇಳೆ ಜೈಸ್ವಾಲ್‌ ರನೌಟ್‌ ಆದರು. ಎರಡು ವಿಕೆಟ್‌ ಪತನಗೊಂಡ ಪರಿಣಾಮ ರಾಜಸ್ಥಾನದ ಇನಿಂಗ್ಸ್‌ 11 ರನ್‌ಗಳಿಗೆ ಅಂತ್ಯವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...