ಟೀಮ್ ಇಂಡಿಯಾ ಕೋಚ್ | ‘ದೇಶಕ್ಕಾಗಿ ಒಪ್ಪಿಕೊಳ್ಳಿ’ ಎಂದು ಗೌತಮ್‌ ಗಂಭೀರ್‌ ಬಳಿ ತಿಳಿಸಿದ್ದ ಜಯ್ ಶಾ!

Date:

ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಬಳಿಕ ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಮುಖ್ಯ ಕೋಚ್ ಆಗಿ ನೇಮಕವಾಗಲಿದ್ದಾರಂದು ವರದಿಯಾಗಿದೆ.

- Advertisement -

ಟೀಮ್‌ ಇಂಡಿಯಾ ಹೆಡ್‌ ಕೋಚ್‌ ಸಂಬಂಧ ಗೌತಮ್‌ ಗಂಭೀರ್‌ ಹಾಗೂ ಬಿಸಿಸಿಐ ನಡುವೆ ಒಪ್ಪಂದ ಆಗಿದೆ ಎಂದು ಐಪಿಎಲ್‌ನ ಫ್ರಾಂಚೈಸಿ ಮಾಲೀಕರೊಬ್ಬರು ‘ಕ್ರಿಕ್‌ಬಝ್‌’ಗೆ ತಿಳಿಸಿದ್ದಾರೆ. ಹಾಗಾಗಿ ಶೀಘ್ರದಲ್ಲಿಯೇ ಬಿಸಿಸಿಐ ಅಧಿಕೃತವಾಗಿ ಪ್ರಕಟಿಸಲಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

2024ರ ಐಪಿಎಲ್‌ ಟೂರ್ನಿಯಲ್ಲಿ ಗೌತಮ್‌ ಗಂಭೀರ್‌ ಮೆಂಟರ್‌ ಆಗಿದ್ದ ಕೋಲ್ಕತಾ ನೈಟ್‌ ರೈಡರ್ಸ್ ತಂಡ ಚಾಂಪಿಯನ್‌ ಆಗಿದೆ. ಫೈನಲ್ ಪಂದ್ಯದ ಬಳಿಕ ಜಯ್ ಶಾ ಹಾಗೂ ಗೌತಮ್ ಗಂಭೀರ್ ಮಾತುಕತೆ ನಡೆಸುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವೈರಲ್ ಬೆನ್ನಲ್ಲೇ ಗೌತಮ್ ಗಂಭೀರ್, ಟೀಮ್ ಇಂಡಿಯಾ ಕೋಚ್ ಆಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಪರಸ್ಪರ ಮಾತುಕತೆ ನಡೆಸಿದ್ದರು. ಈ ಮಾತುಕತೆಯ ವೇಳೆ, ‘ದೇಶಕ್ಕಾಗಿ ನೀವು ಒಪ್ಪಿಕೊಳ್ಳಬೇಕಿದೆ(ದೇಶ್ ಕೇಲಿಯೇ ಕರ್ನಾ ಹೇ)’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಗೌತಮ್ ಗಂಭೀರ್ ಅವರಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.

ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಿಸುತ್ತಿದ್ದು, 2023ರ ಏಕದಿನ ವಿಶ್ವಕಪ್‌ ವೇಳೆಗೆ ರಾಹುಲ್ ದ್ರಾವಿಡ್‌ ಅವರ ಅವಧಿ ಮುಗಿದಿದೆ. ಬಿಸಿಸಿಐ ದ್ರಾವಿಡ್ ಅವರ ಅವಧಿಯನ್ನುಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿರುವ 2024ರ ಟಿ20 ವಿಶ್ವಕಪ್‌ ತನಕ ಮುಂದುವರಿಸಿದೆ.

ಭಾರತ ತಂಡದಲ್ಲಿ ರಾಹುಲ್‌ ದ್ರಾವಿಡ್‌ ಅವರ ಸ್ಥಾನವನ್ನು ತುಂಬಲು ಉತ್ಸುಕನಾಗಿದ್ದೇನೆಂದು ಗೌತಮ್ ಗಂಭೀರ್‌ ಅವರು, ತಮ್ಮ ಆತ್ಮೀಯ ಸ್ನೇಹಿತರ ಬಳಿ ಹೇಳಿಕೊಂಡಿರುವುದಾಗಿ ತಿಳಿದುಬಂದಿದೆ.

ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂರು ಬಾರಿ ಕೂಡ ಗೌತಮ್ ಗಂಭೀರ್ ಕೆಕೆಆರ್ ತಂಡದ ಭಾಗವಾಗಿದ್ದರು ಎಂಬುದು ವಿಶೇಷ. ಅಂದರೆ 2012 ಮತ್ತು 2014 ರಲ್ಲಿ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ಚಾಂಪಿಯನ್ ಪಟ್ಟಕ್ಕೇರಿದರೆ, 2024 ರಲ್ಲಿ ಗೌತಿ ಅವರ ಮಾರ್ಗದರ್ಶನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಹೀಗಾಗಿಯೇ ಟಿ20 ವಿಶ್ವಕಪ್​ ಬಳಿಕ ರಾಹುಲ್ ದ್ರಾವಿಡ್ ಅವರ ಉತ್ತರಾಧಿಕಾರಿಯಾಗಿ ಗೌತಮ್ ಗಂಭೀರ್ ಅವರನ್ನು ನೇಮಿಸಲು ಬಿಸಿಸಿಐ ಆಸಕ್ತಿವಹಿಸಿದೆ.

ಇದನ್ನು ಓದಿದ್ದೀರಾ? ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ನರೇಂದ್ರ ಮೋದಿ, ಅಮಿತ್ ಶಾ, ಸಚಿನ್ !

ಟೀ ಇಂಡಿಯಾ ಮುಖ್ಯ ಕೋಚ್‌ ಸ್ಥಾನಕ್ಕೆ ಕರೆಯಲಾಗಿದ್ದ ಅರ್ಜಿಯ ಅವಧಿ ಸೋಮವಾರ ಮುಗಿದಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...