ಭಾರಿ ಸೋಲಿನ ಹೊರತಾಗಿಯೂ RCB ದಾಖಲೆಯನ್ನು ಮುರಿದ CSK: ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿ

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ(ಏ.5) ನಡೆದ ಐಪಿಎಲ್‌ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ 43 ರನ್‌ಗಳ ಭಾರಿ ಸೋಲನ್ನು ಅನುಭವಿಸಿದರೂ ಸಹ, ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಮಹತ್ವದ ದಾಖಲೆಯೊಂದನ್ನು ಬರೆಯಲು ಯಶಸ್ವಿಯಾಗಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

- Advertisement -

250 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಸಿಎಸ್‌ಕೆ ತಂಡ 207 ರನ್‌ಗಳಿಗೆ ಆಲೌಟ್ ಆಗುವುದರೊಂದಿಗೆ, ಐಪಿಎಲ್‌ನಲ್ಲಿ ಅತ್ಯಧಿಕ ಬಾರಿ 200ಕ್ಕೂ ಹೆಚ್ಚು ರನ್‌ಗಳನ್ನು ಕಲೆಹಾಕಿದ ತಂಡಗಳ ಪಟ್ಟಿಯಲ್ಲಿ ಆರ್‌ಸಿಬಿಯನ್ನು ಹಿಂದಿಕ್ಕಿ ಮೊದಲನೇ ಸ್ಥಾನಕ್ಕೇರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಪಂದ್ಯದ ಮೂಲಕ ಸಿಎಸ್‌ಕೆ ತಂಡವು ಐಪಿಎಲ್ ನಲ್ಲಿ ಒಟ್ಟು 37 ಬಾರಿ 200ಕ್ಕೂ ಹೆಚ್ಚು ರನ್ ಗಳಿಸಿದ ಸಾಧನೆಯನ್ನು ಮಾಡಿದೆ. ಇದುವರೆಗೂ 36 ಬಾರಿ ಈ ಸಾಧನೆ ಮಾಡಿದ್ದ ಆಸ್‌ಸಿಬಿ ತಂಡವನ್ನು ಸಿಎಸ್‌ಕೆ ಇದೀಗ ಎರಡನೇ ಸ್ಥಾನಕ್ಕೆ ತಳ್ಳಿದೆ. ಈ ಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ (33) ಮೂರನೇ ಸ್ಥಾನದಲ್ಲಿ, ಮುಂಬೈ ಇಂಡಿಯನ್ಸ್ (32) ನಾಲ್ಕನೇ ಸ್ಥಾನದಲ್ಲಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (30) ಐದನೇ ಸ್ಥಾನದಲ್ಲಿ ಮುಂದುವರಿದಿವೆ. ಇತ್ತೀಚಿನ ಐಪಿಎಲ್ ಪಂದ್ಯಗಳಲ್ಲಿ 200 ರನ್‌ಗಳ ಗಳಿಕೆ ಸಾಧಾರಣವಾಗಿದ್ದರೂ ಸಹ, ಎದುರಾಳಿಯೆದುರು ಸಂಪೂರ್ಣವಾಗಿ ಹಿನ್ನಡೆ ಅನುಭವಿಸಿದ ಪಂದ್ಯದಲ್ಲಿಯೇ ಸಿಎಸ್‌ಕೆ ಈ ದಾಖಲೆ ಬರೆದಿರುವುದು ವಿಶೇಷವಾಗಿದೆ.

ಆರ್‌ಸಿಬಿ ನೀಡಿದ್ದ 250 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಸಿ ಎಸ್ ಕೆ ಆರಂಭದಲ್ಲಿಯೇ ಎಡವಿತು. ಪವರ್‌ಪ್ಲೇ ಅಷ್ಟರಲ್ಲಿಯೇ 30 ರನ್‌ಗಳಿಗೆ 3 ಮುಖ್ಯ ವಿಕೆಟ್‌ಗಳನ್ನು ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತು. ಸರ್ಫರಾಜ್ ಖಾನ್ ಅವರ ಆಕ್ರಮಣಕಾರಿ ಅರ್ಧಶತಕ ಹಾಗೂ ಕೆಳ ಕ್ರಮಾಂಕದ ಆಟಗಾರರ ನೆರವಿನಿಂದ ತಂಡ 200 ರನ್‌ಗಳ ಗಡಿ ದಾಟಿತು. ಆದರೆ ಗುರಿ ತುಂಬಾ ದೊಡ್ಡದಿದ್ದ ಕಾರಣ, 207 ರನ್‌ಗಳಿಗೆ ಸಿ ಎಸ್ ಕೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು ಶರಣಾಯಿತು. ಈ ಸೋಲಿನೊಂದಿಗೆ ಸಿಎಸ್‌ಕೆ ಹೊಸ ದಾಖಲೆ ಬರೆದರೂ, ಫಲಿತಾಂಶ ಅವರಿಗೆ ನಿರಾಸೆ ತಂದಿದೆ.

ಇದನ್ನು ಓದಿದ್ದೀರಾ? IPL | ಒಂದೆಡೆ ಮನರಂಜನೆಯ ಮಹಾಪೂರ, ಮತ್ತೊಂದೆಡೆ ಜೂಜಾಟದ ಕರಾಳ ಘೋರ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟರ್‌ಗಳ ಅಬ್ಬರ ಮುಗಿಲು ಮುಟ್ಟಿತ್ತು. ಆರಂಭದಲ್ಲಿ ದೇವದತ್ ಪಡಿಕ್ಕಲ್ ಆಕರ್ಷಕ 50 ರನ್‌ಗಳಿಸಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ನಂತರ ಬಂದ ರಜತ್ ಪಾಟಿದಾರ್ ಮತ್ತು ಟಿಮ್ ಡೇವಿಡ್ ಜೋಡಿ ಸಿಎಸ್‌ಕೆ ಬೌಲರ್‌ಗಳ ಮೇಲೆ ಪ್ರಬಲವಾಗಿ ಎರಗಿತು. ನಾಲ್ಕನೇ ವಿಕೆಟ್‌ಗೆ ಜೊತೆಯಾದ ಈ ಇಬ್ಬರು ಬೌಲರ್ ಗಳನ್ನು ನಿರ್ದಾಕ್ಷಿಣ್ಯವಾಗಿ ದಂಡಿಸಿದರು. ಈ ಜೋಡಿಯ ಸ್ಫೋಟಕ ಆಟದ ನೆರವಿನಿಂದ ಆರ್‌ಸಿಬಿ ನಿಗದಿತ 20 ಓವರ್ ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 250 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು.

ಕೊನೆಯ 5 ಓವರ್ ಗಳಲ್ಲಿ ಆರ್‌ಸಿಬಿ ಬ್ಯಾಟರ್‌ಗಳು ಕೇವಲ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸಿದರು. ಈ ಕೊನೆಯ ಅವಧಿಯಲ್ಲಿ ಭರ್ಜರಿ 97 ರನ್‌ಗಳನ್ನು ಸಿಡಿಸಿದರು. ರಜತ್ ಪಾಟಿದಾರ್ ಕೇವಲ 19 ಚಂಡುಗಳಲ್ಲಿ ಅಜೇಯ 48 ರನ್ ಗಳಿಸಿದರೆ, ಟಿಮ್ ಡೇವಿಡ್ 25 ಚಂಡುಗಳಲ್ಲಿ 8 ಭರ್ಜರಿ ಸಿಕ್ಸರ್‌ಗಳೊಂದಿಗೆ ಸ್ಫೋಟಕ 70 ರನ್ ಚಚ್ಚಿದರು. ಸಿಎಸ್‌ಕೆ ಬೌಲರ್‌ಗಳಿಗೆ ಯಾವುದೇ ಅವಕಾಶ ನೀಡದ ಈ ಜೋಡಿಯ ಸಾಧನೆಯೇ ಆರ್‌ಸಿಬಿಗೆ 43 ರನ್‌ಗಳ ಭರ್ಜರಿ ಗೆಲುವು ತಂದುಕೊಟ್ಟಿತ್ತು. ಈ ಗೆಲುವಿನೊಂದಿಗೆ ಆರ್‌ಸಿಬಿ ತಂಡ ತನ್ನ ಅಭಿಮಾನಿಗಳಿಗೆ ಒಂದು ಅಸಾಧಾರಣ ಮನರಂಜನೆಯನ್ನು ನೀಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...