ಬಿಸಿಸಿಐ ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ

Date:

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್ ಸೈಕಿಯಾ ನೇಮಕವಾಗಿದ್ದಾರೆ.

- Advertisement -

ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ ಅಧ್ಯಕ್ಷರಾಗಿ ಜಯ್‌ ಶಾ ಆಯ್ಕೆಯಾದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಒಂದು ತಿಂಗಳ ಬಳಿಕ ಸೈಕಿಯಾ ನೇಮಕಗೊಂಡಿದ್ದಾರೆ ಎಂದು ವರದಿಯಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಇಂದು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ , ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಹಾಗೂ ಕೋಚ್‌ ಗೌತಮ್‌ ಗಂಭೀರ್‌ ಅವರೊಂದಿಗೆ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯಲ್ಲಿ ಇತ್ತೀಚಿನ ಬಾರ್ಡರ್‌ ಗವಾಸ್ಕರ್‌ ಟ್ರೋಫಿಯಲ್ಲಿ ಟೀಂ ಇಂಡೀಯಾ ಸೋಲಿಗೆ ಕಾರಣಗಳನ್ನು ಆತ್ಮಾವಲೋಕನ ಮಾಡಿಕೊಳ್ಳಲಾಯಿತು. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಏಕದಿನ ಮತ್ತು ಟೆಸ್ಟ್‌ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನಕ್ಕೆ ಕಾರಣಗಳೇನೆಂಬುದನ್ನು ಚರ್ಚಿಸಲಾಯಿತು. ಜೊತೆಗೆ ಮುಂದಿನ ಸವಾಲುಗಳ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸುವ ಬಗ್ಗೆಯೂ ಮಾತುಕತೆ ನಡೆಸಲಾಯಿತು.

ಈ ಸುದ್ದಿ ಓದಿದ್ದೀರಾ? ಕ್ರಿಕೆಟ್ | ಟೀಂ ಇಂಡಿಯಾ ನಿದ್ದೆಗೆಡಿಸಿದ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್!

ಸೈಕಿಯಾ ಅಸ್ಸಾಂ ಮೂಲದ ಮಾಜಿ ಕ್ರಿಕೆಟರ್‌. 1990 – 1991ರ ನಡುವೆ‌ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 4 ಪಂದ್ಯಗಳನ್ನಾಡಿದ್ದ ಸೈಕಿಯಾ ವಿಕೆಟ್‌ ಕೀಪರ್‌ ಆಗಿದ್ದರು. ಈ ಪಂದ್ಯದಲ್ಲಿ 53 ರನ್‌ ಗಳಿಸಿದ್ದ ಅವರು 9 ವಿಕೆಟ್‌ ಪಡೆದಿದ್ದರು. ಬಳಿಕ ಕಾನೂನು ವೃತ್ತಿಯಲ್ಲಿ ಮುಂದುವರಿಯಲು ಪ್ರಾರಂಭಿಸಿದರು. 28ನೇ ವಯಸ್ಸಿನಲ್ಲಿ ಗುವಾಹಟಿ ಹೈಕೋರ್ಟ್‌ ವಕೀಲರಾಗಿ ಅಭ್ಯಾಸ ಆರಂಭಿಸಿದರು. ಇದಕ್ಕೂ ಮುನ್ನ ಸ್ಪೋರ್ಟ್ಸ್‌ ಕೋಟಾ ಮೂಲಕ ಉತ್ತರ ಗಡಿನಾಡು ರೈಲ್ವೆ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸಿದ್ದರು.

ನಂತರ 2019ರಲ್ಲಿ ಮತ್ತೆ ಕ್ರೀಡಾಲೋಕಕ್ಕೆ ಮರಳಿದರು. ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್‌ನ ಆರು ಉಪಾಧ್ಯಕ್ಷರಲ್ಲಿ ಒಬ್ಬರಾಗಿದ್ದರು. 2019ರಲ್ಲಿ ಅಸ್ಸಾಂ ಕ್ರಿಕೆಟ್‌ ಅಸೋಸಿಯೇಷನ್‌ ಕಾರ್ಯದರ್ಶಿಯಾಗಿ ಬಳಿಕ 2022ರಲ್ಲಿ ಬಿಸಿಸಿಐ ಹಂಟಿ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ಇದೀಗ ಬಿಸಿಸಿಐ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...