ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಡಿರುವ 11 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿ, ಪ್ಲೇ ಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬ್ಯಾಟರ್, ಕನ್ನಡಿಗ ದೇವದತ್ ಪಡಿಕ್ಕಲ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಔಟ್ ಆಗಿದ್ದಾರೆ. ಈ ಬೆಳವಣಿಗೆಯು ಆರ್‌ಸಿಬಿ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.
ಈ ಸೀಸನ್‌ನಲ್ಲಿ ಆರ್‌ಸಿಬಿ ಪರವಾಗಿ ಉತ್ತಮ ಫಾರ್ಮ್‌ನಲ್ಲಿದ್ದ ದೇವದತ್ ಪಡಿಕ್ಕಲ್, ಬಲಗೈ ಮಂಡಿರಜ್ಜು ಗಾಯಕ್ಕೆ ಒಳಗಾಗಿದ್ದು, ಟೂರ್ನಿಯಿಂದಲೇ ಔಟ್ ಆಗಿದ್ದಾರೆ. ದೇವದತ್ ಪಡಿಕ್ಕಲ್ ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಮಯಾಂಕ್ ಅಗರ್ವಾಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿದ್ದಾರೆ ಎಂದು ಐಪಿಎಲ್ ಸಂಘಟಕರು ಮಾಹಿತಿ ನೀಡಿದ್ದಾರೆ.
ಈ ಋತುವಿನಲ್ಲಿ ಆರ್‌ಸಿಬಿ ಪರ 10 ಪಂದ್ಯಗಳನ್ನಾಡಿದ್ದ ಮತ್ತು ಎರಡು ಅರ್ಧಶತಕಗಳ ನೆರವಿನಿಂದ 247 ರನ್ ಗಳಿಸಿದ್ದ ದೇವದತ್ ಪಡಿಕ್ಕಲ್ ಅವರು ಬಲಗೈ ಮಂಡಿರಜ್ಜು ಗಾಯ ತೀವ್ರವಾದ ಹಿನ್ನೆಲೆಯಲ್ಲಿ ಟೂರ್ನಿಯಿಂದ ನಿರ್ಗಮಿಸಬೇಕಾಗಿ ಬಂದಿದೆ.
ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಉಳಿದ ಪಂದ್ಯಗಳಿಗೆ ಮಯಾಂಕ್ ಅಗರ್ವಾಲ್ ಅವರನ್ನು ಆರ್‌ಸಿಬಿ ಕರೆಸಿಕೊಂಡಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್ ಸಿಂಧೂರ – ಪಾಕ್ ಭಯೋತ್ಪಾದನೆಗೆ ತಕ್ಕ ಶಾಸ್ತಿ!
ಮಯಾಂಕ್ ಅಗರ್ವಾಲ್ ಇದುವರೆಗೆ 127 ಐಪಿಎಲ್ ಪಂದ್ಯಗಳನ್ನು ಆಡಿದ್ದು, 2661 ರನ್ ಗಳಿಸಿದ್ದಾರೆ. ಒಂದು ಐಪಿಎಲ್ ಶತಕ ಮತ್ತು 13 ಅರ್ಧಶತಕಗಳನ್ನು ಬಾರಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಮಯಾಂಕ್ ಅವರನ್ನು 1 ಕೋಟಿ ರೂಪಾಯಿಗೆ ಖರೀದಿಸಿತ್ತು.