ಈ ಬಾರಿಯ ಐಪಿಎಲ್‌ನಲ್ಲಿ ಅಂಪೈರ್‌ಗಳ ನಿರ್ಣಯಗಳು ಮತ್ತೊಮ್ಮೆ ವಿವಾದಕ್ಕೆ ಎಡೆಮಾಡಿಕೊಡುತ್ತಿವೆ. ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವೂ ಇದಕ್ಕೆ ಸಾಕ್ಷಿಯಾಗಿದೆ.
ಆರ್‌ಸಿಬಿ ನೀಡಿದ್ದ 214 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದಾಗ ಚೆನ್ನೈ ಸೂಪರ್ ಕಿಂಗ್ಸ್ ಪರ 16.2 ಓವರ್‌ನಲ್ಲಿ ಆಯುಷ್ ಮಾತ್ರೆ (94) ಔಟ್ ಆಗುತ್ತಿದ್ದಂತೆ, ಕ್ರೀಸ್‌ಗೆ ಡೆವಾಲ್ಡ್ ಬ್ರೆವಿಸ್ ಮೈದಾನಕ್ಕೆ ಬಂದರು. ಇವರು ಲುಂಗಿ ಎನ್‌ಗಿಡಿ ಅವರ ಎಸೆತದಲ್ಲಿ ಔಟ್ ಆದರು. ಆದರೆ ಇವರಿಗೆ ಡಿಆರ್‌ಎಸ್ ತೆಗೆದುಕೊಳ್ಳಲು ಆಗಲಿಲ್ಲ
ಡೆವಾಲ್ಡ್ ಬ್ರಾವಿಸ್ ಎಲ್‌ಬಿ ಔಟ್ ಆದಾಗ ದೊಡ್ಡ ಪರದೆಯ ಮೇಲೆ ಟೈಮರ್ ಕಾಣಿಸಿಕೊಳ್ಳದೇ ಸಮಸ್ಯೆಯನ್ನು ಸೃಷ್ಟಿಸಿತು. ಡೆವಾಲ್ಡ್ ಬ್ರಾವಿಸ್ ಔಟ್ ಎಂದು ತೀರ್ಪು ನೀಡುತ್ತಿದ್ದಂತೆ ಅದಕ್ಕೂ ತಲೆ ಕಡಿಸಿಕೊಳ್ಳದೆ ರನ್ ಓಡಲು ಮುಂದಾದರು. ಬಳಿಕ ರವೀಂದ್ರ ಜಡೇಜಾ ಅವರನ್ನು ಸಂಪರ್ಕಿಸಿ ಡಿಆರ್‌ಎಸ್ ಮೇಲ್ಮನವಿ ಸಲ್ಲಿಸಿದರು. ಆಗಲೇ ವಿವಾದ ಹುಟ್ಟಿಕೊಂಡಿತು. ಏಕೆಂದರೆ ಮನವಿ ಸಲ್ಲಿಸುವ ನಿಗದಿತ ಅವಧಿ ಮೀರಿತ್ತು.
ಐಪಿಎಲ್ ನಿಯಮದ ಪ್ರಕಾರ, ಎಲ್ಬಿಡಬ್ಲ್ಯೂ ಆದರೆ 15 ಸೆಕೆಂಡ್ಗಳ ಒಳಗೆ ಡಿಆರ್ಎಸ್ಗೆ ಮನವಿ ಸಲ್ಲಿಸಬೇಕು. ಅದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ, ಮನವಿಯನ್ನು ತಿರಸ್ಕರಿಸಲಾಗುತ್ತದೆ.
ಈ ಸುದ್ದಿ ಓದಿದ್ದೀರಾ? 2026ರ ಏಷ್ಯನ್ ಕ್ರೀಡಾಕೂಟದಲ್ಲಿ ಕ್ರಿಕೆಟ್‌ಗೆ ಸ್ಥಾನ; ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಒಪ್ಪಿಗೆ
ಆದರೆ ಈ ನಿಯಮದ ಬಗ್ಗೆ ಅರಿವಿಲ್ಲದೆ, ಡೆವಾಲ್ಡ್ ಬ್ರೆವಿಸ್ ಹಾಗೂ ರವೀಂದ್ರ ಜಡೇಜಾ 2 ರನ್ ಓಡಿದ್ದಾರೆ. ಅದರಲ್ಲೂ ಒಂದು ರನ್ ಕಲೆಹಾಕಿದ ಬಳಿಕ ಡಿಆರ್ಎಸ್ಗೆ ಮನವಿ ಸಲ್ಲಿಸಿದ್ದರೂ ಬ್ರೆವಿಸ್ ಅವರಿಗೆ ರಿವ್ಯೂ ಲಭಿಸುತ್ತಿತ್ತು.
ಇದರ ಪರಿಕಲ್ಪನೆಯೇ ಇಲ್ಲದೆ, ರವೀಂದ್ರ ಜಡೇಜಾ ಡೆವಾಲ್ಡ್ ಬ್ರೆವಿಸ್ ಅವರನ್ನು 2ನೇ ರನ್ಗಾಗಿ ಕರೆದಿದ್ದಾರೆ. ಇತ್ತ ಕಡೆಯಿಂದ ಸ್ಟ್ರೈಕ್ನತ್ತ ಓಡಿದ ಬ್ರೆವಿಸ್ ಆ ಬಳಿಕ ಜಡೇಜಾ ಜೊತೆ ಚರ್ಚಿಸಿ ಡಿಆರ್ಎಸ್ಗೆ ಮನವಿ ಸಲ್ಲಿಸಿದ್ದಾರೆ.
ಅಷ್ಟರಲ್ಲಾಗಲೇ ಟೈಮರ್ 25 ಸೆಕೆಂಡ್ಗಳನ್ನು ದಾಟಿತ್ತು. ಅಂದರೆ 15 ಸೆಕೆಂಡ್ಗಳಲ್ಲಿ ತೆಗೆದುಕೊಳ್ಳಬೇಕಾದ ರಿವ್ಯೂ ಅನ್ನು ಬ್ರೆವಿಸ್ 25 ಸೆಕೆಂಡ್ಗಳ ಬಳಿಕ ತೆಗೆದುಕೊಂಡಿದ್ದಾರೆ. ಹೀಗಾಗಿ ಅಂಪೈರ್ ಮನವಿಯನ್ನು ತಿರಸ್ಕರಿಸಿದರು.
ಇದರಿಂದಾಗಿ ಡೆವಾಲ್ಡ್ ಬ್ರೆವಿಸ್ ಮೇಲ್ಮನವಿ ಇಲ್ಲದೆ ಪೆವಿಲಿಯನ್ಗೆ ಹಿಂತಿರುಗಬೇಕಾಯಿತು. ಕುತೂಹಲಕಾರಿ ವಿಷಯ ಎಂದರೆ ಅದು ನಾಟೌಟ್ ಆಗಿತ್ತು. ಅಂದರೆ ರಿಪ್ಲೇ ವಿಡಿಯೋದಲ್ಲಿ ಡೆವಾಲ್ಡ್ ಬ್ರೆವಿಸ್ ಕಾಲಿಗೆ ತಾಗಿದ ಚೆಂಡು ವಿಕೆಟ್ನಿಂದ ದೂರ ಸಾಗುತ್ತಿರುವುದು ಕಂಡು ಬಂದಿದೆ.
ಈ ಒಂದೇ ಓವರ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ವಿಕೆಟ್‌ಗಳನ್ನು ಪಡೆದ ಲುಂಗಿ ಎನ್‌ಗಿಡಿ ಅಬ್ಬರಿಸಿದರು. ಅಲ್ಲದೆ ಆರ್‌ಸಿಬಿ ಪಂದ್ಯದಲ್ಲಿ ಭರ್ಜರಿ ವಾಪಸಾತಿ ಮಾಡುವಲ್ಲಿ ತಮ್ಮದೇ ಆದ ಕಾಣಿಕೆ ನೀಡಿದರು. ರೆವ್ಯೂ ತೆಗೆದುಕೊಂಡು ಓಡಿದ 2 ರನ್ ಲೆಕ್ಕಕ್ಕಿದ್ದರೆ ಸಿಎಸ್ಕೆ ತಂಡಕ್ಕೆ ಗೆಲ್ಲುವ ಅವಕಾಶವಿರುತ್ತಿತ್ತು. ಕೊನೆಗೆ 2 ರನ್‌ನಿಂದಲೇ ಸೋಲು ಅನುಬೇಕಾಯಿತು.
ಪಂದ್ಯ ಫಲಿತಾಂಶ ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 211 ರನ್ ಸೇರಿಸಿ ಸೋಲು ಕಂಡಿತು. ಈ ಪಂದ್ಯದಲ್ಲಿ ಮಹತ್ವದ 2 ಅಂಕ ಕಲೆ ಹಾಕುತ್ತಿದ್ದಂತೆ ಆರ್‌ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.
Time's up ⌛
— Star Sports (@StarSportsIndia) May 3, 2025
Dropped catches, scintillating boundaries, back-to-back wickets & endless drama… 🥶#ViratKohli vs #MSDhoni – one last time? Is living up to the expectations! Who's winning it from here? 👇✍🏻
Watch the LIVE action ➡ https://t.co/dl97nUfgCR #IPLonJioStar 👉… pic.twitter.com/0uSxPYEoWL