​60ನೇ ವಯಸ್ಸಿನವರೆಗೂ ಆಡಲಿದ್ದಾರಾ ಧೋನಿ? ಸಿಎಸ್‌ಕೆ ಆಟಗಾರನ ಅಚ್ಚರಿಯ ಹೇಳಿಕೆ

Date:

​ಮಹೇಂದ್ರ ಸಿಂಗ್‌ ಧೋನಿ ಅವರ ಮೇಲಿನ ಅಭಿಮಾನಿಗಳ ಪ್ರೀತಿ ಗುಟ್ಟಾಗೇನು ಉಳಿದಿಲ್ಲ. ಅವರು ಎಲ್ಲಿ ಕಾಣಿಸಿಕೊಂಡರೂ “ಧೋನಿ! ಧೋನಿ!” ಎಂಬ ಹರ್ಷೋದ್ಗಾರಗಳು, ಕರತಾಡನ ಮೊಳಗುವುದು ಸಹಜ. 44 ವರ್ಷದ ಧೋನಿ ಪ್ರತಿ ಐಪಿಎಲ್ ಆವೃತ್ತಿಯಲ್ಲೂ ಆಡಬೇಕು ಎಂಬುದು ಅಭಿಮಾನಿಗಳ ಅತೀವ ಆಸೆಯಾಗಿದೆ. ಹೀಗಿರುವಾಗ, 2026ರ ಐಪಿಎಲ್ ಬಳಿಕ ಧೋನಿ ನಿವೃತ್ತಿ ಹೊಂದುತ್ತಾರೆಯೇ ಎಂಬ ಪ್ರಶ್ನೆಗೆ ಸ್ವತಃ ಧೋನಿಯವರೇ ಸೂಕ್ಷ್ಮ ಸುಳಿವು ನೀಡಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

- Advertisement -

ಐಪಿಎಲ್ 2026ರ ಟೂರ್ನಿಗೂ ಮುನ್ನ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಸಿಎಸ್‌ಕೆ ಫ್ರಾಂಚೈಸಿಯು ಅಭಿಮಾನಿಗಳಿಗಾಗಿ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದ ಟಾಲಿವುಡ್ ನಟ ಶಿವಕಾರ್ತಿಕೇಯನ್ ಅವರು ಧೋನಿಯವರನ್ನು ಕುರಿತು, “ನೀವು ನಿವೃತ್ತಿ ಹೊಂದುತ್ತೀರಾ? ಆದರೆ ನೀವು ಈ ಹಿಂದೆ “ಖಂಡಿತಾ ಇಲ್ಲ’ ಎಂದು ಹೇಳಿದ್ದಿರಿ. ನಾವು ಪ್ರತಿ ವರ್ಷವೂ ಇದೇ ಉತ್ತರವನ್ನು ನಿರೀಕ್ಷಿಸುತ್ತೇವೆ. ನಿಮ್ಮ ಫಿಟ್‌ನೆಸ್‌ ನೋಡಿದರೆ ನೀವು 60 ವರ್ಷ ತುಂಬುವವರೆಗೂ ಲೀಲಾಜಾಲವಾಗಿ ಆಡಬಹುದು ಎನಿಸುತ್ತದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಇದಕ್ಕೆ ಮುಗುಳ್ನಗುತ್ತಲೇ ಉತ್ತರಿಸಿದ ಧೋನಿ, “ಇದು ತುಂಬ ಕಷ್ಟಕರವಾದದ್ದು” ಎಂದರು. ಆಗ ಶಿವಕಾರ್ತಿಕೇಯನ್” “ನಿಮ್ಮ ಫಿಟ್‌ನೆಸ್‌ನಿಂದಾಗಿ ಇದು ಸುಲಭವೆಂದು ನಾನು ಭಾವಿಸುತ್ತೇನೆ” ಎಂದು ಹೇಳಿದರು.

ಇದಕ್ಕೆ ಮರುಪ್ರತಿಕ್ರಿಯಿಸಿದ ಧೋನಿ, “ಇದು ತುಂಬಾ ಕಷ್ಟ. ಆದರೂ, ನಾನು ಖಂಡಿತ ಪ್ರಯತ್ನಿಸುತ್ತೇನೆ,” ಎಂದು ಹೇಳಿದರು.
​ಧೋನಿಯವರ ಈ “ಪ್ರಯತ್ನಿಸುತ್ತೇನೆ” ಎಂಬ ಮಾತಿಗೆ ನೆರೆದಿದ್ದ ಅಭಿಮಾನಿಗಳಿಂದ ಕರತಾಡನ, ಹರ್ಷೋದ್ಗಾರ ಮುಗಿಲುಮುಟ್ಟಿತ್ತು. ಆಗ ಸಂತಸಗೊಂಡ ಶಿವಕಾರ್ತಿಕೇಯನ್, “ನಮಗೆ ನಮಗೆ ಬೇಕಾದ ಉತ್ತರ ಸಿಕ್ಕಿದೆ” ಎಂದು ಸಂಭ್ರಮಿಸಿದರು.

​ಸಿಎಸ್‌ಕೆ ತಂಡದ ಐಪಿಎಲ್ 2026 ರ ಪ್ರಮುಖ ಅಂಶಗಳು:
​5 ಬಾರಿ ಚಾಂಪಿಯನ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು 2010, 2011, 2018, 2021 ಮತ್ತು 2023ರಲ್ಲಿ ಒಟ್ಟು ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದೆ.

​ಮಾರ್ಚ್ 30ರಂದು ಮೊದಲ ಪಂದ್ಯ: ಮಾರ್ಚ್ 30ರಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಸಿಎಸ್‌ಕೆ ತನ್ನ ಐಪಿಎಲ್ 2026ರ ಅಭಿಯಾನವನ್ನು ಅಧಿಕೃತವಾಗಿ ಆರಂಭಿಸಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...

ಅಫ್ಘಾನ್ ವಿರುದ್ಧ ಭಾರತಕ್ಕೆ ಸರಣಿ ಕ್ಲೀನ್ ಸ್ವೀಪ್: ಶತಕದೊಂದಿಗೆ ಸೂರ್ಯವಂಶಿ ದಾಖಲೆ ಹಿಂದಿಕ್ಕಿದ ಅಭಿಷೇಕ್

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರನೇ ಹಾಗೂ ಅಂತಿಮ...