ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳುವ ಮುನ್ನ ಐಪಿಎಲ್‌ಗೆ ವಿದಾಯ ಘೋಷಿಸಲಿರುವ ದಿನೇಶ್ ಕಾರ್ತಿಕ್

Date:

ಐಪಿಎಲ್‌ನ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದಲ್ಲಿ ಆಡುತ್ತಿರುವ ಟೀಂ ಇಂಡಿಯಾ ಕ್ರಿಕೆಟ್‌ನ ವಿಕೆಟ್ ಕೀಪರ್ ಕಂ ಬ್ಯಾಟರ್‌ ದಿನೇಶ್ ಕಾರ್ತಿಕ್ ಅವರಿಗೆ ಈ ಬಾರಿಯ 17ನೇ ಐಪಿಎಲ್ ಆವೃತ್ತಿಯೇ ಕೊನೆಯ ಆವೃತ್ತಿಯಾಗಲಿದೆ.

38 ವರ್ಷದ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಈ ಬಾರಿಯ ಐಪಿಎಲ್‌ ಆವೃತ್ತಿಯ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ. ಇದಕ್ಕೂ ಮುನ್ನ ಐಪಿಎಲ್‌ ತ್ಯಜಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮಾರ್ಚ್‌ 22 ರಂದು ಐಪಿಎಲ್‌ನ 17ನೇ ಆವೃತ್ತಿ ಆರಂಭವಾಗಲಿದ್ದು, ಚೆನ್ನೈನಲ್ಲಿ ನಡೆಯುವ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಆರ್‌ಸಿಬಿ ತಂಡವನ್ನು ಎದುರಿಸಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“2024ರ ಆವೃತ್ತಿ ದಿನೇಶ್ ಕಾರ್ತಿಕ್ ಅವರಿಗೆ ಕೊನೆಯ ಆವೃತ್ತಿಯಾಗಲಿದೆ.ಐಪಿಎಲ್‌ ನಂತರ ಅಂತಾರಾಷ್ಟ್ರೀಯ ನಿವೃತ್ತಿಯ ಬಗ್ಗೆ ನಿರ್ಧರಿಸಲಿದ್ದಾರೆ” ಎಂದು ಬಿಸಿಸಿಐ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

ಕಾರ್ತಿಕ್‌ ಅವರು 2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಪ್ರತಿನಿಧಿಸಿದ್ದರು. ಐಪಿಎಲ್‌ನಲ್ಲಿ 5.5 ಕೋಟಿ ರೂ.ಗೆ ಖರೀದಿಯಾಗಿರುವ ಅವರು ಕಳೆದ ಎರಡು ಆವೃತ್ತಿಗಳಿಂದ ಆರ್‌ಸಿಬಿ ಪರ ಆಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!

ಐಪಿಎಲ್‌ನಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳನ್ನು ಪ್ರತಿನಿಧಿಸಿದ್ದಾರೆ. ಡೆಲ್ಲಿ ಡೇರ್ ಡೇವಿಲ್ಸ್‌(2008-14), ಪಂಜಾಬ್‌ ಸೂಪರ್‌ ಕಿಂಗ್ಸ್ (2011), ಮುಂಬೈ ಇಂಡಿಯನ್ಸ್(2012-13),ಗುಜರಾತ್ ಲಯನ್ಸ್(2016-17), ಕೆಕೆಆರ್(2018-21) ಹಾಗೂ ಆರ್‌ಸಿಬಿ (2015 ಹಾಗೂ 2022ರಿಂದ ಪ್ರಸ್ತುತ) ತಂಡಗಳನ್ನು ಪ್ರತಿನಿಧಿಸಿದ್ದಾರೆ.

ಒಟ್ಟು 242 ಪಂದ್ಯಗಳನ್ನು ಆಡಿರುವ ದಿನೇಶ್ ಕಾರ್ತಿಕ್ ಎಂ ಎಸ್‌ ಧೋನಿ(250) ಹಾಗೂ ರೋಹಿತ್ ಶರ್ಮಾ(243) ನಂತರದ ಸ್ಥಾನದಲ್ಲಿದ್ದಾರೆ. ಒಟ್ಟು 17 ಐಪಿಎಲ್‌ನ ಆವೃತ್ತಿಗಳಲ್ಲಿ ಎರಡು ಪಂದ್ಯಗಳು ಮಾತ್ರ ದಿನೇಶ್ ಆಡಿಲ್ಲ. 2014ರಲ್ಲಿ ದೆಹಲಿ ತಂಡ ಕಾರ್ತಿಕ್ ಅವರನ್ನು 12.5 ಕೋಟಿ ಕೊಟ್ಟು ಖರೀದಿಸಿತ್ತು. 2015ರಲ್ಲಿ ಆರ್‌ಸಿಬಿ ತಂಡಕ್ಕೆ 10.5 ಕೋಟಿಗೆ ಹರಾಜಾಗಿದ್ದರು.

ಐಪಿಎಲ್‌ನಲ್ಲಿ ಒಟ್ಟು 242 ಪಂದ್ಯಗಳನ್ನು ಆಡಿರುವ ದಿನೇಶ್ ಕಾರ್ತಿಕ್ 25.81ರ ಸರಾಸರಿಯಂತೆ 4516 ರನ್‌ ಪೇರಿಸಿದ್ದಾರೆ. ಇವರ ಆಟದಲ್ಲಿ 20 ಅರ್ಧ ಶತಕಗಳು ಸೇರಿವೆ. ವಿಕೆಟ್‌ ಕೀಪಿಂಗ್‌ನಲ್ಲಿ 141 ಕ್ಯಾಚ್‌ಗಳು ಹಾಗೂ 36 ಸ್ಟಂಪಿಂಗ್‌ ಮಾಡಿದ್ದಾರೆ.

2008ರಲ್ಲಿ ಐಪಿಎಲ್ ಆರಂಭವಾದಾಗಿನಿಂದ ಎಲ್ಲ ಆವೃತ್ತಿಗಳನ್ನು ಆಡಿರುವ ಕೆಲವೇ ಆಟಗಾರರಲ್ಲಿ ದಿನೇಶ್ ಕೂಡ ಒಬ್ಬರು. ದಿನೇಶ್ ಹೊರತುಪಡಿಸಿ ಧೋನಿ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ವೃದ್ಧಿಮಾನ್‌ ಸಾಹ ಹಾಗೂ ಮನೀಶ್ ಪಾಂಡೆ ಎಲ್ಲ ಐಪಿಎಲ್‌ಗಳನ್ನು ಆಡಿರುವ ಉಳಿದ ಆಟಗಾರರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್‌ ಗೆಲುವು | 2.5 ಕೋಟಿ ರೂ. ಹೆಚ್ಚುವರಿ ಹಣ ಬೇಡ ಎಂದ ರಾಹುಲ್ ದ್ರಾವಿಡ್!

ಕಳೆದ ತಿಂಗಳು ನಡೆದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ...

ಇಂಡಿಯನ್ ಕ್ರಿಕೆಟ್ ಟೀಮ್‌ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಟೀಂ ಇಂಡಿಯಾ ಪುರುಷರ ತಂಡದ ಮುಖ್ಯ ಕೋಚ್‌ ಆಗಿ ಭಾರತದ ಮಾಜಿ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಸೂರ್ಯಕುಮಾರ್ ಯಾದವ್

ಭಾರತೀಯ ಕ್ರಿಕೆಟ್ ತಂಡದ ಟಿ20 ಆಟಗಾರ ಸೂರ್ಯಕುಮಾರ್ ಯಾದವ್ ಸೋಮವಾರ ಮಂಗಳೂರಿಗೆ...

ಟೀಂ ಇಂಡಿಯಾಗೆ ಬಿಸಿಸಿಐನಿಂದ 125 ಕೋಟಿ ರೂ. ಬಹುಮಾನ: ವಿರಾಟ್, ರೋಹಿತ್, ದ್ರಾವಿಡ್‌ಗೆ ಎಷ್ಟು?

ವೆಸ್ಟ್‌ ಇಂಡೀಸ್‌ನಲ್ಲಿ 2024ನೇ ಸಾಲಿನ ಟಿ20 ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿದ...