ಕೊನೇರು ಹಂಪಿಯನ್ನು ಸೋಲಿಸಿ ವಿಶ್ವಚಾಂಪಿಯನ್ ಆದ ದಿವ್ಯಾ ದೇಶಮುಖ್‌: ಇತಿಹಾಸ ಬರೆದ 19ರ ಯುವತಿ

Date:

Advertisements

ಭಾರತದ 19 ವರ್ಷದ ಚೆಸ್ ತಾರೆ ನಾಗ್ಪುರದ ದಿವ್ಯಾ ದೇಶಮುಖ್ ಇತಿಹಾಸ ಬರೆದಿದ್ದಾರೆ. ಸೋಮವಾರ ಜಾರ್ಜಿಯಾದ ಬಟುಮಿಯಲ್ಲಿ ನಡೆದ FIDE ಮಹಿಳಾ ವಿಶ್ವಕಪ್ 2025 ರಲ್ಲಿ ಕೊನೇರು ಹಂಪಿ ಅವರನ್ನು ಸೋಲಿಸಿ ವಿಶ್ವಚಾಂಪಿಯನ್ ಆಗಿದ್ದಾರೆ. ಹಾಗೆಯೇ ಈ ಪ್ರಶಸ್ತಿಯನ್ನು ಗಳಿಸಿದ ನಾಲ್ಕನೇ ಭಾರತೀಯ ಮಹಿಳೆ ಮತ್ತು ದೇಶದ 88ನೇ ಗ್ರ್ಯಾಂಡ್‌ಮಾಸ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶನಿವಾರ ಮತ್ತು ಭಾನುವಾರ ನಡೆದ ಎರಡು ಪಂದ್ಯಗಳು ಡ್ರಾ ಆಗಿದ್ದು ನಂತರ ದಿವ್ಯಾ ಗೆಲುವು ಕಂಡಿದ್ದಾರೆ. ಸೋಮವಾರ, ಟೈ-ಬ್ರೇಕರ್‌ನಲ್ಲಿ ಮತ್ತೆ ಡ್ರಾಗೊಂಡಿದೆ. ಆದರೆ ರಿವರ್ಸ್ ಗೇಮ್‌ನಲ್ಲಿ, ದಿವ್ಯಾ ಎರಡು ಬಾರಿಯ ವಿಶ್ವಚಾಂಪಿಯನ್ ಆದ ಕೊನೇರು ಹಂಪಿ ಅವರನ್ನು 2.5-1.5 ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಟ್ರೋಫಿಯ ಜೊತೆಗೆ ದಿವ್ಯಾ $50,000 ಬಹುಮಾನ ಮೊತ್ತವನ್ನು ಕೂಡಾ ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ವಸ್ತ್ರ ಸಂಹಿತೆ ಉಲ್ಲಂಘನೆ: ವಿಶ್ವ ಚೆಸ್ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್ ಕೂಟದಿಂದ ಅನರ್ಹ

ಈ ಬಗ್ಗೆ ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಕೇವಲ 19 ವರ್ಷ ವಯಸ್ಸಿನ ದಿವ್ಯಾ ದೇಶಮುಖ್ 2025ರ FIDE ಮಹಿಳಾ ವಿಶ್ವಕಪ್ ವಿಜೇತೆ” ಎಂದು ಬರೆದಿದ್ದಾರೆ. ಇತಿಹಾಸ ಸೃಷ್ಟಿಸಿದ ನಂತರ ದಿವ್ಯಾ ತನ್ನ ತಾಯಿಯನ್ನು ತಬ್ಬಿಕೊಂಡಿದ್ದಾರೆ. ಈ ವಿಡಿಯೋವನ್ನು FIDE ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ತನಗಿಂತ ದುಪ್ಪಟ್ಟು ವಯಸ್ಸಿನ ಎದುರಾಳಿಯ ವಿರುದ್ಧ ಜಯಗಳಿಸಿದ ಬಳಿಕ ಮಾತನಾಡಿದ ದಿವ್ಯಾ, “ನನಗೆ ಗೆಲುವು ಕಂಡಿದ್ದೇನೆ ಎಂಬುದನ್ನು ಮನವರಿಕೆ ಮಾಡಿಕೊಳ್ಳಲೂ ಸಮಯ ಬೇಕಾಗಿದೆ. ಗ್ರ್ಯಾಂಡ್‌ಮಾಸ್ಟರ್ ಪ್ರಶಸ್ತಿ ಸಿಕ್ಕಿದ್ದು ಅದೃಷ್ಟ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರ: ಪಾಕಿಸ್ತಾನದ ಕಾಲೆಳೆದ ಪ್ರಧಾನಿ ಮೋದಿ

ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಗೆದ್ದ ಬೆನ್ನಲ್ಲೇ ಪ್ರಧಾನಿ...

ಏಪ್ಯಾ ಕಪ್ ಫೈನಲ್ : ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ರೋಚಕ ಜಯ; 9ನೇ ಬಾರಿ ಚಾಂಪಿಯನ್

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಏಪ್ಯಾ ಕಪ್ ಫೈನಲ್...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ...

ಶೀತಲ್ ದೇವಿಗೆ ಐತಿಹಾಸಿಕ ಚಿನ್ನ; ವಿಶ್ವ ಪ್ಯಾರಾ ಆರ್ಚರಿಯಲ್ಲಿ ಭಾರತದ ಹೆಮ್ಮೆ

ದಕ್ಷಿಣ ಕೊರಿಯಾದ ಗ್ವಾಂಗ್ಜುನಲ್ಲಿ ನಡೆದ ವಿಶ್ವ ಪ್ಯಾರಾ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ...

Download Eedina App Android / iOS

X