‘ನಾವು ಭಯೋತ್ಪಾದಕರಂತೆ ಕಾಣುತ್ತೇವೆಯೇ’: ಶ್ರೀಲಂಕಾ ಪೊಲೀಸರ ನಡೆಗೆ ಪಾಕ್ ಬೌಲರ್ ಬೇಸರ

Date:

ಟಿ20 ವಿಶ್ವಕಪ್ 2026ರ ಪಂದ್ಯಾವಳಿಯ ನಂತರ ಪಾಕ್ ಸ್ಪಿನ್ನರ್ ಉಸ್ಮಾನ್ ತಾರಿಕ್ ಶ್ರೀಲಂಕಾ ಪೊಲೀಸರ ನಡೆಗೆ ಬೇಸರ ಹೊರ ಹಾಕಿದ್ದಾರೆ. ಟೀಮ್ ಇಂಡಿಯಾ ವಿರುದ್ಧ ಸೋತಿದ್ದಕ್ಕೆ ನಮಗೆ ಬೇಸರವಾಗಿಲ್ಲ. ಆದರೆ ಶ್ರೀಲಂಕಾ ಪೊಲೀಸರು ತಮ್ಮನ್ನು ನಡೆಸಿಕೊಂಡ ರೀತಿಗೆ ಸ್ಪಿನ್ನರ್ ಉಸ್ಮಾನ್ ತಾರಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

“ಪಾಕಿಸ್ತಾನಿ ಆಟಗಾರರು ಭಯೋತ್ಪಾದಕರಂತೆ ಕಾಣುತ್ತಾರೆಯೇ? ನಮ್ಮ ಆಟಗಾರರ ಬ್ಯಾಗ್‌ಗಳನ್ನು ಪದೇ ಪದೇ ಏಕೆ ಪರಿಶೀಲಿಸಲಾಗುತ್ತಿದೆ” ಎಂದು ಉಸ್ಮಾನ್ ತಾರಿಕ್ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಟಿ20 ವಿಶ್ವಕಪ್ 2026ರ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನ ಸ್ಪಿನ್ನರ್ ಉಸ್ಮಾನ್ ತಾರಿಕ್ ಶ್ರೀಲಂಕಾ ಪೊಲೀಸರ ನಡೆವಳಿಕೆಗಳ ಬಗ್ಗೆ ಕಿಡಿಕಾರಿದ್ದಾರೆ. ಶ್ರೀಲಂಕಾಕ್ಕೆ ಕಾಲಿಟ್ಟಾಗಿನಿಂದ ಶ್ರೀಲಂಕಾ ಪೊಲೀಸರು ಪ್ರತಿ ಹಂತದಲ್ಲೂ ತಮ್ಮ ಬ್ಯಾಗ್‌ಗಳನ್ನು ಪರಿಶೀಲಿಸುತ್ತಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಕೊಲಂಬೊದಲ್ಲಿ ನಡೆಯಿತು. ಈ ವೇಳೆ ಶ್ರೀಲಂಕಾ ಪೊಲೀಸರು ನಮ್ಮ ತಂಡದ ಆಟಗಾರರ ಬ್ಯಾಗ್‌ಗಳನ್ನು ಮಾತ್ರ ಪರಿಶೀಲಿಸಿದರು ಎಂದು ಉಸ್ಮಾನ್ ತಾರಿಕ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? 6 ದಶಕಗಳ ಕಾಯುವಿಕೆ ಅಂತ್ಯ: ಬಂಗಾಳವನ್ನು ಬಗ್ಗು ಬಡಿದು ರಣಜಿ ಫೈನಲ್ ಪ್ರವೇಶಿಸಿದ ಜಮ್ಮು ಕಾಶ್ಮೀರ

‘ಟೀಂ ಇಂಡಿಯಾ ಆಟಗಾರರ ಬ್ಯಾಗ್‌ಗಳನ್ನು ಯಾಕೆ ಪರಿಶೀಲಿಸಲಿಲ್ಲ. ಕೊಲಂಬೊದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ಸೋತಿದ್ದಕ್ಕೆ ಯಾವುದೇ ವಿಷಾದವಿಲ್ಲ. ಆದರೆ ಭಾರತೀಯ ಆಟಗಾರರ ಬ್ಯಾಗ್‌ಗಳನ್ನು ಪರಿಶೀಲಿಸದಿರುವುದು ತಮಗೆ ಬೇಸರ ತಂದಿದೆ. ನಮ್ಮ ಆಟಗಾರರ ಬ್ಯಾಗ್‌ಗಳನ್ನು ಒಮ್ಮೆ ಪರಿಶೀಲಿಸುವ ಬದಲು ಎರಡು ಬಾರಿ ಪರಿಶೀಲಿಸಲಾಗಿದೆ. ನಮ್ಮನ್ನು ಅಪಹಾಸ್ಯ ಮಾಡಲಾಗಿದೆ. ಪಾಕಿಸ್ತಾನಿ ಆಟಗಾರರು ಭಯೋತ್ಪಾದಕರಂತೆ ಕಾಣುತ್ತಾರೆಯೇ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟೀಂ ಇಂಡಿಯಾ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಾ.15ರಂದು ಕೊಲಂಬೊದಲ್ಲಿ ನಡೆದಿತ್ತು. ಆದಾಗ್ಯೂ, ಈ ಪಂದ್ಯದ ಸಮಯದಲ್ಲಿ, ಶ್ರೀಲಂಕಾ ಪೊಲೀಸರು ಪಾಕಿಸ್ತಾನಿ ಆಟಗಾರರ ಬ್ಯಾಗ್‌ಗಳನ್ನು ಹಲವು ಬಾರಿ ಪರಿಶೀಲಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ವೈರಲ್ ಆಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...