ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ

Date:

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 22ರಂದು ನಡೆದ 2024ರ ಇಂಡಿಯನ್ ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ‘ಎಲಿಮಿನೇಟರ್’ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

- Advertisement -

ಆರ್‌ಸಿಬಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಐತಿಹಾಸಿಕ 8000 ರನ್ ಗಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ 29 ರನ್ ಗಳಿಸುತ್ತಿದ್ದಂತೆಯೇ ನೂತನ ಮೈಲಿಗಲ್ಲು ಸ್ಥಾಪಿಸಿದರು. ಒಂದೇ ತಂಡದ ಪರ ಎಂಟು ಸಾವಿರ ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024ರ ಆವೃತ್ತಿಯಲ್ಲಿ ಬಲಗೈ ಅನುಭವಿ ಬ್ಯಾಟರ್ ಅತಿ ಹೆಚ್ಚು ರನ್ ಗಳಿಸಿ ‘ಆರೆಂಜ್ ಕ್ಯಾಪ್’ ಹೋಲ್ಡರ್ ಆಗಿದ್ದಾರೆ. ಅನುಭವಿ ಬಲಗೈ ಬ್ಯಾಟರ್ ವಿರಾಟ್ ಕೊಹ್ಲಿ, 17 ವರ್ಷಗಳ ಇತಿಹಾಸ ಹೊಂದಿರುವ ಐಪಿಎಲ್‌ನಲ್ಲಿ 8000 ರನ್‌ಗಳ ಮೈಲಿಗಲ್ಲನ್ನು ತಲುಪಿದ ಮೊದಲ ಬ್ಯಾಟರ್ ಎಂಬ ಐತಿಹಾಸಿಕ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು.

ನಿರ್ಣಾಯಕ ಪಂದ್ಯದಲ್ಲಿ 24 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 33 ರನ್ ಗಳಿಸಿದ್ದಾಗ 8ನೇ ಓವರ್‌ ಎಸೆದ ಯುಜ್ವೇಂದ್ರ ಚಹಾಲ್ ಅವರ ಬೌಲಿಂಗ್‌ನಲ್ಲಿ ವಿರಾಟ್ ಕೊಹ್ಲಿ ವಿಕೆಟ್‌ ಕಳೆದುಕೊಂಡರು.

ವಿರಾಟ್ ಕೊಹ್ಲಿ ಐಪಿಎಲ್ 2024ರಲ್ಲಿ ಆಡಿದ 15 ಇನ್ನಿಂಗ್ಸ್‌ಗಳಲ್ಲಿ 61.75ರ ಸರಾಸರಿ ಮತ್ತು 154.70ರ ಸ್ಟ್ರೈಕ್ ರೇಟ್‌ನಲ್ಲಿ 741 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳನ್ನು ಬಾರಿಸಿದ್ದಾರೆ.

ಇದನ್ನು ಓದಿದ್ದೀರಾ? ಐಪಿಎಲ್ | ರಾಜಸ್ಥಾನಕ್ಕೆ ಜಯ: ಆರ್‌ಸಿಬಿ ಕಪ್ ಕನಸು ಮತ್ತೆ ಭಗ್ನ

ಈಗಾಗಲೇ ಆರ್‌ಸಿಬಿ ಅನುಭವಿ ಬ್ಯಾಟರ್ ಐಪಿಎಲ್ ಪಂದ್ಯಾವಳಿಯಲ್ಲಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ. 8 ಶತಕಗಳು ಮತ್ತು 55 ಅರ್ಧಶತಕಗಳು ಒಳಗೊಂಡಂತೆ 8004 ರನ್ ಕಳೆಹಾಕಿದ್ದಾರೆ. ಇನ್ನು 222 ಪಂದ್ಯಗಳಲ್ಲಿ 35.25ರ ಸರಾಸರಿಯಲ್ಲಿ 6769 ರನ್ ಕಲೆಹಾಕಿರುವ ಶಿಖರ್ ಧವನ್ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ರೋಹಿತ್ ಶರ್ಮಾ, ಡೇವಿಡ್ ವಾರ್ನರ್ ಮತ್ತು ಸುರೇಶ್ ರೈನಾ ಇದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...