ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದ ನಾಯಕನ ಯುಗಾಂತ್ಯ: ಕ್ರಿಕೆಟ್‌ಗೆ ರಹಾನೆ ವಿದಾಯ

Date:

ಭಾರತ ಕ್ರಿಕೆಟ್ ತಂಡದ ಹಿರಿಯ ಆಟಗಾರ, ಟೆಸ್ಟ್ ಸ್ಪೆಷಲಿಸ್ಟ್ ಹಾಗೂ ಬಾರ್ಡರ್-ಗವಾಸ್ಕರ್ ಟ್ರೋಫಿ ವಿಜೇತ ನಾಯಕ ಅಜಿಂಕ್ಯ ರಹಾನೆ ಅವರು ಇಂದು (ಜುಲೈ 30) ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಭಾವುಕ ವಿಡಿಯೋ ಒಂದನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಈ ವಿಚಾರವನ್ನು ತಿಳಿಸಿರುವ ಅವರು, ತಮ್ಮ ಸುದೀರ್ಘ ಹಾಗೂ ಯಶಸ್ವಿ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ.

- Advertisement -

2020-21ರ ಅವಧಿಯಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತಕ್ಕೆ ಐತಿಹಾಸಿಕ ಸರಣಿ ಗೆಲುವು ತಂದುಕೊಟ್ಟಿದ್ದು ರಹಾನೆ ಅವರ ವೃತ್ತಿಜೀವನದ ಅತ್ಯಂತ ಪ್ರಮುಖ ಹಾಗೂ ಸುವರ್ಣ ಘಟ್ಟವಾಗಿದೆ. ಅಡಿಲೇಡ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ ಹೀನಾಯ ಸೋಲು ಕಂಡ ಬಳಿಕ, ನಿಯಮಿತ ನಾಯಕ ವಿರಾಟ್ ಕೊಹ್ಲಿ ತವರಿಗೆ ಮರಳಿದ್ದರು. ಆ ಸಂದರ್ಭದಲ್ಲಿ ಗಾಯದ ಸಮಸ್ಯೆಗಳಿಂದ ಬಳಲುತ್ತಿದ್ದ ಯುವ ತಂಡವನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸಿದ್ದ ರಹಾನೆ, ಭಾರತಕ್ಕೆ 2-1 ಅಂತರದ ಐತಿಹಾಸಿಕ ಟೆಸ್ಟ್ ಸರಣಿ ಗೆಲುವನ್ನು ತಂದುಕೊಟ್ಟಿದ್ದರು. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಅವರು ಬಾರಿಸಿದ ಮ್ಯಾಚ್ ವಿನ್ನಿಂಗ್ ಶತಕವು, ತಂಡವನ್ನು ಸೋಲಿನ ಸುಳಿಯಿಂದ ಮೇಲೆತ್ತಿ ಭಾರತೀಯ ಕ್ರಿಕೆಟ್ ಇತಿಹಾಸದ ಶ್ರೇಷ್ಠ ಸಾಧನೆಗಳಲ್ಲಿ ಒಂದಾಗಿ ಇಂದಿಗೂ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ವಿದೇಶಿ ನೆಲದಲ್ಲಿ ಅದರಲ್ಲೂ ಸೇನಾ (SENA -South Africa, England, New Zealand,Australia) ದೇಶಗಳಲ್ಲಿ ಭಾರತದ ಅತ್ಯಂತ ವಿಶ್ವಾಸಾರ್ಹ ಟೆಸ್ಟ್ ಬ್ಯಾಟರ್‌ಗಳಲ್ಲಿ ಒಬ್ಬರಾಗಿದ್ದ ರಹಾನೆ, ಅದ್ಭುತ ದಾಖಲೆಗಳೊಂದಿಗೆ ತಮ್ಮ ವೃತ್ತಿಜೀವನವನ್ನು ಮುಕ್ತಾಯಗೊಳಿಸಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ 85 ಟೆಸ್ಟ್, 90 ಏಕದಿನ ಮತ್ತು 20 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಒಟ್ಟು ಎಂಟು ಸಾವಿರಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 12 ಶತಕಗಳೊಂದಿಗೆ ಒಟ್ಟು 5,077 ರನ್ ಗಳಿಸಿರುವ ಅವರು, ಆಸ್ಟ್ರೇಲಿಯಾದಲ್ಲಿ 42ರ ಸರಾಸರಿಯಲ್ಲಿ 884 ರನ್ ಹಾಗೂ ದಕ್ಷಿಣ ಆಫ್ರಿಕಾದಲ್ಲಿ 37ರ ಸರಾಸರಿಯಲ್ಲಿ 402 ರನ್ ಗಳಿಸಿ ಕಠಿಣ ಪರಿಸ್ಥಿತಿಗಳಲ್ಲಿ ತಮ್ಮ ಪಾರುಪತ್ಯ ಮೆರೆದಿದ್ದರು. ಇದರ ಜೊತೆಗೆ 2015ರ ಏಕದಿನ ವಿಶ್ವಕಪ್ ಸೆಮಿಫೈನಲ್ ಮತ್ತು 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಿದ ಭಾರತ ತಂಡದ ಪ್ರಮುಖ ಸದಸ್ಯರಾಗಿದ್ದರು.

ಜುಲೈ 2023ರಲ್ಲಿ ಟ್ರಿನಿಡಾಡ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯವು ಭಾರತದ ಪರ ರಹಾನೆ ಅವರ ಕೊನೆಯ ಪಂದ್ಯವಾಗಿತ್ತು. 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತ ಸೋತರೂ, ರಹಾನೆ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ಹೊರಹೊಮ್ಮಿದ್ದರು. ರಾಷ್ಟ್ರೀಯ ತಂಡಕ್ಕೆ ಮರಳುವ ಉತ್ಸಾಹದಿಂದ ಅವರು ಸತತ ಎರಡು ಋತುಗಳಲ್ಲಿ ರಣಜಿ ಟ್ರೋಫಿ ಆಡಿದ್ದರು. ಆದರೆ, ಟೀಮ್ ಇಂಡಿಯಾದಲ್ಲಿ ಅವರಿಗೆ ಮರಳಿ ಅವಕಾಶ ಸಿಗದ ಕಾರಣ, ಅಂತಿಮವಾಗಿ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುವ ಕಠಿಣ ನಿರ್ಧಾರಕ್ಕೆ ಬಂದಿದ್ದಾರೆ.

ತಮ್ಮ ವಿದಾಯದ ವಿಡಿಯೋದಲ್ಲಿ ಕಣ್ಣೀರು ಹಾಕಿದ ರಹಾನೆ, ಜೀವನದಲ್ಲಿ ಎಲ್ಲದಕ್ಕೂ ಒಂದು ಆರಂಭ ಮತ್ತು ಅಂತ್ಯ ಇದ್ದೇ ಇರುತ್ತದೆ, ಸಮಯ ಬಂದಾಗ ಅದನ್ನು ಗೌರವಿಸಿ ಮುಂದೆ ಸಾಗಬೇಕು ಎಂದಿದ್ದಾರೆ. ಬ್ಯಾಟಿಂಗ್‌ನಲ್ಲಿ ಟೈಮಿಂಗ್ ಬಹಳ ಮುಖ್ಯ ಎಂದು ತಾವು ನಂಬಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಲು ಇದು ಸರಿಯಾದ ಸಮಯ ಎಂದು ಅನಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ಮುಂಬೈ ಕ್ರಿಕೆಟ್ ಸಂಸ್ಥೆ, ತರಬೇತುದಾರರು, ಐಪಿಎಲ್ ಫ್ರಾಂಚೈಸಿಗಳು, ಪತ್ನಿ ರಾಧಿಕಾ, ಕುಟುಂಬಸ್ಥರು ಹಾಗೂ ಬೆಂಬಲಿಸಿದ ಅಭಿಮಾನಿಗಳಿಗೆ ಅವರು ವಿಶೇಷ ಕೃತಜ್ಞತೆ ಸಲ್ಲಿಸಿದ್ದಾರೆ. ಅಜಿಂಕ್ಯ ಎಂದರೆ ‘ಸೋಲಿಲ್ಲದವನು’ ಎಂದರ್ಥ, ಆದರೆ ಕ್ರಿಕೆಟ್ ತಮಗೆ ಹಲವು ಬಾರಿ ಸೋಲನ್ನು ತೋರಿಸಿದೆ. ಅಭಿಮಾನಿಗಳ ಹೃದಯದಲ್ಲಿ ತಾವು ಎಂದಿಗೂ ಸೋತಿರಲಿಲ್ಲ ಎಂದು ಹೇಳುತ್ತಾ ‘ಕ್ಯಾಪ್ ನಂಬರ್ 278 ಸೈನಿಂಗ್ ಆಫ್’ ಎನ್ನುವ ಮೂಲಕ ರಹಾನೆ ತಮ್ಮ ಭಾವುಕ ನುಡಿಗಳನ್ನು ಮುಕ್ತಾಯಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...