ಇಂಗ್ಲೆಂಡ್ vs ಅರ್ಜೆಂಟೀನಾ: ‘ಮೆಸ್ಸಿ ತಮ್ಮದೇ ತಂಡದ ದೌರ್ಬಲ್ಯವಾಗಬಹುದು’!

Date:

ಫಿಫಾ ವಿಶ್ವಕಪ್ 2026ರ (FIFA World Cup 2026) ಎರಡನೇ ಸೆಮಿಫೈನಲ್ ಪಂದ್ಯವು ಬುಧವಾರ ರಾತ್ರಿ ಇಂಗ್ಲೆಂಡ್ ಮತ್ತು ಅರ್ಜೆಂಟೀನಾ ತಂಡಗಳ ನಡುವೆ ನಡೆಯಲಿದೆ. ಬರೋಬ್ಬರಿ 24 ವರ್ಷಗಳ ನಂತರ ವಿಶ್ವಕಪ್ ಇತಿಹಾಸದಲ್ಲಿ ಈ ಎರಡೂ ಬಲಿಷ್ಠ ತಂಡಗಳು ಪರಸ್ಪರ ಸೆಣಸಾಡುತ್ತಿದ್ದು, ಇಡೀ ವಿಶ್ವದ ಫುಟ್‌ಬಾಲ್ ಪ್ರೇಮಿಗಳ ಕಣ್ಣು ಈ ಪಂದ್ಯದ ಮೇಲಿದೆ.

- Advertisement -

ಆದರೆ, ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದ ಮಾಜಿ ಆಟಗಾರ, ದಂತಕಥೆ ವೇಯ್ನ್ ರೂನಿ ಅವರು ಅರ್ಜೆಂಟೀನಾ ನಾಯಕ ಲಿಯೋನೆಲ್ ಮೆಸ್ಸಿ ಬಗ್ಗೆ ಮಾತನಾಡಿದ್ದಾರೆ. ಅವರ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ವೇಯ್ನ್ ರೂನಿ ಪ್ರಕಾರ, “ಮೆಸ್ಸಿ ಅವರ ರಕ್ಷಣಾತ್ಮಕ ಆಟದ ಕೊರತೆಯು ಅರ್ಜೆಂಟೀನಾ ತಂಡಕ್ಕೆ ಹಿನ್ನಡೆಯಾಗಬಹುದು. ಮೆಸ್ಸಿ ಮೈದಾನದಲ್ಲಿ ರಕ್ಷಣಾತ್ಮಕವಾಗಿ ಹೆಚ್ಚು ಸಕ್ರಿಯರಾಗಿರುವುದಿಲ್ಲ. ಇದು ಇಂಗ್ಲೆಂಡ್‌ನ ಬಲಿಷ್ಠ ಆಕ್ರಮಣಕಾರಿ ಆಟಗಾರರಿಗೆ ಲಾಭ ತಂದುಕೊಡಬಹುದು.”

ಅಂತರರಾಷ್ಟ್ರೀಯ ಫುಟ್‌ಬಾಲ್‌ನಲ್ಲಿ ಮೆಸ್ಸಿ 205 ಪಂದ್ಯಗಳನ್ನು ಆಡಿದ್ದು, ದಾಖಲೆಯ 125 ಗೋಲುಗಳನ್ನು ಗಳಿಸಿದ್ದಾರೆ. ಆದಾಗ್ಯೂ, ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ತಂಡವನ್ನು ಎದುರಿಸುತ್ತಿದ್ದಾರೆ.

ಪ್ರಸಕ್ತ ವಿಶ್ವಕಪ್‌ನಲ್ಲಿ ಈಗಾಗಲೇ 8 ಗೋಲುಗಳನ್ನು ಗಳಿಸಿ ಅಗ್ರಸ್ಥಾನದಲ್ಲಿರುವ ಮೆಸ್ಸಿ, ಸತತ 9 ಪಂದ್ಯಗಳಲ್ಲಿ ಗೋಲು ಗಳಿಸಿದ ಅದ್ಭುತ ದಾಖಲೆ ಹೊಂದಿದ್ದರು. ಆದರೆ, ಸ್ವಿಟ್ಜರ್ಲೆಂಡ್ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅವರು ಯಾವುದೇ ಗೋಲು ಗಳಿಸಲು ಸಾಧ್ಯವಾಗಲಿಲ್ಲ.

ಬುಧವಾರ ರಾತ್ರಿ ಅಟ್ಲಾಂಟಾದಲ್ಲಿ ನಡೆಯಲಿರುವ ಸೆಮಿಫೈನಲ್ ಸಮರದಲ್ಲಿ ಇಂಗ್ಲೆಂಡ್‌ನ ಆಕ್ರಮಣಕಾರಿ ಆಟಕ್ಕೆ ಅರ್ಜೆಂಟೀನಾ ಹೇಗೆ ಪ್ರತಿತಂತ್ರ ಹೂಡಲಿದೆ. ರೂನಿ ಅವರ ಈ ಹೇಳಿಕೆಗೆ ಮೆಸ್ಸಿ ಮೈದಾನದಲ್ಲೇ ಉತ್ತರ ನೀಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ ಬದಲಾದದ್ದು ಹೇಗೆ?

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್...