ಲಾರ್ಡ್ಸ್ ಟೆಸ್ಟ್ | ಟೀಮ್ ಇಂಡಿಯಾಗೆ ‘ಹಾರ್ಟ್ ಬ್ರೇಕ್’: ಇಂಗ್ಲೆಂಡ್‌ಗೆ 22 ರನ್‌ಗಳ ರೋಚಕ ಜಯ

Date:

ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೆನ್ ಸ್ಟೋಕ್ಸ್ ನೇತೃತ್ವದ ಆಂಗ್ಲರ ಬಳಗದ ಎದುರು 22 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿದೆ. ಆ ಮೂಲಕ ಶುಭಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ ಐದು‌ ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-2 ಸೋಲಿನೊಂದಿಗೆ ಹಿನ್ನಡೆ ಅನುಭವಿಸಿದೆ.

- Advertisement -

ಗೆಲ್ಲಲು ಕೇವಲ‌ 193 ರನ್‌ಗಳ ಗುರಿಯನ್ನು ಪಡೆದಿದ್ದ ಗಿಲ್ ಬಳಗವು, 170 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಕೊನೆಯವರೆಗೂ ಏಕಾಂಗಿಯಾಗಿ ಹೋರಾಟ ನಡೆಸಿದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ರವೀಂದ್ರ ಜಡೇಜಾ, 61 ರನ್ ಗಳಿಸಿ ಔಟಾಗದೇ ಉಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆತಿಥೇಯರ ಆಕ್ರಮಣಕಾರಿ ಬೌಲಿಂಗ್ ‌ಅನ್ನು ಎದುರಿಸಲು ವಿಫಲರಾದ ಟೀಮ್ ಇಂಡಿಯಾದ ಹಲವರು ಬ್ಯಾಟರ್‌ಗಳು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಹೆಣಗಾಡಿದರು.

ಊಟದ ವಿರಾಮದ ಸಮಯದಲ್ಲಿ 8 ವಿಕೆಟ್ ಕಳೆದುಕೊಂಡಿದ್ದರೂ, ರವೀಂದ್ರ ಜಡೇಜಾ, ಬೌಲರ್‌ಗಳಾದ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಜೊತೆಗೆ ಜೊತೆಯಾಟ ನಡೆಸಿ ಕೊನೆಯವರೆಗೂ ಹೋರಾಟ ನಡೆಸಿ ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ, ಸಿರಾಜ್ ಅವರು, ಇಂಗ್ಲೆಂಡ್ ಸ್ಪಿನ್ನರ್ ಬಶೀರ್ ಎಸೆತದಲ್ಲಿ ಅನಿರೀಕ್ಷಿತವಾಗಿ ಬೌಲ್ಡ್ ಆದ್ದರಿಂದ ಟೀಮ್ ಇಂಡಿಯಾದ ಗೆಲುವಿನ ಆಸೆ ಕೊನೆಯಾಯಿತು.

ಇಂಗ್ಲೆಂಡ್ ಪರವಾಗಿ 2ನೇ ಇನ್ನಿಂಗ್ಸ್‌ನ ಬೌಲಿಂಗ್‌ನಲ್ಲಿ ನಾಯಕ‌ ಬೆನ್ ಸ್ಟೋಕ್ಸ್ ಹಾಗೂ ಜೋಫ್ರಾ ಆರ್ಚರ್ ತಲಾ‌‌ ಮೂರು ವಿಕೆಟ್ ಗಳಿಸಿದರೆ, ಕಾರ್ಸ್ 2, ಬಶೀರ್ ಹಾಗೂ ವೋಕ್ಸ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...