ಒಂದೇ ಓವರ್‌ನಲ್ಲಿ 6 ಸಿಕ್ಸ್‌; ಇಂಗ್ಲೆಂಡ್‌ನಲ್ಲಿ ಭಾರತೀಯ ಮೂಲದ ಆಟಗಾರನ ಸಾಧನೆ

Date:

ಕ್ರಿಕೆಟ್‌ ಇತಿಹಾಸದಲ್ಲಿ ಮತ್ತೊಮ್ಮೆ ಇತಿಹಾಸ ಸೃಷ್ಟಿಯಾಗಿದೆ. ಒಂದೇ ಓವರ್‌ನಲ್ಲಿ ಮತ್ತೊಬ್ಬ ಆಟಗಾರ 6 ಸಿಕ್ಸರ್‌ ಸಿಡಿಸಿ ದಾಖಲೆ ನಿರ್ಮಿಸಿದ್ದಾನೆ. ಭಾರತೀಯ ಮೂಲದ 26 ವರ್ಷದ ರಿಷಿ ಪಟೇಲ್‌ ಇಂಗ್ಲೆಂಡ್‌ನ ಕೌಂಟಿ ಪಂದ್ಯದಲ್ಲಿ 6 ಚೆಂಡುಗಳಲ್ಲಿ 6 ಸಿಕ್ಸರ್‌ ಸಿಡಿಸಿರುವುದು ದಾಖಲೆಯಾಗಿದೆ.

- Advertisement -

ಮೇ 8 ರಂದು ನಡೆದ ಇಂಗ್ಲೆಂಡ್‌ನಲ್ಲಿ ಮೈನರ್ ಕೌಂಟಿ ಸ್ಟಾಫರ್ಡ್‌ಶೈರ್ ಹಾಗೂ ಲೀಸೆಸ್ಟರ್‌ಶೈರ್ ಫಾಕ್ಸಸ್ ತಂಡಗಳ ನಡುವೆ ಕೌಂಟಿ ಚಾಂಪಿಯನ್‌ಷಿಪ್‌ನ ಸೌಹಾರ್ದ ಟಿ20 ಪಂದ್ಯ ಜರುಗಿತು. ಈ ಸಂದರ್ಭದಲ್ಲಿ ಲೀಸೆಸ್ಟರ್‌ಶೈರ್ ಫಾಕ್ಸಸ್ ತಂಡದ ಪರವಾಗಿ ಆಡಿದ ರಿಷಿ ಪಟೇಲ್ ಸ್ಟಾಫರ್ಡ್‌ಶೈರ್‌ನ ಮೈನರ್ ಕೌಂಟಿ ತಮಡದ ಸ್ಪಿನ್ನರ್ ಜ್ಯಾಕ್ ರೆಡ್‌ಮನ್ ಎಸೆದ ಓವರ್‌ನಲ್ಲಿ ಆರು ಚೆಂಡುಗಳಲ್ಲಿ 6 ಸಿಕ್ಸರ್‌ಗಳನ್ನು ಬಾರಿಸಿ ದಾಖಲೆ ನಿರ್ಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ರಿಷಿ ಪಟೇಲ್ 40 ಎಸೆತಗಳಲ್ಲಿ 9 ಸಿಕ್ಸರ್ ಮತ್ತು 6 ಬೌಂಡರಿಗಳೊಂದಿಗೆ 96 ರನ್ ಚಚ್ಚಿದರು. ಆದರೆ 4 ರನ್‌ಗಳಿಂದ ಶತಕ ವಂಚಿತರಾದರು. ಈ ಪಂದ್ಯದಲ್ಲಿ ಲೀಸೆಸ್ಟರ್‌ಶೈರ್ ಫಾಕ್ಸಸ್ ತಂಡವು 20 ಓವರ್​ಗಳಲ್ಲಿ 300 ರನ್ ಕಲೆಹಾಕಿತು. ಈ ರನ್‌ ಬೆನ್ನಟ್ಟಿದ ಮೈನರ್ ಕೌಂಟಿ ಸ್ಟಾಫರ್ಡ್‌ಶೈರ್ ತಂಡ ಕೇವಲ 50 ರನ್‌ಗಳಿಗೆ ಆಲೌಟ್‌ ಆಗಿ 250 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿತು.

ಇದನ್ನು ಓದಿದ್ದೀರಾ? ಐಪಿಎಲ್ 2025: ಬಿಸಿಸಿಐನಿಂದ ತುರ್ತು ಸಭೆ; ಉಳಿದ ಪಂದ್ಯಗಳು ತಾತ್ಕಾಲಿಕ ಸ್ಥಗಿತ?

ಕೆಲವು ದಿನಗಳ ಹಿಂದೆ ಐಪಿಎಲ್ 2025 ರಲ್ಲಿ, ರಿಯಾನ್ ಪರಾಗ್ 6 ಎಸೆತಗಳಲ್ಲಿ 6 ಸಿಕ್ಸರ್‌ಗಳನ್ನು ಬಾರಿಸಿದ್ದರು. ಈಗ ಕೆಲವೇ ದಿನಗಳ ಅಂತರದಲ್ಲಿ ರಿಷಿ ಆ ಸಾಧನೆ ಮಾಡಿದ್ದಾರೆ. ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿರುವುದು ಕೇವಲ ಕೆಲವೇ ಬ್ಯಾಟರ್​ಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ವೆಸ್ಟ್ ಇಂಡೀಸ್​ನ ಗ್ಯಾರಿ ಸೋಬರ್ಸ್.

ಗ್ಯಾರಿ ಸೋಬರ್ಸ್ ನಂತರ ರವಿ ಶಾಸ್ತ್ರಿ, ಹರ್ಷೆಲ್ ಗಿಬ್ಸ್, ಯುವರಾಜ್‌ ಸಿಂಗ್‌, ಕೀರನ್ ಪೊಲಾರ್ಡ್, ಜಸ್ಕರಣ್ ಮಲ್ಹೋತ್ರಾ, ದಿಪೇಂದ್ರ ಸಿಂಗ್ ಐರೀ, ತಿಸಾರಾ ಪೆರೇರಾ, ರಾಸ್ ವೈಟ್ಲೆ, ವಂಶಿ ಕೃಷ್ಣ, ಲೀಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಏಲೆಕ್ಸ್ ಹೆಲ್‌ಸ್ ಈ ಸಾಧನೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...