ಇಂಗ್ಲೆಂಡ್ ಕ್ರಿಕೆಟ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್‌ಸನ್ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದು, ವೆಸ್ಟ್ ಇಂಡೀಸ್ ವಿರುದ್ದ ‘ಕ್ರಿಕೆಟ್ ಕಾಶಿ’ ಲಾರ್ಡ್ಸ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದ ಬಳಿಕ ನಿವೃತ್ತಿಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.
ಜೇಮ್ಸ್ ಆ್ಯಂಡರ್‌ಸನ್ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡುವ ಮೂಲಕ ತಮ್ಮ 20 ವರ್ಷಗಳ ಸುದೀರ್ಘ ಕ್ರಿಕೆಟ್ ವೃತ್ತಿ ಜೀವನಕ್ಕೆ ಅಂತ್ಯ ಹಾಡಲಿದ್ದಾರೆ. 2003ರಲ್ಲಿ ಲಾರ್ಡ್ಸ್‌ನಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದ ಮೂಲಕ ಪದಾರ್ಪಣೆ ಮಾಡಿದ್ದರು.
ತನ್ನ ನಿವೃತ್ತಿ ಘೋಷಣೆಯ ನಿರ್ಧಾರವನ್ನು ಇನ್ಸ್‌ಟಾಗ್ರಾಮ್ ಮೂಲಕ ತಿಳಿಸಿರುವ 41 ವರ್ಷದ ವೇಗಿ ಆ್ಯಂಡರ್‌ಸನ್, “ಸತತ 20 ವರ್ಷಗಳ ಕಾಲ ನನ್ನ ದೇಶವನ್ನು ಜಾಗತಿಕ ವೇದಿಕೆಯಲ್ಲಿ ಪ್ರತಿನಿಧಿಸಿದ್ದೆ. ನಾನು ಚಿಕ್ಕವನಾಗಿದ್ದಾಗಿನಿಂದ ನಾನು ಇಷ್ಟಪಟ್ಟ ಆಟವನ್ನು ಆಡುತ್ತಿದ್ದೇನೆ. ನಾನು ಇಂಗ್ಲೆಂಡ್ ತಂಡದ ಹೊರಗುಳಿಯುವುದರಿಂದ ಸಾಕಷ್ಟು ಕಳೆದುಕೊಳ್ಳಲಿದ್ದೇನೆ” ಎಂದು ತಿಳಿಸಿದ್ದಾರೆ.
View this post on Instagram
“ನಾನು ಪಕ್ಕಕ್ಕೆ ಸರಿಯಲು ಇದು ಸೂಕ್ತ ಸಮಯ. ನನ್ನಂತೆಯೇ ಇತರರು ಕೂಡ ತಮ್ಮ ಕನಸುಗಳನ್ನು ನನಸಾಗಿಸಲು ಅವಕಾಶ ಮಾಡಿಕೊಡಬೇಕು. ಮುಂದೆ ಇರುವ ಹೊಸ ಸವಾಲುಗಳಿಗೆ ನಾನು ಉತ್ಸುಕನಾಗಿದ್ದೇನೆ” ಎಂದು ಹೇಳಿದ್ದಲ್ಲದೇ, ತಮ್ಮ ವೃತ್ತಿ ಜೀವನದುದ್ದಕ್ಕೂ ಅವರ ಬೆಂಬಲ ನಿಂತ ಕುಟುಂಬ, ತರಬೇತುದಾರರು ಮತ್ತು ಆಟಗಾರರಿಗೆ ಆ್ಯಂಡರ್‌ಸನ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಅಂದಹಾಗೆ, 2003ರಲ್ಲಿ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದ ಆ್ಯಂಡರ್‌ಸನ್ ಈವರೆಗೂ 187 ಟೆಸ್ಟ್ ಪಂದ್ಯವನ್ನಾಡಿದ್ದು, 700 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಮುಂದಿನ ಜುಲೈ 10ರಿಂದ ವೆಸ್ಟ್‌ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.
ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳನ್ನು ಪಡೆದಿದ್ದ ಮೊದಲ ವೇಗಿ
ಇಂಗ್ಲೆಂಡ್‌ನ ವೇಗದ ಬೌಲರ್ ಜೇಮ್ಸ್ ಆ್ಯಂಡರ್‌ಸನ್ ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳನ್ನು ಪೂರೈಸಿದ ಮತ್ತು ಕ್ರೀಡಾ ಇತಿಹಾಸದಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಮುತ್ತಯ್ಯ ಮುರಳೀಧರನ್ ಮತ್ತು ಶೇನ್ ವಾರ್ನ್ ಅವರ ಬಳಿಕ 700 ವಿಕೆಟ್ ಗಟಿ ದಾಟಿದ ಮೂರನೇ ಬೌಲರ್ ಆಗಿದ್ದಾರೆ. ಮುತ್ತಯ್ಯ ಹಾಗೂ ವಾರ್ನ್ ಇಬ್ಬರೂ ಸ್ಪಿನ್ ಬೌಲರ್‌ಗಳು.
Bow down to the Swing King! 👑
James Anderson has become the first pacer to claim 7️⃣0️⃣0️⃣ wickets in Test Cricket. 🙌#IDFCFirstBankTestSeries #BazBowled #INDvENG #JioCinemaSport pic.twitter.com/Rj6iHht5J4
— JioCinema (@JioCinema) March 9, 2024
ಧರ್ಮಶಾಲಾದಲ್ಲಿ ಭಾರತ ವಿರುದ್ದ ನಡೆದಿದ್ದ ಐದನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಈ ಸಾಧನೆ ಮಾಡಿದ್ದರು. ಪಂದ್ಯದ ಮೂರನೇ ದಿನದಂದು ಟೀಮ್ ಇಂಡಿಯಾದ ಬೌಲರ್ ಕುಲದೀಪ್ ಯಾದವ್ ಅವರ ವಿಕೆಟ್ ಪಡೆಯುವ ಮೂಲಕ ಈ ಸಾಧನೆಯನ್ನು ಮಾಡಿದ್ದರು.
ಈವರೆಗೆ 194 ಏಕದಿನ ಪಂದ್ಯಗಳನ್ನು ಆಡಿರುವ ಜಿಮ್ಮಿ, 269 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ.
500ಕ್ಕೂ ಹೆಚ್ಚು ವಿಕೆಟ್ ಪಡೆದವರು
500ಕ್ಕಿಂತಲೂ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಪಟ್ಟಿಯಲ್ಲಿ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ 800 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದಾರೆ. ಉಳಿದಂತೆ ಕ್ರಮವಾಗಿ ಆಸೀಸ್‌ನ ಶೇನ್ ವಾರ್ನ್(708), ಇಂಗ್ಲೆಂಡ್‌ನ ಜೇಮ್ಸ್ ಆ್ಯಂಡರ್‌ಸನ್ 700, ಭಾರತದ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ 619, ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್ 604, ಆಸೀಸ್‌ನ ಗ್ಲೆನ್ ಮೆಕ್‌ಗ್ರಾಥ್ 563, ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ 527, ವೆಸ್ಟ್ ಇಂಡೀಸ್ ಕರ್ಟ್ನಿ ವಾಲ್ಶ್ 519, ರವಿಚಂದ್ರನ್ ಅಶ್ವಿನ್ 513 ವಿಕೆಟ್ ಪಡೆದಿದ್ದು, ಅಗ್ರ 10ರೊಳಗಿನ ಸ್ಥಾನದಲ್ಲಿದ್ದಾರೆ.
