ತಾಯಿಗೆ ಹೃದಯಾಘಾತ; ಇಂಗ್ಲೆಂಡ್‌ನಿಂದ ಭಾರತಕ್ಕೆ ಹೆಡ್ ಕೋಚ್ ಗೌತಮ್‌ ಗಂಭೀರ್ ವಾಪಸ್

Date:

ತಾಯಿಗೆ ಹೃದಯಾಘಾತವಾದ ಕಾರಣ ಟೀಂ ಇಂಡಿಯಾ ಕ್ರಿಕೆಟ್‌ನ ಮುಖ್ಯ ಕೋಚ್‌ ಗೌತಮ್‌ ಗಂಭೀರ್ ಭಾರತಕ್ಕೆ ವಾಪಸ್‌ ಆಗಿದ್ದಾರೆ.

- Advertisement -

ಶುಭ್​ಮನ್ ಗಿಲ್ ಅವರ ನಾಯಕತ್ವದ ಭಾರತ ತಂಡದೊಂದಿಗೆ ಐದು ಪಂದ್ಯಗಳ ಟೆಸ್ಟ್ ಸರಣಿ ಅಡಲು ಇಂಗ್ಲೆಂಡ್​ಗೆ ತೆರಳಿದ್ದ ಗೌತಮ್ ಗಂಭೀರ್ ತಂಡವನ್ನು ತೊರೆದು ಭಾರತಕ್ಕೆ ಮರಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಂಭೀರ್ ಅವರ ತಾಯಿಗೆ ಹೃದಯಾಘಾತವಾಗಿದ್ದು, ಪ್ರಸ್ತುತ ಅವರು ಐಸಿಯುನಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂಗ್ಲೆಂಡ್​ನಿಂದ ತಾಯ್ನಾಡಿಗೆ ಮರಳುತ್ತಿರುವ ಗೌತಮ್ ಗಂಭೀರ್, ಮೂಲಗಳ ಪ್ರಕಾರ ಜೂನ್‌ 17ರಂದು ಹಿಂತಿರುಗಲಿದ್ದಾರೆ ಎನ್ನಲಾಗಿದೆ. ಜೂನ್‌ 20 ರಿಂದ ಲೀಡ್ಸ್‌ನಲ್ಲಿ ಮೊದಲ ಟೆಸ್ಟ್‌ ಆರಂಭದೊಂದಿಗೆ ಇಂಗ್ಲೆಂಡ್‌ ಸರಣಿ ಶುರುವಾಗಲಿದೆ. ಐದು ಟೆಸ್ಟ್‌ಗಳ ಪ್ರವಾಸವು ಆಗಸ್ಟ್ 2025 ರವರೆಗೆ ಇರಲಿದೆ.

ಇದನ್ನು ಓದಿದ್ದೀರಾ? ಕಾಲ್ತುಳಿತ | ನಮ್ಮದು ತಪ್ಪಿಲ್ಲ ಎನ್ನುತ್ತಿರುವ ಎಲ್ಲರೂ; ಹಾಗಾದರೆ ಜನರೆ ಹೊಣೆಗಾರರಾದರೇ?

ಜುಲೈ 2ರಂದು ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್, ಜುಲೈ 10ರಂದು ಲಂಡನ್‌ನ ಲಾರ್ಡ್ಸ್, ಜುಲೈ 23ರಂದು ದಿ ಓವಲ್ ಹಾಗೂ ಜುಲೈ 31 ರಂದು ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಪಂದ್ಯಗಳನ್ನು ನಿಗದಿಪಡಿಸಲಾಗಿದೆ.

ಟೆಸ್ಟ್ ಕ್ರಿಕೆಟ್‌ನಿಂದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವಿಚಂದ್ರನ್ ಅಶ್ವಿನ್ ನಿವೃತ್ತರಾದ ನಂತರ ಭಾರತದ ಮೊದಲ ಪ್ರವಾಸ ಇದಾಗಿದ್ದು, ಶುಭಮನ್‌ ಗಿಲ್ ಮತ್ತು ಗೌತಮ್‌ ಗಂಭೀರ್ ನಾಯಕತ್ವದಲ್ಲಿ ಟೀಂ ಇಂಡಿಯಾ ಕ್ರಿಕೆಟ್‌ ಹೊಸ ಯುಗದ ಆರಂಭಕ್ಕೆ ಸಜ್ಜಾಗುತ್ತಿದೆ.

ಉಭಯ ತಂಡಗಳ ಆಟಗಾರರು

ಭಾರತ: ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ಕೆ ಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ ಜುರೆಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್‌ಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್‌ ಕೃಷ್ಣ, ಆಕಾಶ್ ದೀಪ್‌, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್.

ಇಂಗ್ಲೆಂಡ್: ಶೋಯೆಬ್ ಬಶೀರ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಸ್ಯಾಮ್ ಕುಕ್, ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಜೇಮೀ ಓವರ್ಟನ್, ಓಲಿ ಪೋಪ್, ಜೋ ರೂಟ್, ಜೇಮೀ ಸ್ಮಿತ್ (ವಿಕೆಟ್ ಕೀಪರ್), ಬೆನ್ ಸ್ಟೋಕ್ಸ್ (ನಾಯಕ), ಜೋಶ್ ಟಂಗ್, ಕ್ರಿಸ್ ವೋಕ್ಸ್.

ಎಲ್ಲ ಪಂದ್ಯಗಳು ಮಧ್ಯಾಹ್ನ 3.30ಕ್ಕೆ ಆರಂಭವಾಗಲಿವೆ

ಪಂದ್ಯಗಳ ನೇರ ಪ್ರಸಾರ: ಜಿಯೋ ಹಾಟ್‌ ಸ್ಟಾರ್ ಹಾಗೂ ಸ್ಟಾರ್‌ ಸ್ಪೋರ್ಟ್ಸ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...