ಏಕದಿನ ವಿಶ್ವಕಪ್ 2023 | ಬಾಂಗ್ಲಾ ವಿರುದ್ಧ ಇಂಗ್ಲೆಂಡ್‌ಗೆ ಭಾರೀ ಗೆಲುವು

Date:

ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿದ್ದ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್‌ ತಂಡ ಐಸಿಸಿ ಏಕದಿನ ವಿಶ್ವಕಪ್ 2023ರ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 137 ರನ್‌ಗಳ ಅಂತರದಲ್ಲಿ ಜಯಗಳಿಸಿದೆ.

ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‌ ಟೂರ್ನಿಯ 7ನೇ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ್ದ 365 ರನ್‌ಗಳ ಭಾರೀ ಮೊತ್ತದ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ 48.2 ಓವರ್‌ಗಳಲ್ಲಿ ಆಲೌಟ್‌ ಆಯಿತು. ಅಫ್ಘಾನಿಸ್ತಾನ್‌ ವಿರುದ್ಧ ಗೆಲುವು ಸಾಧಿಸಿದ್ದ ಬಾಂಗ್ಲಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿತು.

ಬಾಂಗ್ಲಾ ಪರ ಆರಂಭಿಕ ಆಟಗಾರ ಲಿಂಟನ್‌ ದಾಸ್ 76 (66 ಎಸೆತ, 7 ಬೌಂಡರಿ, 2 ಸಿಕ್ಸರ್), ವಿಕೆಟ್ ಕೀಪರ್ ಮುಶ್ಬಿಕರ್ ರಹೀಮ್ (51) ಹಾಗೂ ತೌಹಿದ್ ಹೃದಯೋನ್ (39) ರನ್‌ ಗಳಿಸಿದ್ದು ಬಿಟ್ಟರೆ ಉಳಿತ ಆಟಗಾರರರಿಂದ ಹೆಚ್ಚು ಪ್ರತಿರೋಧ ಬರಲಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇಂಗ್ಲೆಂಡ್ ಪರ ರೀಸ್‌ ಟೋಪ್ಲಿ 43/4, ಕ್ರಿಸ್ ವೋಕ್ಸ್ 49/2 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್‌ ಎನಿಸಿದರು.

ಇದಕ್ಕೂ ಮೊದಲು ಟಾಸ್‌ ಗೆದ್ದ ಬಾಂಗ್ಲಾದೆಶ ತಂಡದ ನಾಯಕ ಶಕೀಬ್ ಅಲ್ ಹಸನ್ ಇಂಗ್ಲೆಂಡ್ ತಂಡವನ್ನು ಬ್ಯಾಟಿಂಗ್ ಆಹ್ವಾನಿಸಿದರು. ಆರಂಭಿಕ ಆಟಗಾರ ಡೇವಿಡ್ ಮಲನ್ ಸ್ಪೋಟಕ 140, ಜೋ ರೂಟ್ 82, ಜಾನಿ ಬೈರ್ಸ್ಟೋವ್ 52 ರನ್‌ಗಳ ನೆರವಿನಿಂದ 50 ಓವರ್‌ಗಳಲ್ಲಿ ಆಂಗ್ಲ ಪಡೆ 9 ವಿಕೆಟ್ ನಷ್ಟಕ್ಕೆ 364 ರನ್‌ ಪೇರಿಸಿತು.

ಈ ಸುದ್ದಿ ಓದಿದ್ದೀರಾ? ಕ್ರಿಕೆಟ್ ವಿಶ್ವಕಪ್‌ನಲ್ಲಿ ಗರಿಷ್ಠ ಸ್ಕೋರ್ ದಾಖಲಿಸಿ ಆಸ್ಟ್ರೇಲಿಯಾ ದಾಖಲೆ ಹಿಂದಿಕ್ಕಿದ ದಕ್ಷಿಣ ಆಫ್ರಿಕಾ

ಡೇವಿಡ್ ಮಲಾನ್ ಸ್ಪೋಟಕ ಆಟ

ಇಂಗ್ಲೆಂಡ್‌ಗೆ ಆರಂಭಿಕರಾದ ಜಾನಿ ಬೈರ್‌ಸ್ಟೋ ಮತ್ತು ಡೇವಿಡ್ ಮಲಾನ್ ಉತ್ತಮ ಅಡಿಪಾಯ ಹಾಕಿದರು. ಈ ಜೋಡಿ ಮುರಿಯದ ಮೊದಲ ವಿಕೆಟ್‌ಗೆ 115 ರನ್‌ಗಳನ್ನು ಬಾರಿಸಿದರು. 52 ರನ್ ಗಳಿಸಿದ್ದ ಬೈರ್‌ಸ್ಟೋ ಅವರನ್ನು ಬಾಂಗ್ಲಾ ನಾಯಕ ಹಸನ್ ಪೆವಿಲಿಯನ್‌ಗೆ ಕಳಿಸಿದರು. ನಂತರ ಮಲಾನ್ ಅಬ್ಬರವನ್ನು ತಡೆಯಲು ಸಾಧ್ಯವಾಗಿಲ್ಲ. ಜೋ ರೂಟ್ ಅವರೊಂದಿಗೆ ಬ್ಯಾಟಿಂಗ್ ಮುಂದುವರೆಸಿದ ಮಲಾನ್ ಆಕರ್ಷಕ ಶತಕ ಬಾರಿಸಿದರು. 107 ಎಸೆತಗಳಲ್ಲಿ 16 ಬೌಂಡರಿ ಹಾಗೂ 5 ಅಮೋಘ ಸಿಕ್ಸರ್‌ಗಳು ಸೇರಿದಂತೆ 140 ರನ್ ಗಳಿಸಿ ಮೆಹದಿ ಹಸನ್ ಅವರಿಗೆ ವಿಕೆಟ್ ಒಪ್ಪಿಸಿದರು.

ಜೋ ರೂಟ್ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶನದ ಮೂಲಕ ಇಂಗ್ಲೆಂಡ್ 300ರ ಗಡಿ ದಾಟಲು ಕಾರಣರಾದರು. ರೂಟ್ 68 ಎಸೆತಗಳಿಂದ 8 ಬೌಂಡರಿ 1 ಸಿಕ್ಸರ್ ಸೇರಿ 82 ರನ್ ಪೇರಿಸಿ ಶೋರಿಫುಲ್ ಇಸ್ಲಾಂ ಅವರ ಎಸೆತದಲ್ಲಿ ಔಟಾದರು.

ಬಾಂಗ್ಲಾದೇಶದ ಪರ ಮೆಹದಿ ಹಸನ್ 71/4, ಶೋರಿಫುಲ್ ಇಸ್ಲಾಂ 75/3 ವಿಕೆಟ್ ಪಡೆದು ಯಶಸ್ವಿ ಬೌಲರ್‌ಗಳಾದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ 2024 | ತಲಾ 5 ಬಾರಿ ಕಪ್‌ ಗೆದ್ದಿರುವ ಮುಂಬೈ – ಚನ್ನೈ ನಡುವೆ ಹಣಾಹಣಿ; ಎಲ್ಲರ ಚಿತ್ತ ವಾಂಖೆಡೆಯತ್ತ!

ಐಪಿಎಲ್‌ನ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ (ಸಿಎಸ್‌ಕೆ) ಮತ್ತು ಮುಂಬೈ...

ಐಪಿಎಲ್ | ಕೆ ಎಲ್ ರಾಹುಲ್ ನೇತೃತ್ವದ ಲಕ್ನೋಗೆ ಸೋಲುಣಿಸಿದ ಡೆಲ್ಲಿ ಕ್ಯಾಪಿಟಲ್ಸ್‌

ಲಕ್ನೋ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಶುಕ್ರವಾರ ನಡೆದ ಐಪಿಎಲ್‌ನ 26ನೇ...

ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥ ಸ್ಥಾನಕ್ಕೆ ಮೇರಿ ಕೋಮ್ ರಾಜೀನಾಮೆ

ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥ ಸ್ಥಾನಕ್ಕೆ ಒಲಿಂಪಿಕ್ ಪದಕ ವಿಜೇತೆ...

ಐಪಿಎಲ್ 2024 | ಮುಂಬೈಗೆ ಭರ್ಜರಿ ಗೆಲುವು; ಆರ್‌ಸಿಬಿಗೆ 5ನೇ ಸೋಲು

ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 7 ವಿಕೆಟ್​ಗಳ...