ಏಕದಿನ ವಿಶ್ವಕಪ್ | ಸ್ಟೋಕ್ಸ್ ಭರ್ಜರಿ ಶತಕ; ಡಚ್ಚರ ವಿರುದ್ಧ ಇಂಗ್ಲೆಂಡ್‌ಗೆ ಸುಲಭ ಜಯ

Date:

ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್ ಭರ್ಜರಿ ಶತಕ ಹಾಗೂ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಹಾಲಿ ಚಾಂಪಿಯನ್‌ ಇಂಗ್ಲೆಂಡ್ ತಂಡ ಐಸಿಸಿ ಐಕದಿನ ವಿಶ್ವಕಪ್‌ ಟೂರ್ನಿಯ ತನ್ನ ಏಳನೇ ಲೀಗ್‌ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ 160 ರನ್‌ಗಳ ಭಾರಿ ಅಂತರದಿಂದ ಜಯಗಳಿಸಿತು.

- Advertisement -

ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್‌ ನೀಡಿದ 340 ರನ್‌ಗಳ ಬೃಹತ್‌ ಗುರಿಯನ್ನು ಬೆನ್ನಟ್ಟಿದ ನೆದರ್ಲ್ಯಾಂಡ್ಸ್ 37.2 ಓವರ್‌ಗಳಲ್ಲಿ 179 ರನ್‌ಗಳಿಗೆ ಆಲೌಟ್‌ ಆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ತೇಜ ನಿಡಮನೂರು(41), ನಾಯಕ ಸ್ಕಾಟ್ ಎಡ್ವರ್ಡ್ಸ್(38), ವೆಸ್ಲಿ ಬ್ಯಾರೆಸಿ(37) ಹಾಗೂ ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ (33) ಬ್ಯಾಟ್ಸ್‌ಮನ್‌ಗಳು ಮಾತ್ರ ಒಂದಷ್ಟು ಸಮಯ ಆಟವಾಡಿದರು.

ಇಂಗ್ಲೆಂಡ್‌ ಪರ ಅದಿಲ್‌ ರಶೀದ್ 54/3 , ಮೋಹಿನ್‌ ಅಲಿ 42/3 , ಡೇವಿಡ್ ವಿಲ್ಲಿ 19/2 ವಿಕೆಟ್ ಗಳಿಸಿ ನೆದರ್ಲ್ಯಾಂಡ್ಸ್ ಶೀಘ್ರ ಪತನಕ್ಕೆ ಕಾರಣರಾದರು.

ಈಗಾಗಲೇ ಸೆಮಿಪೈನಲ್‌ ಅರ್ಹತಾ ಸುತ್ತಿನಿಂದ ಹೊರ ಬಿದ್ದಿರುವ ಇಂಗ್ಲೆಂಡ್ ಟೂರ್ನಿಯಲ್ಲಿ ಎರಡನೇ ಗೆಲುವು ಸಾಧಿಸಿದೆ. ತನ್ನ ಕೊನೆಯ ಪಂದ್ಯವನ್ನು ನ.11 ರಂದು ಪಾಕ್‌ ವಿರುದ್ಧ ಆಡಲಿದೆ.

ಸೆಮಿಫೈನಲ್‌ ಪ್ರವೇಶಕ್ಕೆ ಒಂದಿಷ್ಟು ಆಸೆ ಹೊಂದಿದ್ದ ನೆದರ್ಲ್ಯಾಂಡ್ಸ್ ತಂಡ ಇಂಗ್ಲೆಂಡ್ ವಿರುದ್ಧ ಸೋಲುವುದರೊಂದಿಗೆ ಅಂತಿಮ ನಾಲ್ಕರ ಘಟ್ಟದ ಕನಸು ಕಮರಿ ಹೋಯಿತು. ಡಚ್ಚರು ತನ್ನ ಕೊನೆಯ ಪಂದ್ಯವನ್ನು ನ.12 ರಂದು ಬೆಂಗಳೂರಿನಲ್ಲಿ ಭಾರತದ ವಿರುದ್ಧ ಆಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಒಂದೇ ಬಾಲ್‌ಗೆ ಎರಡು ವಿಕೆಟ್: ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ‘ಟೈಮ್ಡ್ ಔಟ್’ಗೆ ಮ್ಯಾಥ್ಯೂಸ್ ಔಟ್

ಬೆನ್‌ ಸ್ಟೋಕ್ಸ್‌ ಸ್ಫೋಟಕ ಶತಕ

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ಇಂಗ್ಲೆಂಡ್‌ ತಂಡ ಬೆನ್‌ ಸ್ಟೋಕ್ಸ್ ಭರ್ಜರಿ ಶತಕ ಹಾಗೂ ಡೇವಿಡ್ ಮಲನ್, ಕ್ರಿಸ್‌ ವೋಕ್ಸ್ ಆಕರ್ಷಕ ಅರ್ಧ ಶತಕಗಳ ನೆರವಿನಿಂದ 9 ವಿಕೆಟ್‌ ನಷ್ಟಕ್ಕೆ 339 ರನ್‌ ಕಲೆ ಹಾಕಿತು.

ಆರಂಭದಲ್ಲಿ ಡೇವಿಡ್ ಮಲನ್ ಕೇವಲ 74 ಎಸೆತಗಳಲ್ಲಿ 10 ಬೌಂಡರಿ ಹಾಗೂ 2 ಸಿಕ್ಸರ್‌ ಸಹಿತ 87 ರನ್‌ ಗಳಿಸಿ ಉಪಯುಕ್ತ ನೆರವು ನೀಡಿದರು. ನಂತರ ಕ್ರಿಸ್‌ ವೋಕ್ಸ್‌ ಜೊತೆಗೂಡಿ ಏಳನೇ ವಿಕೆಟ್‌ಗೆ 129 ರನ್‌ಗಳ ಅಮೂಲ್ಯ ಜೊತೆಯಾಟವಾಡಿದ ಬೆನ್ ಸ್ಟೋಕ್ಸ್‌ ತಂಡದ ಮೊತ್ತ 300 ದಾಟಲು ನೆರವಾದರು. ಸ್ಟೋಕ್ಸ್‌ ಕೇವಲ 84 ಎಸೆತಗಳಲ್ಲಿ 6 ಬೌಂಡರಿ ಹಾಗೂ 6 ಸ್ಫೋಟಕ ಸಿಕ್ಸರ್‌ ಸಹಿತ 108 ರನ್‌ ಸಿಡಿಸಿದರು. ಕ್ರಿಸ್‌ ವೋಕ್ಸ್‌(51) ಕೂಡ ಆಕರ್ಷಕ ಅರ್ಧ ಶತಕ ಗಳಿಸಿದರು.

ನೆದರ್ಲೆಂಡ್ಸ್‌ ಪರ ಬಾಸ್‌ ಡಿ ಲೀಡ್‌ 3 ವಿಕೆಟ್‌ ಪಡೆದರೆ, ಆರ್ಯನ್‌ ದತ್‌ ಮತ್ತು ವಾನ್‌ ಬೀಕ್‌ ತಲಾ 2 ವಿಕೆಟ್‌ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...