ಎಫ್‌ಎ ಕಪ್‌ | ಮ್ಯಾಂಚೆಸ್ಟರ್‌ ಯುನೈಟೆಡ್‌-ಸಿಟಿ ತಂಡಗಳ ನಡುವೆ ʻಫೈನಲ್‌ ಫೈಟ್‌ʼ

Date:

ಪ್ರತಿಷ್ಠಿತ ಫುಟ್ಬಾಲ್ ಅಸೋಸಿಯೇಷನ್ ಚಾಲೆಂಜ್ ಕಪ್ (ಎಫ್‌ಎ ಕಪ್‌) ಫುಟ್‌ಬಾಲ್‌ ಟೂರ್ನಿಯ ಫೈನಲ್‌ ಪಂದ್ಯವು ಶನಿವಾರ ರಾತ್ರಿ  ಲಂಡನ್‌ನ ವೆಂಬ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಮ್ಯಾಂಚೆಸ್ಟರ್‌ ಸಿಟಿ ಮತ್ತು ಮಾಂಚೆಸ್ಟರ್‌ ಯುನೈಟೆಡ್‌ ತಂಡಗಳು ಎಫ್‌ಎ ಕಪ್‌ ಫೈನಲ್‌ ಫೈಟ್‌ನಲ್ಲಿ ಮುಖಾಮುಖಿಯಾಗಲಿವೆ.

ಕಳೆದ ವಾರವಷ್ಟೇ ಇಂಗ್ಲಿಷ್‌ ಪ್ರೀಮಿಯರ್‌ ಲೀಗ್‌ (ಇಪಿಲ್‌) ಚಾಂಪಿಯನ್‌ ಪಟ್ಟವನ್ನಲಂಕರಿಸಿರುವ ಸಿಟಿ ತಂಡವು ಪ್ರಸಕ್ತ ಆವೃತ್ತಿಯಲ್ಲಿ ಎರಡನೇ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ.

ಮತ್ತೊಂದೆಡೆ 2023ರ ಫೆಬ್ರವರಿ 26ರಂದು ಇದೇ ಮೈದಾನದಲ್ಲಿ ನಡೆದಿದ್ದ ಇಎಫ್‌ಎಲ್‌ ಕಪ್‌ (ಕರ್ಬಾವೊ ಕಪ್‌) ಫೈನಲ್‌ ಪಂದ್ಯದಲ್ಲಿ ನ್ಯೂ ಕ್ಯಾಸ್ಟಲ್‌ ತಂಡವನ್ನು 2-0 ಗೋಲುಗಳಿಂದ ಮಣಿಸಿದ್ದ ಯುನೈಟೆಡ್,   2017ರ ಬಳಿಕ ಪ್ರಮುಖ ಟೂರ್ನಿಯೊಂದರಲ್ಲಿ ಪ್ರಶಸ್ತಿ ಬರವನ್ನು ನೀಗಿಸಿತ್ತು.   

12 ಬಾರಿ ಚಾಂಪಿಯನ್‌

ಎರಿಕ್‌ ಟೆನ್‌ ಮುಖ್ಯ ತರಬೇತುದಾರರಾಗಿರುವ ಮ್ಯಾಂಚೆಸ್ಟರ್‌ ಯುನೈಟೆಡ್‌ ತಂಡ ಇದುವರೆಗೂ ಒಟ್ಟು 12 ಬಾರಿ ಎಫ್‌ಎ ಕಪ್‌ ಚಾಂಪಿಯನ್‌ ಆಗಿದೆ. 14 ಬಾರಿ ಚಾಂಪಿಯನ್‌ ಪಟ್ಟಕ್ಕೇರಿರುವ ಆರ್ಸನಲ್‌ ಮಾತ್ರವೇ ಯುನೈಟೆಡ್‌ಗಿಂತಲೂ ಹೆಚ್ಚು ಬಾರಿ ಪ್ರಶಸ್ತಿ ಗೆದ್ದ ದಾಖಲೆಯನ್ನು ಹೊಂದಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯಾ ಕಪ್ ಫೈನಲ್ | ಪಂದ್ಯಶ್ರೇಷ್ಠ ಪ್ರಶಸ್ತಿಯ ಮೊತ್ತವನ್ನು ಮೈದಾನದ ಸಿಬ್ಬಂದಿಗಳಿಗೆ ಅರ್ಪಿಸಿದ ಸಿರಾಜ್

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ...

ಏಷ್ಯಾ ಕಪ್ ಫೈನಲ್ | ಸಿರಾಜ್ ಮ್ಯಾಜಿಕ್; 8ನೇ ಬಾರಿಗೆ ಟೀಮ್ ಇಂಡಿಯಾ ಚಾಂಪಿಯನ್

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ...

ಏಷ್ಯಾ ಕಪ್ ಫೈನಲ್ | 50 ರನ್‌ಗೆ ಆಲೌಟಾದ ಶ್ರೀಲಂಕಾ!

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ...

ಏಷ್ಯಾ ಕಪ್ ಫೈನಲ್ | ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್ ಕಬಳಿಸಿದ ಸಿರಾಜ್; ಲಂಕಾಗೆ ಆರಂಭಿಕ ಆಘಾತ

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ...