ವಿರಾಟ್ ಕೊಹ್ಲಿ ದಾಖಲೆ ಮುರಿದ ದಕ್ಷಿಣ ಆಫ್ರಿಕಾದ ಸ್ಫೋಟಕ ಆಟಗಾರ

Date:

ದಕ್ಷಿಣ ಆಫ್ರಿಕಾದ ಸ್ಫೋಟಕ ಆಟಗಾರ ಫಾಫ್ ಡುಪ್ಲೆಸಿಸ್ ತಮ್ಮ ಟಿ20 ಪಂದ್ಯಾವಳಿಯಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದಲ್ಲದೆ ಟೀಂ ಇಂಡಿಯಾದ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ.

- Advertisement -

ದಕ್ಷಿಣ ಆಫ್ರಿಕಾದ ಪ್ರೀಮಿಯರ್‌ ಲೀಗ್‌ನ ಸನ್​ರೈಸರ್ಸ್ ಈಸ್ಟರ್ನ್ ಕೇಪ್​ ವಿರುದ್ಧದ ಪಂದ್ಯದಲ್ಲಿ ಜೋಬರ್ಗ್ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುವುದರೊಂದಿಗೆ ಫಾಫ್ ಟಿ20 ಕ್ರಿಕೆಟ್​ನಲ್ಲಿ 400 ಪಂದ್ಯಗಳನ್ನು ಆಡಿದ ಸಾಧಕರ ಪಟ್ಟಿಗೆ ಸೇರ್ಪಡೆಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 399 ಪಂದ್ಯಗಳನ್ನಾಡಿದ್ದರೆ, ಫಾಫ್ ಡುಪ್ಲೆಸಿಸ್ ಇದೀಗ 400 ಪಂದ್ಯಗಳ ಗುರಿ ಮುಟ್ಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ದಕ್ಷಿಣ ಆಫ್ರಿಕಾದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಫಾಫ್​ಗೂ ಮುನ್ನ ಡೇವಿಡ್ ಮಿಲ್ಲರ್ (516) ಹಾಗೂ ಇಮ್ರಾನ್ ತಾಹಿರ್ (426) ಮಾತ್ರ ದಕ್ಷಿಣ ಆಫ್ರಿಕಾ ಪರ ಈ ಸಾಧನೆ ಮಾಡಿದ್ದರು.

ಹಾಗೆಯೇ ಟಿ20 ಕ್ರಿಕೆಟ್ ಇತಿಹಾಸದಲ್ಲಿ 400 ಪಂದ್ಯಗಳನ್ನಾಡಿದ ವಿಶ್ವದ 22ನೇ ಆಟಗಾರನೆಂಬ ಕೀರ್ತಿಗೂ ಫಾಫ್ ಡುಪ್ಲೆಸಿಸ್ ಪಾತ್ರರಾಗಿದ್ದಾರೆ. ದಕ್ಷಿಣ ಆಫ್ರಿಕಾ, ಆರ್​ಸಿಬಿ, ಸಿಎಸ್​ಕೆ, ಜೆಎಸ್​ಕೆ ಸೇರಿದಂತೆ ಹಲವು ತಂಡಗಳ ಪರ ಒಟ್ಟು 400 ಟಿ20 ಪಂದ್ಯಗಳನ್ನಾಡಿರುವ ಫಾಫ್ 11102 ರನ್ ಕಲೆ ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಣಜಿ ಟ್ರೋಫಿ: ಟೀಂ ಇಂಡಿಯಾದ 7 ಆಟಗಾರರಿದ್ದರೂ 120 ರನ್‌ಗೆ ಮುಂಬೈ ಆಲೌಟ್

ಈ 11102 ರನ್​​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಕ್ಷಿಣ ಆಫ್ರಿಕಾದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡೇವಿಡ್ ಮಿಲ್ಲರ್. ಟಿ20 ಕ್ರಿಕೆಟ್​ನಲ್ಲಿ 516 ಪಂದ್ಯಗಳನ್ನಾಡಿರುವ ಮಿಲ್ಲರ್ ಒಟ್ಟು 11139 ರನ್​ ಕಲೆಹಾಕಿದ್ದಾರೆ.

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 399 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 382 ಇನಿಂಗ್ಸ್ ಆಡಿರುವ ಕೊಹ್ಲಿ 9 ಶತಕ ಹಾಗೂ 97 ಅರ್ಧಶತಕಗಳೊಂದಿಗೆ ಒಟ್ಟು 12886 ರನ್ ಪೇರಿಸಿದ್ದಾರೆ. ಅಂದರೆ ಫಾಫ್ ಡುಪ್ಲೆಸಿಸ್ ಪಂದ್ಯಗಳ ಸಂಖ್ಯೆಯಲ್ಲಿ ಮುಂದಿದ್ದರೆ, ವಿರಾಟ್ ಕೊಹ್ಲಿ ರನ್​ಗಳಿಕೆಯಲ್ಲಿ ಮುಂದಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ ಹೆಸರಿನಲ್ಲಿದೆ. ವೆಸ್ಟ್ ಇಂಡೀಸ್, ಮುಂಬೈ ಇಂಡಿಯನ್ಸ್, ಟ್ರಿನಿಡಾಡ್ ನೈಟ್ ರೈಡರ್ಸ್ ಸೇರಿದಂತೆ ವಿಶ್ವದ ಹಲವು ತಂಡಗಳ ಪರ ಪೊಲಾರ್ಡ್​ ಒಟ್ಟು 694 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಟಿ20 ಇತಿಹಾಸದಲ್ಲೇ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ಬರೆದಿದ್ದಾರೆ.

Faf du Plessis 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...