ಐದನೇ ಟೆಸ್ಟ್ | ಭಾರತಕ್ಕೆ 255 ರನ್‌ಗಳ ಮುನ್ನಡೆ; ಮೊದಲ ಪಂದ್ಯದಲ್ಲೇ ಅರ್ಧ ಶತಕ ಸಿಡಿಸಿದ ಕನ್ನಡಿಗ ಪಡಿಕ್ಕಲ್

Date:

ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಭಾರತ ತಂಡವು ಮೊದಲ ಇನಿಂಗ್ಸ್‌ನಲ್ಲಿ ಶುಭಮನ್‌ ಗಿಲ್ ಹಾಗೂ ರೋಹಿತ್ ಶರ್ಮಾ ಅವರ ಶತಕಗಳ ನೆರವಿನಿಂದ 255 ರನ್‌ಗಳ ಮುನ್ನಡೆ ಸಾಧಿಸಿದೆ.

- Advertisement -

ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ನೀಡಿದ 218 ರನ್‌ಗಳಿಗೆ ಉತ್ತರವಾಗಿ ಟೀಂ ಇಂಡಿಯಾ ತಂಡವು ಮೊದಲ ಇನಿಂಗ್ಸ್‌ನಲ್ಲಿ 120 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 473  ರನ್‌ಗಳನ್ನು ಕಲೆ ಹಾಕಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

164 ರನ್‌ಗಳ ಎರಡನೇ ವಿಕೆಟ್ ಜೊತೆಯಾಟವಾಡಿದ ಶುಭಮನ್‌ಗಿಲ್ ಹಾಗೂ ರೋಹಿತ್‌ ಶರ್ಮಾ ಶತಕವನ್ನು ಪೂರೈಸಿದರು. ಗಿಲ್‌ 110(12 ಬೌಂಡರಿ, 5 ಸಿಕ್ಸರ್) ಹಾಗೂ ರೋಹಿತ್ ಶರ್ಮಾ 103(13 ಬೌಂಡರಿ ಮೂರು ಸಿಕ್ಸರ್) ರನ್‌ ಬಾರಿಸಿದರು.

ಮೊದಲ ದಿನದಲ್ಲಿ ಯಶಸ್ವಿ ಜೈಸ್ವಾಲ್ ಅರ್ಧ ಶತಕ ಗಳಿಸಿದ್ದರೆ, ಎರಡನೇ ದಿನದಲ್ಲಿ ದೇವದತ್ ಪಡಿಕ್ಕಲ್, ಸರ್ಪರಾಜ್‌ ಖಾನ್ ಅರ್ಧ ಶತಕ ಪೂರೈಸಿದರು. 56(8 ಬೌಂಡರಿ, 1 ಸಿಕ್ಸರ್) ರನ್‌ಗಳೊಂದಿಗೆ ತಮ್ಮ ಮೂರನೇ ಟೆಸ್ಟ್‌ನಲ್ಲಿ ಸರ್ಪರಾಜ್‌ ಖಾನ್ ಮೂರನೇ ಅರ್ಧ ಶತಕ ಗಳಿಸಿದರು.

ಈ ಸುದ್ದಿ ಓದಿದ್ದೀರಾ? ಒಂದು ನೆನಪು | ಲಂಕೇಶರಿಗೆ ‘ಪತ್ರಿಕೆ’ ಜೀವನ್ಮರಣದ ಪ್ರಶ್ನೆಯಾಗಿತ್ತೇ?

ಮೊದಲ ಅಂತಾರಾಷ್ಟ್ರೀಯ ಟೆಸ್ಟ್ ಆಡಿದ ಕರ್ನಾಟಕದ ಆಟಗಾರ ದೇವದತ್ ಪಡಿಕ್ಕಲ್ ಮೊದಲ ಪಂದ್ಯದಲ್ಲಿಯೇ ಅರ್ಧ ಶತಕ ಸಿಡಿಸಿದರು. 103 ಚೆಂಡುಗಳಲ್ಲಿ 10 ಬೌಂಡರಿ ಹಾಗೂ 1 ಸಿಕ್ಸರ್‌ನೊಂದಿಗೆ 65 ರನ್‌ ಕಲೆ ಹಾಕಿದರು.

45 ರನ್‌ಗಳ ಒಂಭತ್ತನೆ ವಿಕೆಟ್ ಜೊತೆಯಾಟದೊಂದಿಗೆ ಆಟವಾಡುತ್ತಿರುವ ಕುಲ್‌ದೀಪ್ ಯಾದವ್‌ (27) ಹಾಗೂ ಜಸ್‌ಪ್ರೀತ್‌ ಬುಮ್ರಾ(19) ಕ್ರೀಸ್‌ನಲ್ಲಿ ಉಳಿದಿದ್ದಾರೆ

ರೋಹಿತ್ ಹಲವು ದಾಖಲೆಗಳು

ಟೆಸ್ಟ್‌ ಮಾದರಿಯಲ್ಲಿ 12ನೇ ಶತಕಗಳನ್ನು ಪೇರಿಸಿರುವ ನಾಯಕ ರೋಹಿತ್ ಹಲವು ದಾಖಲೆಗಳನ್ನು ತಮ್ಮ ಮಡಿಲಿಗೆ ಸೇರಿಸಿಕೊಂಡರು. ಇಂಗ್ಲೆಂಡ್‌ ಪರ ಆರಂಭಿಕ ಆಟಗಾರನಾಗಿ 4 ಶತಕ ಗಳಿಸಿ ಸುನಿಲ್‌ ಗವಾಸ್ಕರ್‌ ದಾಖಲೆಯನ್ನು ಸರಿಗಟ್ಟಿದರು.

ಆರಂಭಿಕ ಆಟಗಾರನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 43 ಶತಕ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಮೊದಲೆರಡು ಸ್ಥಾನದಲ್ಲಿ ಡೇವಿಡ್ ವಾರ್ನರ್(49) ಹಾಗೂ ಸಚಿನ್‌ ತೆಂಡೂಲ್ಕರ್‌(45) ಇದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್ ಪರ ಶೋಹೇಬ್ ಬಷೀರ್ 164/4, ಟಾಮ್ ಹಾರ್ಟಲಿ 122/2 ಹಾಗೂ ಜೇಮ್ಸ್‌ ಆಂಡರ್‌ಸನ್‌ ಮತ್ತು ನಾಯಕ ಬೆನ್ ಸ್ಟೋಕ್ಸ್ ತಲಾ ಒಂದು ವಿಕೆಟ್ ಗಳಿಸಿದರು.

ಸಂಕ್ಷಿಪ್ತ ಸ್ಕೋರ್

ಇಂಗ್ಲೆಂಡ್ ಮೊದಲ ಇನಿಂಗ್ಸ್ 218

ಭಾರತ ಮೊದಲ ಇನಿಂಗ್ಸ್ 473/8

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...