ಭಾರತದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸಿದೆ. ರಾಜ್ಕೋಟ್ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು. 171 ರನ್ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಯಾವುದೇ ಹಂತದಲ್ಲೂ ಪ್ರತಿರೋಧ ತೋರಲಿಲ್ಲ. 5 ಪಂದ್ಯಗಳ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ.
ಅದರಲ್ಲೂ ಸ್ಪಿನ್ನರ್ ಆದಿಲ್ ರಶೀದ್ ಅವರ ಎಸೆತಗಳನ್ನು ಎದುರಿಸಲು ಭಾರತೀಯ ಬ್ಯಾಟರ್ಗಳು ತಡಕಾಡಿದರು. ಪರಿಣಾಮ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 145 ರನ್ ಬಾರಿಸಿ ಟೀಮ್ ಇಂಡಿಯಾ 26 ರನ್ಗಳಿಂದ ಸೋಲೊಪ್ಪಿಕೊಂಡಿತು. ಭಾರತ ಸೋತರೂ ಟೀಂ ಇಂಡಿಯಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ.
ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಮೂವರು ಮಾತ್ರ 2 ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಈ ಮೂವರಲ್ಲಿ ಅತೀ ಕಡಿಮೆ ಇನಿಂಗ್ಸ್ಗಳ ಮೂಲಕ ಎರಡು ಬಾರಿ 5 ವಿಕೆಟ್ಗಳ ಸಾಧನೆ ಮಾಡಿರುವುದು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ. ಈ ಮೂಲಕ ಈ ಹಿಂದೆ ಎರಡು ಬಾರಿ 5 ವಿಕೆಟ್ಗಳನ್ನು ಕಬಳಿಸಿ ದಾಖಲೆ ಬರೆದಿದ್ದ ಬೌಲರ್ಗಳನ್ನು ಹಿಂದಿಕ್ಕಿ ವರುಣ್ ಚಕ್ರವರ್ತಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಟಿ20 ಕ್ರಿಕೆಟ್ನಲ್ಲಿ ಓವರ್ಸ್ಪಿನ್ ಹಾಗೂ ಮಿಸ್ಟರಿ ಎಸೆತಗಳ ಮೂಲಕವೇ ಸಂಚಲನ ಸೃಷ್ಟಿಸಿರುವ ವರುಣ್ ಚಕ್ರವರ್ತಿ ಇದೀಗ ಟೀಮ್ ಇಂಡಿಯಾ ಪರ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸ್ವಿಂಗ್ ಮಾಸ್ಟರ್ ಭುವನೇಶ್ವರ್ ಕುಮಾರ್ ಹಾಗೂ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರ ದಾಖಲೆಗಳನ್ನು ಮುರಿದಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಣಜಿ ಟ್ರೋಫಿ: ಟೀಂ ಇಂಡಿಯಾದ 7 ಆಟಗಾರರಿದ್ದರೂ 120 ರನ್ಗೆ ಮುಂಬೈ ಆಲೌಟ್
ವರುಣ್ 4 ಓವರ್ಗಳಲ್ಲಿ ಕೇವಲ 24 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್ನಲ್ಲಿ ಎರಡು ಬಾರಿ 5 ವಿಕೆಟ್ ಕಬಳಿಸಿದ 3ನೇ ಬೌಲರ್ ಎನಿಸಿಕೊಂಡರು.
ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭುವನೇಶ್ವರ್ ಕುಮಾರ್ ಯಾದವ್ ಕುಲ್ದೀಪ್ ಯಾದವ್. 87 ಟಿ20 ಪಂದ್ಯಗಳನ್ನಾಡಿರುವ ಭುವನೇಶ್ವರ್ ಕುಮಾರ್ 2 ಬಾರಿ 5 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 40 ಟಿ20 ಮ್ಯಾಚ್ಗಳ ಮೂಲಕ 2 ಬಾರಿ 5 ವಿಕೆಟ್ಗಳ ಸಾಧನೆ ಮಾಡಿದ್ದಾರೆ.
ಆದರೆ ಭುವನೇಶ್ವರ್ ಕುಮಾರ್ ಹಾಗೂ ಕುಲ್ದೀಪ್ ಯಾದವ್ ಹೆಸರಿನಲ್ಲಿರುವ ಈ ದಾಖಲೆಗಳನ್ನು ಸರಿಗಟ್ಟಲು ವರುಣ್ ಚಕ್ರವರ್ತಿ ತೆಗೆದುಕೊಂಡಿರುವುದು ಕೇವಲ 16 ಪಂದ್ಯಗಳನ್ನು ಮಾತ್ರ. ಸೌತ್ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸಿದ್ದ ವರುಣ್, ಇದೀಗ ಇಂಗ್ಲೆಂಡ್ ವಿರುದ್ಧ 24 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ.
ಈ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 2 ಬಾರಿ 5 ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಭಾರತದ ಪರ ಸತತ 2 ಸರಣಿಗಳಲ್ಲಿ 5 ವಿಕೆಟ್ ಪಡೆದ ಏಕೈಕ ಬೌಲರ್ ಎಂಬ ದಾಖಲೆಯನ್ನು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ತಮ್ಮದಾಗಿಸಿಕೊಂಡಿದ್ದಾರೆ.
