ಟೀಂ ಇಂಡಿಯಾ ಸೋತರೂ ವರುಣ್ ಚಕ್ರವರ್ತಿಯಿಂದ ವಿನೂತನ ದಾಖಲೆ

Date:

ಭಾರತದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸಿದೆ. ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು. 171 ರನ್​​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಯಾವುದೇ ಹಂತದಲ್ಲೂ ಪ್ರತಿರೋಧ ತೋರಲಿಲ್ಲ. 5 ಪಂದ್ಯಗಳ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ.

- Advertisement -

ಅದರಲ್ಲೂ ಸ್ಪಿನ್ನರ್ ಆದಿಲ್ ರಶೀದ್ ಅವರ ಎಸೆತಗಳನ್ನು ಎದುರಿಸಲು ಭಾರತೀಯ ಬ್ಯಾಟರ್​ಗಳು ತಡಕಾಡಿದರು. ಪರಿಣಾಮ 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 145 ರನ್ ಬಾರಿಸಿ ಟೀಮ್ ಇಂಡಿಯಾ 26 ರನ್​ಗಳಿಂದ ಸೋಲೊಪ್ಪಿಕೊಂಡಿತು. ಭಾರತ ಸೋತರೂ ಟೀಂ ಇಂಡಿಯಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಮೂವರು ಮಾತ್ರ 2 ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಈ ಮೂವರಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳ ಮೂಲಕ ಎರಡು ಬಾರಿ 5 ವಿಕೆಟ್​ಗಳ ಸಾಧನೆ ಮಾಡಿರುವುದು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ. ಈ ಮೂಲಕ ಈ ಹಿಂದೆ ಎರಡು ಬಾರಿ 5 ವಿಕೆಟ್​ಗಳನ್ನು ಕಬಳಿಸಿ ದಾಖಲೆ ಬರೆದಿದ್ದ ಬೌಲರ್​ಗಳನ್ನು ಹಿಂದಿಕ್ಕಿ ವರುಣ್ ಚಕ್ರವರ್ತಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಓವರ್​ಸ್ಪಿನ್ ಹಾಗೂ ಮಿಸ್ಟರಿ ಎಸೆತಗಳ ಮೂಲಕವೇ ಸಂಚಲನ ಸೃಷ್ಟಿಸಿರುವ ವರುಣ್ ಚಕ್ರವರ್ತಿ ಇದೀಗ ಟೀಮ್ ಇಂಡಿಯಾ ಪರ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸ್ವಿಂಗ್ ಮಾಸ್ಟರ್ ಭುವನೇಶ್ವರ್ ಕುಮಾರ್ ಹಾಗೂ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರ ದಾಖಲೆಗಳನ್ನು ಮುರಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಣಜಿ ಟ್ರೋಫಿ: ಟೀಂ ಇಂಡಿಯಾದ 7 ಆಟಗಾರರಿದ್ದರೂ 120 ರನ್‌ಗೆ ಮುಂಬೈ ಆಲೌಟ್

ವರುಣ್ 4 ಓವರ್​ಗಳಲ್ಲಿ ಕೇವಲ 24 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಎರಡು ಬಾರಿ 5 ವಿಕೆಟ್ ಕಬಳಿಸಿದ 3ನೇ ಬೌಲರ್ ಎನಿಸಿಕೊಂಡರು.

ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭುವನೇಶ್ವರ್ ಕುಮಾರ್ ಯಾದವ್ ಕುಲ್ದೀಪ್ ಯಾದವ್. 87 ಟಿ20 ಪಂದ್ಯಗಳನ್ನಾಡಿರುವ ಭುವನೇಶ್ವರ್ ಕುಮಾರ್ 2 ಬಾರಿ 5 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 40 ಟಿ20 ಮ್ಯಾಚ್​ಗಳ ಮೂಲಕ 2 ಬಾರಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಆದರೆ ಭುವನೇಶ್ವರ್ ಕುಮಾರ್ ಹಾಗೂ ಕುಲ್ದೀಪ್ ಯಾದವ್ ಹೆಸರಿನಲ್ಲಿರುವ ಈ ದಾಖಲೆಗಳನ್ನು ಸರಿಗಟ್ಟಲು ವರುಣ್ ಚಕ್ರವರ್ತಿ ತೆಗೆದುಕೊಂಡಿರುವುದು ಕೇವಲ 16 ಪಂದ್ಯಗಳನ್ನು ಮಾತ್ರ. ಸೌತ್ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸಿದ್ದ ವರುಣ್, ಇದೀಗ ಇಂಗ್ಲೆಂಡ್ ವಿರುದ್ಧ 24 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ.

ಈ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2 ಬಾರಿ 5 ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಭಾರತದ ಪರ ಸತತ 2 ಸರಣಿಗಳಲ್ಲಿ 5 ವಿಕೆಟ್ ಪಡೆದ ಏಕೈಕ ಬೌಲರ್ ಎಂಬ ದಾಖಲೆಯನ್ನು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ತಮ್ಮದಾಗಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...