ಮೊದಲ ಕ್ವಾಲಿಫೈಯರ್ | ಕೈಕೊಟ್ಟ ಆರಂಭಿಕ ಆಟಗಾರರು: ಕೆಕೆಆರ್‌ ವಿರುದ್ಧ ರನ್ ಗಳಿಸಲು ಪರದಾಡಿದ ಹೈದರಾಬಾದ್

Date:

ಲೀಗ್ ಹಂತದ ಪಂದ್ಯಗಳಲ್ಲಿ ಬೌಲರ್‌ಗಳನ್ನು ಮನಬಂದಂತೆ ಚಚ್ಚಿ ಸುದ್ದಿಯಾಗುತ್ತಿದ್ದ ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಬ್ಯಾಟರ್‌ಗಳು, ಇಂದು ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ವಿರುದ್ಧ ನಡೆಯುತ್ತಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರನ್ ಗಳಿಸಲು ಅಕ್ಷರಶಃ ಪರದಾಡಿದರು.

- Advertisement -

ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪ್ರಮುಖ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ವೈಫಲ್ಯಕ್ಕೊಳಗಾದ ಪ್ಯಾಟ್ ಕಮ್ಮಿನ್ಸ್‌ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್ ತಂಡವು, ಕೆಕೆಆರ್‌ನ ಸಂಘಟಿತ ಬೌಲಿಂಗ್ ದಾಳಿಗೆ ನಲುಗಿ 19.3 ಓವರ್‌ಗಳಲ್ಲಿ 159 ರನ್ ಗಳಿಸುವಷ್ಟರಲ್ಲಿ ಆಲೌಟ್‌ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

ಫೈನಲ್‌ಗೆ ತಲುಪಲು ನಿರ್ಣಾಯಕ ಪಂದ್ಯದಲ್ಲಿ ಟಾಸ್‌ ಗೆದ್ದಿದ್ದ ಹೈದರಾಬಾದ್ ತಂಡವು, ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ ಆರಂಭಿಕ ಹಂತದಲ್ಲೇ ಮಿಚೆಲ್ ಸ್ಟಾರ್ಕ್‌ ಅವರ ಪ್ರಖರ ಬೌಲಿಂಗ್‌ ದಾಳಿಗೆ ಸಿಲುಕಿ ವೈಫಲ್ಯಕ್ಕೊಳಗಾದರು.

ಮಿಚೆಲ್ ಸ್ಟಾರ್ಕ್‌ ಎಸೆದ ಮೊದಲ ಓವರ್‌ನ ಎರಡನೇ ಎಸೆತದಲ್ಲೇ ಸನ್‌ರೈಸರ್ಸ್‌ ಹೈದರಾಬಾದಿನ ಸ್ಫೋಟಕ ಬ್ಯಾಟರ್ ಟ್ರಾವಿಸ್ ಹೆಡ್, ಕ್ಲೀನ್‌ಬೌಲ್ಡ್ ಆದರು. ಹೆಡ್ ಖಾತೆ ತೆರೆಯದೆ ಪೆವಿಲಿಯನ್​ಗೆ ಮರಳಿದರು. ಆ ಮೂಲಕ ಆರಂಭದಲ್ಲೇ ಹೈದರಾಬಾದ್‌ ಬೃಹತ್ ಮೊತ್ತ ಹಾಕುವುದಕ್ಕೆ ಕಡಿವಾಣ ಹಾಕಿದರು.

ವೈಭವ್ ಅರೋರಾ ಹೈದರಾಬಾದ್‌ನ ಇನ್ನೋರ್ವ ಆರಂಭಿಕ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರನ್ನು ಔಟ್ ಮಾಡುವ ಮೂಲಕ ಕೆಕೆಆರ್‌ಗೆ ಎರಡನೇ ಯಶಸ್ಸನ್ನು ನೀಡಿದರು. ನಾಲ್ಕು ಎಸೆತಗಳಲ್ಲಿ ಮೂರು ರನ್ ಗಳಿಸಿ ಅಭಿಷೇಕ್ ಔಟಾದರು.

ಪವರ್ ಪ್ಲೇ ಮುಗಿಯುವುದರೊಳಗೆ ಮತ್ತೆ ದಾಳಿಗಿಳಿದ ಮಿಚೆಲ್ ಸ್ಟಾರ್ಕ್, ತಮ್ಮ ಅದ್ಭುತ ಬೌಲಿಂಗ್ ಮೂಲಕ ನಿತೀಶ್ ರೆಡ್ಡಿಯವರ ವಿಕೆಟ್ ಪಡೆಯುವ ಮೂಲಕ ಹೈದರಾಬಾದ್‌ಗೆ ಮತ್ತೊಂದು ಹೊಡೆತ ನೀಡಿದರು. ನಿತೀಶ್ ರೆಡ್ಡಿ 9 ರನ್ ಗಳಿಸಿ ಔಟಾದರೆ, ಬಳಿಕ ಕ್ರೀಸ್‌ಗೆ ಬಂದ ಶಾಬಾಝ್ ಅಹ್ಮದ್‌ರನ್ನೂ ಕೂಡ ಮೊದಲ ಎಸೆತದಲ್ಲೇ ಕ್ಲೀನ್‌ಬೌಲ್ಡ್‌ ಮಾಡಿದರು. ಆ ಮೂಲಕ, ಕ್ರೀಸ್‌ಗೆ ಬಂದ ಶಾಬಾಝ್‌ರನ್ನು ಬಂದಷ್ಟೇ ವೇಗದಲ್ಲೇ ಪೆವಿಲಿಯನ್ ಕಡೆಗೆ ತೆರಳುವಂತೆ ಮಾಡಿದರು.

6 ಓವರ್‌ಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 45 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ 5ನೇ ವಿಕೆಟ್‌ಗೆ ರಾಹುಲ್ ತ್ರಿಪಾಠಿ ಹಾಗೂ ಕ್ಲಾಸೆನ್ ಜೊತೆಯಾಟ ನಡೆಸಲು ಯತ್ನಿಸಿದರು. 62 ರನ್‌ಗಳ ಜೊತೆಯಾಟ ನಡೆಸಿ ಮುಂದುವರಿಯುತ್ತಿದ್ದಾಗ, ಸ್ಟಾರ್ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ ಸ್ಪಿನ್ನರ್ ವರುಣ್ ಚಕ್ರವರ್ತಿ ಬೌಲಿಂಗ್‌ನಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ವಿಫಲರಾಗಿ, ರಿಂಕು ಸಿಂಗ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. ಕ್ಲಾಸೆನ್, ಔಟಾಗುವುದಕ್ಕೂ ಮುನ್ನ  21 ಎಸೆತಗಳಲ್ಲಿ 32 ರನ್ ಗಳಿಸಿದರು.

ಒಂದು ಕಡೆ ವಿಕೆಟ್ ಉರುಳಿತ್ತಿದ್ದರೂ ಇನ್ನೊಂದೆಡೆ ಕ್ರೀಸ್‌ನಲ್ಲಿ ನಿಂತು ರನ್ ಗಳಿಸುತ್ತಿದ್ದ ರಾಹುಲ್ ತ್ರಿಪಾಠಿ ಅರ್ಥಶತಕ ಪೂರೈಸಿಕೊಂಡರು. 35 ಎಸೆತಗಳಲ್ಲಿ 55 ರನ್(7 ಬೌಂಡರಿ, 1 ಸಿಕ್ಸ್) ಗಳಿಸಿ ಮುಂದುವರಿಯುತ್ತಿದ್ದಾಗ ಅಬ್ದುಲ್ ಸಮದ್ ಜೊತೆಗೆ ಸೇರಿ ಒಂದು ರನ್ ಕದಿಯಲೆತ್ನಿಸಿದ ವೇಳೆ, ರನೌಟ್‌ಗೆ ಬಲಿಯಾದರು. ಅಬ್ದುಲ್ ಸಮದ್ 16 ರನ್ ಗಳಿಸಿ, ಔಟಾದರು.

ಹೈದರಾಬಾದ್‌ ಪರ IMPACT PLAYER ರೂಪದಲ್ಲಿ ಕ್ರೀಸ್‌ಗೆ ಬಂದಿದ್ದ ಸನ್ವೀರ್ ಸಿಂಗ್ ಅವರನ್ನು ಔಟ್ ಮಾಡುವ ಮೂಲಕ ಸ್ಪಿನ್ನರ್ ಸುನಿಲ್ ನರೈನ್ ಹೈದರಾಬಾದ್​ಗೆ ಆಘಾತ ನೀಡಿದರು. ಮೊದಲ ಎಸೆತದಲ್ಲೇ ಕ್ಲೀನ್‌ಬೌಲ್ಡ್ ಆದ ಸನ್ವೀರ್, ಖಾತೆ ತೆರೆಯದೆ ನಿರ್ಗಮಿಸಿದರು. ಕೊನೆಯಲ್ಲಿ ಏಕಾಂಗಿ ಹೋರಾಟ ನಡೆಸಿದ ನಾಯಕ ಪ್ಯಾಟ್ ಕಮ್ಮಿನ್ಸ್ 30 ರನ್​ಗಳನ್ನು ಸೇರಿಸಿದರು.

24 ಎಸೆತಗಳನ್ನು ಎದುರಿಸಿದ ಪ್ಯಾಟ್ ಕಮಿನ್ಸ್ 2 ಬೌಂಡರಿ ಹಾಗೂ 2 ಸಿಕ್ಸರ್‌ ಅನ್ನು ಬಾರಿಸಿ, 30 ರನ್ ಮಾಡಿದರು. ಕೆಕೆಆರ್‌ನ ಸಂಘಟಿತ ಬೌಲಿಂಗ್ ದಾಳಿಗೆ ನಲುಗಿದ ಹೈದರಾಬಾದ್‌, ನಿಗದಿತ 19.3 ಓವರ್‌ಗಳಲ್ಲಿ 159 ರನ್ ಗಳಿಸುವಷ್ಟರಲ್ಲಿ ಆಲೌಟ್‌ ಆಯಿತು. ಆ ಮೂಲಕ ಕೆಕೆಆರ್ ಗೆಲುವಿಗೆ 160 ರನ್‌ಗಳ ಸಾಧಾರಣ ಮೊತ್ತ ನೀಡಿದೆ.

ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಪರ ಬೌಲಿಂಗ್‌ನಲ್ಲಿ ಮಿಂಚಿದ ಮಿಚೆಲ್ ಸ್ಟಾರ್ಕ್‌ 34ಕ್ಕೆ 3 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಉಳಿದಂತೆ ಆ್ಯಂಡ್ರ್ಯೂ ರಸ್ಸೆಲ್, ಹರ್ಷಿತ್ ರಾಣಾ, ವೈಭವ್ ಅರೋರಾ, ಸುನಿಲ್ ನರೈನ್ ತಲಾ ಒಂದೊಂದು ವಿಕೆಟ್ ಗಳಿಸಿದರು.

ಇದನ್ನು ಓದಿದ್ದೀರಾ? ಆಲ್‌ರೌಂಡರ್ ಸ್ವಪ್ನಿಲ್ ಸಿಂಗ್: ಆರ್‌ಸಿಬಿ ತಂಡದ ‘ಹೊಸ ಲಕ್ಕಿ ಚಾರ್ಮ್’

ಮೊದಲ ಕ್ವಾಲಿಫೈಯರ್‌ನಲ್ಲಿ ಗೆದ್ದವರು ನೇರವಾಗಿ ಫೈನಲ್ ಪ್ರವೇಶಿಸಿದರೆ, ಸೋತವರಿಗೆ ಮತ್ತೊಂದು ಅವಕಾಶ ಸಿಗಲಿದೆ. ನಾಳೆ(ಮೇ 22) ಇದೇ ಮೈದಾನದಲ್ಲಿ ಆರ್‌ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್‌ ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಇದರಲ್ಲಿ ಜಯ ಗಳಿಸಿದವರು, ಮೇ 24ರಂದು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ತಂಡವನ್ನು ಎದುರಿಸಲಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...