ವೆಸ್ಟ್ ಇಂಡೀಸ್‌ನ ಡಾಮಿನಿಕಾ ಕ್ರೀಡಾಂಗಣದಲ್ಲಿ ಆರಂಭವಾದ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡವು ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಗೆಲುವು ಸಾಧಿಸಿದೆ. ಬೌಲರ್ ರವಿಚಂದ್ರನ್ ಅಶ್ವಿನ್ ಮತ್ತೊಮ್ಮೆ ಎದುರಾಳಿ ತಂಡದ ಬೆನ್ನೆಲುಬು ಮುರಿದಿದ್ದು, ಕೇವಲ 21.3 ಓವರ್‌ಗಳಲ್ಲಿ 71 ರನ್‌ಗಳಿಗೆ ಏಳು ವಿಕೆಟ್ ಪತನ ಮಾಡಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ತಂಡವು ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಗೆದ್ದುಕೊಂಡಿದೆ. ಇದರೊಂದಿಗೆ ಎರಡು ಪಂದ್ಯಗಳ ಸರಣಿಯಲ್ಲಿ 1–0 ಅಂತರದ ಮುನ್ನಡೆ ಸಾಧಿಸಿದೆ.
ಬುಧವಾರ ಆರಂಭವಾದ ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್ ತಂಡ 150 ರನ್‌ಗಳಿಗೆ ಆಲೌಟ್ ಆಗಿತ್ತು. 150 ರನ್‌ಗಳ ಎದುರು ಬ್ಯಾಂಟಿಂಗ್ ನಡೆಸಿದ ಭಾರತ ತಂಡ 5 ವಿಕೆಟ್ ನಷ್ಟಕ್ಕೆ 421 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.
ಎರಡನೇ ಇನ್ನಿಂಗ್ಸ್‌ನಲ್ಲಿ ಕೆರೀಬಿಯನ್ ಬ್ಯಾಟ್ಸ್‌ಮ್ಯಾನ್‌ಗಳಿಂದ ಉತ್ತಮ ಸಾಧನೆಯ ನಿರೀಕ್ಷೆ ಇಟ್ಟುಕೊಂಡಿತ್ತು. ಕೇವಲ 50.3 ಓವರ್‌ಗಳಲ್ಲಿ 130 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಆತಿಥೇಯ ತಂಡ ಮೂರನೇ ದಿನವೇ ಪಂದ್ಯ ಕೊನೆಯಾಗಿಸಿತು.
ಪಂದ್ಯವಾಡಿದ ಯಶಸ್ವಿ ಜೈಸ್ವಾಲ್ (171), ನಾಯಕ ರೋಹಿತ್ ಶರ್ಮಾ (103) ಶತಕ ಹಾಗೂ ಅನುಭವಿ ವಿರಾಟ್ ಕೊಹ್ಲಿ 76 ರನ್ ಕಲೆಹಾಕಿ ಭಾರತ ತಂಡಕ್ಕೆ ಇನಿಂಗ್ಸ್ ಗೆ ಬಲ ತುಂಬಿದ್ದರು.
ಈ ಸುದ್ದಿ ಓದಿದ್ದೀರಾ? ವರ್ಷದ ಕೊನೆಯಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ : ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ
ಈ ಬಾರಿ ಪಂದ್ಯದಲ್ಲಿ ಗೆದ್ದ ಭಾರತ ತಂಡಕ್ಕೆ ಬೆನ್ನೆಲುಬು ಆಗಿದ್ದವರು ಆರ್ ಅಶ್ವಿನ್. ಅವರ ವೃತ್ತಿ ಜೀವನದಲ್ಲಿಯೇ ಅತ್ಯುತ್ತಮ ಸಾಧನೆಯಾಗಿ ದಾಖಲೆಯಾಗಿದೆ. ಕೇವಲ 21.3 ಓವರ್‌ಗಳಲ್ಲಿ 71 ರನ್‌ಗಳಿಗೆ ಏಳು ವಿಕೆಟ್ ಕಿತ್ತು ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ 33ನೇ ಬಾರಿ ಐದು ವಿಕೆಟ್‌ಗಳನ್ನು ಪಡೆದರು.
ಎರಡನೇ ಪಂದ್ಯ ಟ್ರಿನಿಡಾಡ್ ನ ಕ್ವೀನ್ಸ್ ಪಾರ್ಕ್ ನಲ್ಲಿ ಜುಲೈ 20ರಿಂದ ಜುಲೈ 24ರ ವರೆಗೆ ನಡೆಯಲಿದೆ.