ಪ್ರಥಮ ಟೆಸ್ಟ್‌ ಕ್ರಿಕೆಟ್ | ಅಶ್ವಿನ್ ಸ್ಪಿನ್ ಮೋಡಿ, ಜೈಸ್ವಾಲ್ ಯಶಸ್ವಿ ಬ್ಯಾಟಿಂಗ್ ಬಲದಿಂದ ಗೆದ್ದ ಭಾರತ

Date:

ವೆಸ್ಟ್‌ ಇಂಡೀಸ್‌ನ ಡಾಮಿನಿಕಾ ಕ್ರೀಡಾಂಗಣದಲ್ಲಿ ಆರಂಭವಾದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ವೆಸ್ಟ್‌ ಇಂಡೀಸ್ ವಿರುದ್ಧ ಭಾರತ ತಂಡವು ಇನಿಂಗ್ಸ್ ಹಾಗೂ 141 ರನ್‌ ಅಂತರದಿಂದ ಗೆಲುವು ಸಾಧಿಸಿದೆ. ಬೌಲರ್ ರವಿಚಂದ್ರನ್ ಅಶ್ವಿನ್ ಮತ್ತೊಮ್ಮೆ ಎದುರಾಳಿ ತಂಡದ ಬೆನ್ನೆಲುಬು ಮುರಿದಿದ್ದು, ಕೇವಲ 21.3 ಓವರ್‌ಗಳಲ್ಲಿ 71 ರನ್‌ಗಳಿಗೆ ಏಳು ವಿಕೆಟ್‌ ಪತನ ಮಾಡಿದ್ದಾರೆ.

- Advertisement -

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ತಂಡವು ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಗೆದ್ದುಕೊಂಡಿದೆ. ಇದರೊಂದಿಗೆ ಎರಡು ಪಂದ್ಯಗಳ ಸರಣಿಯಲ್ಲಿ 1–0 ಅಂತರದ ಮುನ್ನಡೆ ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬುಧವಾರ ಆರಂಭವಾದ ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ವೆಸ್ಟ್‌ ಇಂಡೀಸ್‌ ತಂಡ 150 ರನ್‌ಗಳಿಗೆ ಆಲೌಟ್‌ ಆಗಿತ್ತು. 150 ರನ್‌ಗಳ ಎದುರು ಬ್ಯಾಂಟಿಂಗ್‌ ನಡೆಸಿದ ಭಾರತ ತಂಡ 5 ವಿಕೆಟ್ ನಷ್ಟಕ್ಕೆ 421 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.

ಎರಡನೇ ಇನ್ನಿಂಗ್ಸ್‌ನಲ್ಲಿ ಕೆರೀಬಿಯನ್ ಬ್ಯಾಟ್ಸ್‌ಮ್ಯಾನ್‌ಗಳಿಂದ ಉತ್ತಮ ಸಾಧನೆಯ ನಿರೀಕ್ಷೆ ಇಟ್ಟುಕೊಂಡಿತ್ತು. ಕೇವಲ 50.3 ಓವರ್‌ಗಳಲ್ಲಿ 130 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಆತಿಥೇಯ ತಂಡ ಮೂರನೇ ದಿನವೇ ಪಂದ್ಯ ಕೊನೆಯಾಗಿಸಿತು.

ಪಂದ್ಯವಾಡಿದ ಯಶಸ್ವಿ ಜೈಸ್ವಾಲ್ (171), ನಾಯಕ ರೋಹಿತ್ ಶರ್ಮಾ (103) ಶತಕ ಹಾಗೂ ಅನುಭವಿ ವಿರಾಟ್ ಕೊಹ್ಲಿ 76 ರನ್ ಕಲೆಹಾಕಿ ಭಾರತ ತಂಡಕ್ಕೆ ಇನಿಂಗ್ಸ್ ಗೆ ಬಲ ತುಂಬಿದ್ದರು.

ಈ ಸುದ್ದಿ ಓದಿದ್ದೀರಾ? ವರ್ಷದ ಕೊನೆಯಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ : ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಈ ಬಾರಿ ಪಂದ್ಯದಲ್ಲಿ ಗೆದ್ದ ಭಾರತ ತಂಡಕ್ಕೆ ಬೆನ್ನೆಲುಬು ಆಗಿದ್ದವರು ಆರ್ ಅಶ್ವಿನ್. ಅವರ ವೃತ್ತಿ ಜೀವನದಲ್ಲಿಯೇ ಅತ್ಯುತ್ತಮ ಸಾಧನೆಯಾಗಿ ದಾಖಲೆಯಾಗಿದೆ. ಕೇವಲ 21.3 ಓವರ್‌ಗಳಲ್ಲಿ 71 ರನ್‌ಗಳಿಗೆ ಏಳು ವಿಕೆಟ್‌ ಕಿತ್ತು ಅಶ್ವಿನ್ ಟೆಸ್ಟ್‌ ಕ್ರಿಕೆಟ್‌ನಲ್ಲಿ 33ನೇ ಬಾರಿ ಐದು ವಿಕೆಟ್‌ಗಳನ್ನು ಪಡೆದರು.

ಎರಡನೇ ಪಂದ್ಯ ಟ್ರಿನಿಡಾಡ್ ನ ಕ್ವೀನ್ಸ್ ಪಾರ್ಕ್ ನಲ್ಲಿ ಜುಲೈ 20ರಿಂದ ಜುಲೈ 24ರ ವರೆಗೆ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...