ಕುಲದೀಪ್, ಜಡೇಜಾ ದಾಳಿಗೆ ಕುಸಿದ ವಿಂಡೀಸ್; ಎರಡು ದಾಖಲೆಯೊಂದಿಗೆ ಭಾರತ ಶುಭಾರಂಭ

Date:

ವೆಸ್ಟ್‌ ಇಂಡೀಸ್ ನೀಡಿದ ಕೇವಲ 115 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ 22.5 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ ಗೆಲುವು ದಾಖಲಿಸಿ ಮೊದಲ ಏಕದಿನ ಪಂದ್ಯದಲ್ಲಿ ಶುಭಾರಂಭ ಮಾಡಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಎರಡು ವಿಶಿಷ್ಟ ದಾಖಲೆಗಳನ್ನು ಕೂಡ ಮುಡಿಗೇರಿಸಿಕೊಂಡಿತು.

- Advertisement -

ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್‌ ಮಾಡಿದ ಶಾಯ್‌ ಹೋಪ್‌ ನೇತೃತ್ವದ ವೆಸ್ಟ್‌ ಇಂಡೀಸ್, ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್‌ ಸ್ಪಿನ್‌ ದಾಳಿಗೆ ಕುಸಿತ ಕಂಡಿತು. ಕೇವಲ 23 ಓವರ್‌ಗಳಲ್ಲಿ 114 ರನ್‌ಗಳಿಗೆ ವಿಂಡೀಸ್‌ ಆಲೌಟ್ ಆಯಿತು. ಕಡಿಮೆ ಗುರಿ ಬೆನ್ನಟ್ಟಿದ ಭಾರತ 22.5 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಇದರೊಂದಿಗೆ ಮೂರು ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಈ ಸುದ್ದಿ ಓದಿದ್ದೀರಾ? ಇಂದಿನಿಂದ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ : ಟೀಮ್ ಇಂಡಿಯಾದ ಪ್ರಮುಖ ಬೌಲರ್ ಸಿರಾಜ್ ಔಟ್!

ನಾಯಕ ರೋಹಿತ್‌ ಶರ್ಮಾ ಬದಲಿಗೆ ಇಶಾನ್‌ ಕಿಶನ್‌ ಇನ್ನಿಂಗ್ಸ್‌ ಆರಂಭಿಸಿದರು. ಕಿಶನ್‌ ಜೊತೆಗೆ ಬಂದ ಶುಭಮನ್‌ ಗಿಲ್‌ 7 ರನ್‌ ಗಳಿಸಿ ಪೆವಿಲಿಯನ್‌ಗೆ ತೆರಳಿದರು. ಇದರೊಂದಿಗೆ ಟೆಸ್ಟ್‌ ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ್ದ ಗಿಲ್‌, ಏಕದಿನ ಸರಣಿಯಲ್ಲೂ ತಮ್ಮ ಕಳಪೆ ಪ್ರದರ್ಶನ ಮುಂದುವರೆಸಿದರು.

ಸ್ಫೋಟಕ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್‌ ಯಾದವ್‌ 19 ರನ್‌ ಗಳಿಸಿ ಔಟಾದರು. ಹಾರ್ದಿಕ್‌ ಪಾಂಡ್ಯ ಹಾಗೂ ಶಾರ್ದುಲ್‌ ಠಾಕೂರ್‌ ಕೂಡ ಹೆಚ್ಚು ಹೊತ್ತು ನಿಲ್ಲದೆ ವಿಕೆಟ್‌ ಒಪ್ಪಿಸಿದರು. ಅಂತಿಮವಾಗಿ ನಾಯಕ ರೋಹಿತ್‌ ಶರ್ಮಾ ಮತ್ತು ರವೀಂದ್ರ ಜಡೇಜಾ ತಂಡವನ್ನು ಗೆಲುವಿನ ದಡ ಸೇರಿಸಿದರು.

ಜಯದಲ್ಲಿ ಪ್ರಮುಖ ಪಾತ್ರ ವಹಿಸಿದ ಇಶಾನ್‌ ಕಿಶನ್‌ ಅರ್ಧ ಶತಕ ಸಿಡಿಸಿದರು. ಇವರ 46 ಎಸೆತಗಳ 52 ರನ್‌ಗಳ ಬ್ಯಾಟಿಂಗ್‌ನಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್‌ ಸಹಿತ 52 ರನ್‌ಗಳು ಮೂಡಿ ಬಂದವು.

ವಿಂಡೀಸ್ ಎರಡನೇ ಅತಿ ಕಡಿಮೆ ಮೊತ್ತ

ಇದಕ್ಕೂ ಮೊದಲು ಬ್ಯಾಟ್‌ ಮಾಡಿದ ವೆಸ್ಟ್‌ ಇಂಡೀಸ್, ರವೀಂದ್ರ ಜಡೇಜಾ ಮತ್ತು ಕುಲ್ದೀಪ್‌ ಯಾದವ್‌ ಸ್ಪಿನ್‌ ದಾಳಿಗೆ 23 ಓವರ್‌ಗಳಲ್ಲಿ 114 ರನ್‌ಗಳಿಗೆ ಆಲೌಟ್‌ ಆಯಿತು. ನಾಯಕ ಶಾಯ್‌ ಹೋಪ್‌ (43), ಅಲಿಕ್‌ ಅಥಾನಾಜೆ (22), ಬ್ರಾಡನ್‌ ಕಿಂಗ್‌ (17) ಒಂಚೂರು ಪ್ರತಿರೋಧ ತೋರಿದ್ದು ಬಿಟ್ಟರೆ ಉಳಿದವರೆಲ್ಲ ಬಂದ ದಾರಿಯಲ್ಲಿಯೇ ಹಿಂತಿರುಗಿದರು. ಕುಲದೀಪ್ ಯಾದವ್‌ 6/4 ಹಾಗೂ 37/3 ವಿಕೆಟ್‌ ಕಬಳಿಸಿ ಜಯದ ರೂವಾರಿಯಾದರು. 4 ವಿಕೆಟ್ ಪಡೆದ ಕುಲದೀಪ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು

114 ರನ್‌ ದಾಖಲಿಸಿದ ವೆಸ್ಟ್ ಇಂಡೀಸ್ ತಂಡ ಭಾರತದ ವಿರುದ್ಧ ಎರಡನೇ ಅತಿ ಕಡಿಮೆ ಮೊತ್ತವನ್ನು ದಾಖಲಿಸಿತು. 2018ರಲ್ಲಿ ತಿರುವನಂತಪುರಂನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಕೇವಲ 104 ರನ್‌ಗಳಿಗೆ ಭಾರತ ಆಲೌಟ್‌ ಮಾಡಿತ್ತು.

ಕುಲದೀಪ್‌, ಜಡೇಜಾ ಅಪರೂಪದ ಸಾಧನೆ
ಈ ಪಂದ್ಯದಲ್ಲಿ ಭಾರತದ ಸ್ಪಿನ್ ಜೋಡಿ ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಅಪರೂಪದ ದಾಖಲೆಯೊಂದನ್ನು
ಬರೆದರು. ಪಂದ್ಯದಲ್ಲಿ ಒಟ್ಟು ಏಳು ವಿಕೆಟ್ ಕಿತ್ತ ಈ ಜೋಡಿ ಪಂದ್ಯವೊಂದರಲ್ಲಿ ಏಳು ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಕಿತ್ತ ಭಾರತದ ಮೊದಲ ಎಡಗೈ ಸ್ಪಿನ್ನರ್‌ಗಳು ಎಂಬ ದಾಖಲೆ ಬರೆದರು. ಈ ದಾಖಲೆ 49 ವರ್ಷಗಳಲ್ಲಿ ಇದೇ ಮೊದಲಾಗಿದೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...