ಐಪಿಎಲ್ ತೊರೆದು ತವರಿಗೆ ಹೊರಟ ಇಂಗ್ಲೆಂಡ್‌ನ ಆಟಗಾರರು; ಪ್ರಮುಖ ಪಂದ್ಯ ಮಿಸ್ ಮಾಡಲಿರುವ RCBಯ ವಿಲ್ ಜಾಕ್ಸ್‌!

Date:

ದೇಶದಲ್ಲಿ ಸದ್ಯ ನಡೆಯುತ್ತಿರುವ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್(ಐಪಿಎಲ್)​ ಸೀಸನ್​ ಬೆನ್ನಲ್ಲೇ ಐಸಿಸಿಯ ಮೆಗಾ ಟೂರ್ನಿ ಟಿ20 ವಿಶ್ವಕಪ್​ ನಡೆಯಲಿದೆ. ಭಾರತ, ದಕ್ಷಿಣ ಆಫ್ರಿಕಾ, ನ್ಯೂಝಿಲ್ಯಾಂಡ್​, ಇಂಗ್ಲೆಂಡ್​ ಸೇರಿದಂತೆ ಹಲವು ದೇಶಗಳು ಟಿ20 ವಿಶ್ವಕಪ್​ಗಾಗಿ ಬಲಿಷ್ಠ ತಂಡಗಳು ಪ್ರಕಟಿಸಿವೆ.

- Advertisement -

ಮೇ 18ರಂದು ಆರ್​​​ಸಿಬಿ ಹಾಗೂ ಚೆನ್ನೈ ಸೂಪರ್​​ ಕಿಂಗ್ಸ್​ ಮಧ್ಯೆ ಪ್ಲೇ-ಆಫ್​​ ಪ್ರವೇಶ ಅರ್ಹತೆಯನ್ನು ಪಡೆಯುವ​​ ಫಂದ್ಯ  ನಡೆಯಲಿದೆ. ಈ ರೋಚಕ ಪಂದ್ಯಕ್ಕೂ ಮುನ್ನವೇ ಆರ್​​​ಸಿಬಿಗೆ ಆಘಾತ ಉಂಟಾಗಿದೆ. ಆರ್‌ಸಿಬಿ ಸೇರಿದಂತೆ ಕೆಲ ಪ್ರಮುಖ ತಂಡಗಳಲ್ಲಿ ಆಡುತ್ತಿದ್ದ ಇಂಗ್ಲೆಂಡ್‌ನ ಆಟಗಾರರು ತಮ್ಮ ತವರಿಗೆ ಮರಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಐಪಿಎಲ್​ ಪ್ಲೇ ಆಫ್​ಗೆ ಮುನ್ನವೇ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಸ್ಟಾರ್​ ಆಲ್​ರೌಂಡರ್ ವಿಲ್ ಜಾಕ್ಸ್​​​ ಇಂಗ್ಲೆಂಡ್​ ತಂಡ ಸೇರಿಕೊಳ್ಳಬೇಕಿದೆ. ಟಿ20 ವಿಶ್ವಕಪ್​ಗೆ ಮುನ್ನ ಮೇ 22ರಿಂದ ಇಂಗ್ಲೆಂಡ್​​ ತಂಡವು ಪಾಕ್​ ವಿರುದ್ಧ 4 ಟಿ20 ಪಂದ್ಯಗಳ ಸರಣಿ ಆಡಲಿದೆ. ಹಾಗಾಗಿ ಆರ್​​ಸಿಬಿ ಸ್ಟಾರ್​ ಆಲ್​ರೌಂಡರ್​​ ವಿಲ್​ ಜಾಕ್ಸ್​​​ ಆರ್​​ಸಿಬಿ ತೊರೆದು ಇಂಗ್ಲೆಂಡ್​ ತಂಡ ಸೇರಿಕೊಳ್ಳಲು ಹೊರಟಿದ್ದಾರೆ. ಈ ಬಗ್ಗೆ ಖುದ್ದು ಆರ್​​ಸಿಬಿ ಟ್ವೀಟ್​ ಮಾಡಿದ್ದು, ವಿಲ್ ಜಾಕ್ಸ್‌ ಹಾಗೂ ಬೌಲರ್ ರೀಸ್‌ ಟೋಪ್ಲಿ ಅವರನ್ನು ತವರಿಗೆ ಕಳುಹಿಸಿಕೊಟ್ಟಿರುವುದಾಗಿ ತಿಳಿಸಿದೆ.

ಗುಜರಾತ್​​ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದ ವಿಲ್​​ ಜಾಕ್ಸ್, ​​​ ಕೇವಲ 41 ಎಸೆತದಲ್ಲಿ ಶತಕ ಬಾರಿಸುವ ಮೂಲಕ ಮಿಂಚಿದ್ದರು. ಈ ಸಾಧನೆಯಲ್ಲಿ 10 ಸಿಕ್ಸರ್​​, 5 ಬೌಂಡರಿಗಳು ಕೂಡ ಇದ್ದವು. ಉತ್ತಮ ಫಾರ್ಮ್‌ನಲ್ಲಿರುವ ಮಧ್ಯೆಯೇ ವಿಲ್​ ಜಾಕ್ಸ್​ ಇಂಗ್ಲೆಂಡ್​ ಮತ್ತೆ ವಾಪಸ್​ ಆಗಲಿದ್ದು, ಇದು ಆರ್​​ಸಿಬಿಗೆ ಆಘಾತ ತಂದಿದೆ. ತೆರವಾಗಲಿರುವ ವಿಲ್ ಜಾಕ್ಸ್ ಸ್ಥಾನವನ್ನು ಗ್ಲೆನ್ ಮ್ಯಾಕ್ಸ್‌ವೆಲ್ ತುಂಬಲಿದ್ದಾರೆಯೇ ಎಂದು ಕಾದು ನೋಡಬೇಕಿದೆ.

ಆರ್‌ಸಿಬಿಯಿಂದ ವಿಲ್​ ಜಾಕ್ಸ್​ ಹಾಗೂ ರೀಸ್ ಟೋಪ್ಲಿ, ಕೆಕೆಆರ್‌ನಿಂದ ಫಿಲ್ ಸಾಲ್ಟ್‌ನಿಂದ, ಚೆನ್ನೈ ಸೂಪರ್ ಕಿಂಗ್ಸ್‌ ತಂಡದಿಂದ ಮೊಯೀನ್ ಅಲಿ, ರಾಜಸ್ಥಾನ ರಾಯಲ್ಸ್‌ ತಂಡದಿಂದ ಜೋಶ್ ಬಟ್ಲರ್ ಸೇರಿದಂತೆ ಪ್ರಮುಖ ಇಂಗ್ಲೆಂಡ್‌ನ ಆಟಗಾರರು ತಮ್ಮ ಫ್ರಾಂಚೈಸಿಗಳನ್ನು ತೊರೆದಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...