ಫ್ರೆಂಚ್ ಓಪನ್ | ದಾಖಲೆಯ 23ನೇ ಗ್ರ್ಯಾಂಡ್ ಸ್ಲಾಮ್ ಕಿರೀಟ ಗೆದ್ದ ನೊವಾಕ್ ಜೊಕೊವಿಕ್

Date:

ನೊವಾಕ್ ಜೊಕೊವಿಕ್ ಟೆನಿಸ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಭಾನುವಾರ ನಡೆದ ಫ್ರೆಂಚ್ ಓಪನ್ ಪುರುಷರ ಸಿಂಗಲ್ಸ್‌ ವಿಭಾಗದ ಫೈನಲ್‌ ಗೆಲ್ಲುವ ಮೂಲಕ, 23ನೇ ಗ್ರ್ಯಾಂಡ್‌ ಸ್ಲ್ಯಾಮ್‌ ಪ್ರಶಸ್ತಿ ಗೆದ್ದ ಮೊದಲ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

- Advertisement -

ಟೆನಿಸ್‌ ಇತಿಹಾಸದಲ್ಲಿ ಅತಿಹೆಚ್ಚು ಗ್ರ್ಯಾಂಡ್ ಸ್ಲಾಮ್ ಕಿರೀಟ ಗೆದ್ದ ದಾಖಲೆ (22), ಇದುವರೆಗೂ ಸ್ಪೇನ್‌ನ ರಾಫೆಲ್ ನಡಾಲ್ ಹೆಸರಿನಲ್ಲಿತ್ತು. ಇದೀಗ  35 ವರ್ಷ ವಯಸ್ಸಿನ ಸರ್ಬಿಯಾದ ದಿಗ್ಗಜ ಆಟಗಾರ  ಜೊಕೊವಿಕ್, ನಡಾಲ್‌ರನ್ನು ಹಿಂದಿಕ್ಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ರೋಲಂಡ್‌ ಗ್ಯಾರೋಸ್‌ನ ಫಿಲಿ‍ಪ್‌ ಚಾಟ್ರಿಯರ್‌ ಕೋರ್ಟ್‌ನಲ್ಲಿ ಭಾನುವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಫೈನಲ್‌ ಪಂದ್ಯದಲ್ಲಿ ನಾರ್ವೆಯ 4ನೇ ಶ್ರೇಯಾಂಕದ ಕ್ಯಾಸ್ಪರ್ ರುಡ್ ಅವರನ್ನು ಜೊಕೊವಿಕ್ ನೇರ ಸೆಟ್‌ಗಳ (7-6, 6-3, 7-5) ಅಂತರದಲ್ಲಿ ಮಣಿಸಿದರು.  

3 ಗಂಟೆ 13 ನಿಮಿಷಗಳ ಕಾಲ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಕ್ಯಾಸ್ಪರ್ ರುಡ್, ಜೊಕೊವಿಕ್‌ಗೆ ಪ್ರಬಲ ಸವಾಲೊಡ್ಡಿದ್ದರು. ಮೊದಲ ಸೆಟ್‌ ಟೈ ಬ್ರೇಕರ್‌ಗೆ ಸಾಗಿತ್ತು. ಎರಡನೇ ಸೆಟ್‌ನಲ್ಲಿ ಜೊಕೊವಿಕ್‌ ಸ್ಪಷ್ಟ ಮೇಲೂಗೈ ಸಾಧಿಸಿದ್ದರು. ಅಂತಿಮ ಮತ್ತು ನಿರ್ಣಾಯಕ ಸೆಟ್‌ನಲ್ಲೂ ಜೊಕೊವಿಕ್‌ ಕೈ ಮೇಲಾಯಿತು.

 14 ಬಾರಿ ಫ್ರೆಂಚ್‌ ಓಪನ್‌ ಚಾಂಪಿಯನ್‌ ಆಗಿರುವ, ʻಆವೆ ಮಣ್ಣಿನ ಅಂಗಳದ ಒಡೆಯʼ ಖ್ಯಾತಿಯ ರಾಫೆಲ್ ನಡಾಲ್, ಗಾಯದ ಕಾರಣದಿಂದ ಇದೇ ಮೊದಲ ಬಾರಿ ಟೂರ್ನಿಯಿಂದ ಹಿಂದೆ ಸರಿದಿದ್ದರು. ಇದು ಜೊಕೊವಿಕ್‌ ದಾಖಲೆಯ ಹಾದಿಯನ್ನು ಸುಗಮಗೊಳಿಸಿತ್ತು.

3ನೇ ಫ್ರೆಂಚ್ ಓಪನ್ ಕಿರೀಟ ಗೆಲ್ಲುವ ಮೂಲಕ ಜೊಕೊವಿಕ್,  ಎಲ್ಲಾ 4 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಕನಿಷ್ಠ ಮೂರು ಬಾರಿ ಗೆದ್ದ ಮೊದಲ ಆಟಗಾರ ಎಂಬ ದಾಖಲೆಯನ್ನೂ ತನ್ನದಾಗಿಸಿಕೊಂಡರು. ತಮ್ಮ ಕೊನೆಯ 7 ಗ್ರ್ಯಾಂಡ್ ಸ್ಲ್ಯಾಮ್ ಫೈನಲ್‌ಗಳ ಪೈಕಿ ಆರರಲ್ಲೂ ದಿಗ್ವಿಜಯ ಸಾಧಿಸಿರುವ ಜೊಕೊವಿಕ್, ಕನಿಷ್ಠ 25 ಗ್ರ್ಯಾಂಡ್ ಸ್ಲ್ಯಾಮ್ ಗೆಲ್ಲುವುದು ಬಹುತೇಕ ಖಚಿತವಾಗಿದೆ.

 ಮಹಿಳಾ ಸಿಂಗಲ್ಸ್‌ನಲ್ಲಿ 23 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳೊಂದಿಗೆ ನಿವೃತ್ತಿ ಘೋಷಿಸಿದ್ದ ಟೆನಿಸ್‌ ದಂತಕಥೆ ಸೆರೆನಾ ವಿಲಿಯಮ್ಸ್‌ ಸಾಧನೆಯನ್ನು ಜೊಕೊವಿಕ್ ಸರಿಗಟ್ಟಿದ್ದಾರೆ.

ರೋಜರ್‌ ಫೆಡರರ್ 2010 ರಲ್ಲಿ 16 ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದಾಗ, ನಡಾಲ್ 9 ಮತ್ತು ಜೊಕೊವಿಕ್ ಕೇವಲ 1 ಗ್ರ್ಯಾಂಡ್ ಸ್ಲಾಮ್ ಕಿರೀಟವನ್ನು ಹೊಂದಿದ್ದರು. ಇದೀಗ 13 ವರ್ಷಗಳ ಬಳಿಕ ಜೊಕೊವಿಕ್, 25 ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳನ್ನು ಗೆಲ್ಲುವ ಅವಕಾಶ ಹೊಂದಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಿವೀಸ್ ಬಗ್ಗುಬಡಿದ ಭಾರತ: ಅಭಿಷೇಕ್ ಶರ್ಮಾ ಸಿಡಿಲಬ್ಬರದ ಶತಕ, 3-0 ಅಂತರದಲ್ಲಿ ಸರಣಿ ಕೈವಶ

ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿರುವ ಹೆನ್ರಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 27ರಂದು ನಡೆದ ಆತಿಥೇಯ ನ್ಯೂಜಿಲೆಂಡ್...

ಕಠಿಣ ಹಾದಿಯಾದರೂ WTC ಫೈನಲ್ ತಲುಪಬಲ್ಲೆವು: ದಕ್ಷಿಣ ಆಫ್ರಿಕಾ ಆಟಗಾರ ಏಡೆನ್ ಮಾರ್ಕ್ರಮ್

ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ (WTC) ಸತತ ಎರಡನೇ ಬಾರಿ ಫೈನಲ್ ತಲುಪುವ...

ಬಡತನವನ್ನು ಬಗ್ಗುಬಡಿದು ಬೆಳೆದ ಛಲಗಾರ – ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ ತಿಲಕ್ ವರ್ಮಾ

ಭಾರತೀಯ ಕ್ರಿಕೆಟ್‌ನ ಭವ್ಯ ಭವಿಷ್ಯದ ಆಶಾಕಿರಣವಾಗಿ ಮೂಡಿಬಂದಿರುವ ಯುವ ಪ್ರತಿಭೆ ತಿಲಕ್...