ಹಿರಿಯ ಕ್ರಿಕೆಟಿಗ ಜಿ ಆರ್ ವಿಶ್ವನಾಥ್‌ಗೆ ಗೌರವ ಡಾಕ್ಟರೇಟ್

Date:

Advertisements

ಮಾಜಿ ಕ್ರಿಕೆಟಿಗ ಜಿ ಆರ್ ವಿಶ್ವನಾಥ್, ಗೋಕುಲ ಶಿಕ್ಷಣ ದತ್ತಿ ಸಂಸ್ಥೆಯ ಅಧ್ಯಕ್ಷ ಎಂ.ಆರ್. ಜಯರಾಮ್‌ ಅವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಲಿಂಗರಾಜ ಗಾಂಧಿ, ಶಿಕ್ಷಣ ಮತ್ತು ಕ್ರೀಡೆಯಲ್ಲಿ ಗಣನೀಯ ಸಾಧನೆ ಮಾಡಿದ ಇಬ್ಬರಿಗೆ ಈ ಬಾರಿ ಡಾಕ್ಟರೇಟ್‌ ನೀಡಲಾಗಿದೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ಜೂನ್‌ 29ರಂದು ಬೆಳಿಗ್ಗೆ 11.30ಕ್ಕೆ ನಡೆಯುವ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? 70ರ ದಶಕದ ಕ್ರಿಕೆಟ್ ಪ್ರಿಯರ ಆರಾಧ್ಯ ದೈವ ಜಿಆರ್‌ ವಿಶ್ವನಾಥ್‌ಗೆ 75ರ ಸಂಭ್ರಮ

Advertisements

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ ಅಧ್ಯಕ್ಷ ಟಿ.ಜಿ. ಸೀತಾರಾಮ್ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.

ವಿಶ್ವವಿದ್ಯಾಲಯದ ಕಾಲೇಜುಗಳಲ್ಲಿ ಒಟ್ಟು 1.40 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 6,424 ಸ್ನಾತಕೋತ್ತರ ವಿದ್ಯಾರ್ಥಿಗಳು, 29,484 ಪದವಿ ವಿದ್ಯಾರ್ಥಿಗಳಿಗೆ ಮೂರನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ನಾಲ್ವರಿಗೆ ಪಿಎಚ್‌.ಡಿ ಪ್ರಧಾನ ಮಾಡಲಾಗುವುದು. ವಿವಿಧ ವಿಭಾಗಗಳ ಒಟ್ಟು 63 ವಿದ್ಯಾರ್ಥಿಗಳು ಚಿನ್ನದ ಪದಕ, ನಗದು ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ ಎಂದರು.

ಕುಲಸಚಿವ ಟಿ.ಜವರೇಗೌಡ, ಪರಿಕ್ಷಾಂಗ ಕುಲಸಚಿವ ಸಿ.ಎಸ್‌. ಆನಂದ ಕುಮಾರ್‌, ಹಣಕಾಸು ಅಧಿಕಾರಿ ಎಂ.ವಿಜಯಲಕ್ಷ್ಮಿ ಅವರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯಾಕಪ್​ಗೆ ಅಚ್ಚರಿಯ ಭಾರತ ತಂಡ ಪ್ರಕಟ; ಹಲವರಿಗೆ ಕೊಕ್‌, ಪ್ರಮುಖರ ಆಗಮನ

ಮಹತ್ವದ ಟಿ20 ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X