ಇಂಡಿಯನ್ ಕ್ರಿಕೆಟ್ ಟೀಮ್‌ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

Date:

ಟೀಂ ಇಂಡಿಯಾ ಪುರುಷರ ತಂಡದ ಮುಖ್ಯ ಕೋಚ್‌ ಆಗಿ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್‌ ಗಂಭೀರ್‌ ಅವರನ್ನು ಬಿಸಿಸಿಐ ಇಂದು ನೇಮಕ ಮಾಡಿದೆ.

- Advertisement -

ಟಿ20 ವಿಶ್ವಕಪ್‌ ನಂತರ ರಾಹುಲ್‌ ದ್ರಾವಿಡ್ ಅವರ ಕೋಚ್‌ ಅವಧಿ ಮುಕ್ತಾಯಗೊಂಡಿತ್ತು. ಗಂಭೀರ್‌ ಕೋಚ್‌ ಆಗುವುದು ಬಹುತೇಕ ಖಚಿತವಾಗಿದ್ದರೂ ಅಧಿಕೃತ ಆದೇಶ ಮಾತ್ರ ಬಾಕಿಯುಳಿದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಗೌತಮ್‌ ಗಂಭೀರ್ ಅವರನ್ನು ಭಾರತ ತಂಡದ ಮುಖ್ಯ ಕೋಚ್‌ ಆಗಿ ನೇಮಕ ಮಾಡುವುದಕ್ಕೆ ಅಪಾರ ಸಂತಸವಾಗುತ್ತಿದೆ. ಆಧುನಿಕ ಕ್ರಿಕೆಟ್ ತ್ವರಿತವಾಗಿ ವಿಕಸಿತವಾಗುತ್ತಿದ್ದು, ಗೌತಮ್‌ ಅವರು ಇದನ್ನು ಉನ್ನತ ಹಂತದಲ್ಲಿ ಬದಲಿಸುವಲ್ಲಿ ಪ್ರಮುಖ ಕಾರಣಕರ್ತರಾಗಿದ್ದಾರೆ. ಅವರು ತಮ್ಮ ವೃತ್ತಿಯುದ್ದಕ್ಕೂ ಹೋರಾಟದ ಹಾದಿಯೊಂದಿಗೆ ಹಲವು ಮೈಲಿಗಲ್ಲು ಸಾಧಿಸಿದ್ದಾರೆ. ಭಾರತ ಕ್ರಿಕೆಟ್ ತಂಡ ಬೆಳವಣಿಗೆ ಸಾಧಿಸಲು ಗೌತಮ್‌ ಒಬ್ಬ ಆದರ್ಶ ವ್ಯಕ್ತಿಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೇರಳ ಕ್ರಿಕೆಟ್ ಸಂಸ್ಥೆಯ ಕೋಚ್‌ನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ

ಇವರ ಸ್ಪಷ್ಟ ಉದ್ದೇಶ ಟೀಂ ಇಂಡಿಯಾವನ್ನು ತಮ್ಮ ಅದ್ಭುತ ಅನುಭವದೊಂದಿಗೆ ಉನ್ನತ ಹಂತಕ್ಕೆ ಕೊಂಡೊಯ್ಯುವುದು. ಬಿಸಿಸಿಐ ಇವರ ನೂತನ ಹಾದಿಗೆ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಜಯ್‌ ಶಾ ಹೇಳಿದ್ದಾರೆ.

ಗೌತಮ್‌ ಗಂಭೀರ್ 240ಕ್ಕೂ ಹೆಚ್ಚು ಟೆಸ್ಟ್‌, ಏಕದಿನ, ಟಿ20 ಪಂದ್ಯಗಳನ್ನು ಆಡಿದ್ದು 10 ಸಾವಿರಕ್ಕೂ ಹೆಚ್ಚು ರನ್‌ ಪೇರಿಸಿದ್ದಾರೆ. ಗಂಭೀರ್ 2011ರ ಏಕದಿನ ವಿಶ್ವಕಪ್‌ ವಿಜೇತ ಟೀಂ ಇಂಡಿಯಾದ ಸದಸ್ಯರಾಗಿದ್ದರು. ಕೆಕೆಆರ್‌ ಸಾರಥ್ಯ ವಹಿಸಿದ್ದ ಗಂಭೀರ್‌ ಎರಡು ಬಾರಿ ಕಪ್‌ ಜಯಿಸಲು ಕಾರಣವಾಗಿದ್ದರು.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...