ಒಂದು ಬಾರಿ ಪ್ರಶಸ್ತಿ ಗೆಲ್ಲುವುದೇ ಕಷ್ಟ; ಕೊಹ್ಲಿ ಕಾಲೆಳೆದ ಗೌತಮ್‌ ಗಂಭೀರ್

Date:

ಐಪಿಎಲ್‌ 16ನೇ ಆವೃತ್ತಿಗೆ ತೆರೆ ಬಿದ್ದರೂ ಸಹ ಲಖನೌ ತಂಡದ ಮಾರ್ಗದರ್ಶಕ ಗೌತಮ್ ಗಂಭೀರ್‌ ಅವರಿಗೆ ವಿರಾಟ್‌ ಕೊಹ್ಲಿ ಮೇಲಿನ ಕೋಪ ಇನ್ನೂ ಕಡಿಮೆಯಾದಂತೆ ಅನಿಸುತ್ತಿಲ್ಲ.

- Advertisement -

ಅಹಮದಾಬಾದ್‌ನಲ್ಲಿ ಸೋಮವಾರ ತಡರಾತ್ರಿ ನಡೆದ ರೋಮಾಂಚನಕಾರಿ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡವನ್ನು ಮಣಿಸಿ ಎಂಎಸ್‌ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 5ನೇ ಬಾರಿಗೆ ಚಾಂಪಿಯನ್‌ ಪಟ್ಟವನ್ನೇರಿತ್ತು. ಆ ಮೂಲಕ ಐಪಿಎಲ್‌ನಲ್ಲಿ ಅತಿಹೆಚ್ಚು ಪ್ರಶಸ್ತಿ ಗೆದ್ದ ಮುಂಬೈ ಇಂಡಿಯನ್ಸ್‌ ದಾಖಲೆಯನ್ನು ಸಿಎಸ್‌ಕೆ ಸರಿಗಟ್ಟಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪಂದ್ಯದ ಬಳಿಕ ಟ್ವೀಟ್‌ ಮಾಡಿದ ಲಖನೌ ಸೂಪರ್‌ ಜೈಂಟ್ಸ್‌ ತಂಡದ ಮೆಂಟರ್‌ ಗೌತಮ್ ಗಂಭೀರ್‌, “ಸಿಎಸ್‌ಕೆ ತಂಡಕ್ಕೆ ಅಭಿನಂದನೆಗಳು. ಐಪಿಎಲ್‌ನಲ್ಲಿ ಒಂದು ಬಾರಿ ಪ್ರಶಸ್ತಿ ಗೆಲ್ಲುವುದೇ ಕಷ್ಟ. ಐದು ಬಾರಿ ಪ್ರಶಸ್ತಿ ಗೆಲ್ಲುವುದು ನಂಬಲಾಗದ ಸಾಧನೆ” ಎಂದಿದ್ದಾರೆ.

ಒಂದು ಕಡೆ ಧೋನಿ ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸಿದ ಗಂಭೀರ್‌ ಮತ್ತೊಂದೆಡೆ ಕಳೆದ 16 ಆವೃತ್ತಿಯಲ್ಲೂ ಒಮ್ಮೆಯೂ ಐಪಿಎಲ್‌ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದ ವಿರಾಟ್‌ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್‌ಸಿಬಿ ತಂಡಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

ಗಂಭೀರ್‌-ಕೊಹ್ಲಿ ಚಕಮಕಿ

ಈ ಬಾರಿಯ ಐಪಿಎಲ್‌ನ ಲೀಗ್‌ ಹಂತದಲ್ಲಿ ಲಖನೌ ತಂಡ ತನ್ನ ತವರು ಮೈದಾನದಲ್ಲಿ ಆರ್‌ಸಿಬಿ ತಂಡಕ್ಕೆ 18 ರನ್‌ಗಳಿಂದ ಶರಣಾಗಿತ್ತು. ಪಂದ್ಯದ ಬಳಿಕ ಎರಡೂ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ನೀಡುತ್ತಿದ್ದ ವೇಳೆ, ವಿರಾಟ್‌ ಕೊಹ್ಲಿ ಮತ್ತು ಗೌತಮ್‌ ಗಂಭೀರ್ ನಡುವೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...